District stadium in Doddaballapur.. Rs. 25 crore sanctioned: K.H. Muniyappa

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ಬೆಂ.ಗ್ರಾ.ಜಿಲ್ಲೆ: ಸರ್ಕಾರಿ ನೌಕರರು ದೈನಂದಿನ ವೃತ್ತಿಯ ಜೊತೆಗೆ ಕ್ರೀಡೆ, ವ್ಯಾಯಾಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ದೈಹಿಕವಾಗಿ, ಮಾನಸಿಕವಾಗಿ ಆರೋಗ್ಯ ವೃದ್ಧಿಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದಲ್ಲಿ ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರು ಜೀವನದಲ್ಲಿ ಆರೋಗ್ಯ ಮತ್ತು ದೇಹದ ಸದೃಢತೆಯನ್ನು ಕಾಪಾಡಿಕೊಳ್ಳುವುದು ಮುಖ್ಯ, ದೈನಂದಿನ ಜೀವನದಲ್ಲಿ ಗುಣಮಟ್ಟದ ಆಹಾರ ಸೇವನೆ ಜೊತೆಗೆ ಕ್ರೀಡೆ, ವ್ಯಾಯಾಮ, ಯೋಗದಲ್ಲಿ ನೋಡಿಕೊಳ್ಳಬೇಕು. ಸರ್ಕಾರಿ ನೌಕರರು ಕೆಲಸ ಕೆಲವು ಸಂದರ್ಭಗಳಲ್ಲಿ ಒತ್ತಡದಿಂದ ಕೂಡಿರಬಹುದು, ಒತ್ತಡದ ಜೀವನ ನಿವಾರಣೆಗೆ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಇದರಿಂದ ಉತ್ತಮ ಪ್ರಜೆ ಆಗಲು, ಕೆಲಸದ ಮೇಲಿನ ಆಸಕ್ತಿ ಹೆಚ್ಚಾಗಲಿದೆ ಎಂದರು.

ಜಿಲ್ಲಾ ಮಟ್ಟದಲ್ಲಿ ವಿಜೇತರಾಗಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಜಿಲ್ಲೆಗೆ ಕೀರ್ತಿ ತರಬೇಕು. ಸರ್ಕಾರಿ ನೌಕರರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದರು.

ದೇವನಹಳ್ಳಿ ಟೌನ್ ಕ್ರೀಡಾಂಗಣ ಅಭಿವೃದ್ಧಿಗೆ 13.5 ಕೋಟಿ ನಿಗದಿ ಮಾಡಲಾಗಿದೆ, ಒಂದು ವರ್ಷದೊಳಗೆ ಆಧುನಿಕ ಕ್ರೀಡಾಂಗಣವಾಗಿ ಅಭಿವೃದ್ಧಿ ಆಗಲಿದೆ. ಇದರಿಂದ ನಗರವಾಸಿಗಳಿಗೆ ಅನುಕೂಲವಾಗಲಿದೆ.

ಹಾಗೇಯೇ ವಿಜಯಪುರ ರಸ್ತೆಯಲ್ಲಿ ಇರುವ ತಾಲ್ಲೂಕು ಕ್ರೀಡಾಂಗಣ ಅಭಿವೃದ್ಧಿಗೆ ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯರಾದ ಸುಧಾಕರ್ ಅವರು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ ಅದನ್ನು ಕೂಡ ರಾಷ್ಟ್ರ ಮಟ್ಟದ ಕ್ರೀಡಾಂಗಣವಾಗಿ ಅಭಿವೃದ್ಧಿ ಮಾಡಲಾಗುವುದು ಎಂದರು.

ದೊಡ್ಡಬಳ್ಳಾಪುರ ಆದಿನಾರಾಯಣ ಹೊಸಹಳ್ಳಿ ಗ್ರಾಮದಲ್ಲಿ ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ 25 ಕೋಟಿ ರೂ.ಗಳು ಮಂಜೂರು ಆಗಿದೆ. ಶೀಘ್ರ ಶಿಲಾನ್ಯಾಸ ಮಾಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ರಾಜಣ್ಣ, ಬಯಪ ಅಧ್ಯಕ್ಷರಾದ ಶಾಂತಕುಮಾರ್, ತಹಶೀಲ್ದಾರ್ ಅನಿಲ್, ಇಒ ಶ್ರೀನಾಥ್ ಗೌಡ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗೀತಾ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಹನುಮಂತರಾಯಪ್ಪ, ಸ್ಥಳೀಯ ಜನಪ್ರತಿನಿಧಿಗಳು, ಸರ್ಕಾರಿ ನೌಕರರು ಉಪಸ್ಥಿತರಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ: ಗ್ರಾಪಂ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆ ಕುಂದುಕೊರತೆ ಸಭೆ ಆರಂಭ

ದೊಡ್ಡಬಳ್ಳಾಪುರ: ಗ್ರಾಪಂ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆ ಕುಂದುಕೊರತೆ ಸಭೆ ಆರಂಭ

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ (Guarantee scheme) ಕುರಿತಾದ ಕುಂದುಕೊರತೆ ಸಭೆಯನ್ನು ಕನಸವಾಡಿ ಗ್ರಾಮ ಪಂಚಾಯಿತಿ, ಚನ್ನಾದೇವಿ ಅಗ್ರಹಾರ ಗ್ರಾಮ ಪಂಚಾಯಿತಿ ಹಾಗೂ ದೊಡ್ಡ ತುಮಕೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಸಲಾಗಿದೆ.

[ccc_my_favorite_select_button post_id="118997"]
ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ: ಆರ್. ಅಶೋಕ

ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ: ಆರ್. ಅಶೋಕ

ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧವಾಗಿ ಮಾತಾಡುವ ಅಧಿಕಾರ ಯಾರಿಗೂ ಇಲ್ಲ. ಕಾಯ್ದೆ ಜಾರಿಯ ನಂತರ ಅದನ್ನು ಟೀಕೆ ಮಾಡುವ ನೈತಿಕತೆ ಇರುವುದಿಲ್ಲ: ಆರ್. ಅಶೋಕ (R. Ashoka)

[ccc_my_favorite_select_button post_id="118949"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ಮೃತ್ಯು ಕೂಪವಾಗುತ್ತಿವೆ ಹೆದ್ದಾರಿಗಳು.. ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಒಂದೇ ವರ್ಷದಲ್ಲಿ 85 ಮಂದಿ ದುರ್ಮರಣ..!

ಮೃತ್ಯು ಕೂಪವಾಗುತ್ತಿವೆ ಹೆದ್ದಾರಿಗಳು.. ದೊಡ್ಡಬಳ್ಳಾಪುರ ವ್ಯಾಪ್ತಿಯಲ್ಲಿ ಒಂದೇ ವರ್ಷದಲ್ಲಿ 85 ಮಂದಿ ದುರ್ಮರಣ..!

2025ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ 85ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದಿದ್ದ ಅಪಘಾತ (Accident) ಪ್ರಕರಣಗಳು 2026ರ ಆರಂಭದಲ್ಲಿಯೂ ಮುಂದುವರಿದೆ.

[ccc_my_favorite_select_button post_id="118962"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!