Doddaballapura: Guarantee scheme grievance meeting begins in Gram Panchayat limits

ದೊಡ್ಡಬಳ್ಳಾಪುರ: ಗ್ರಾಪಂ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆ ಕುಂದುಕೊರತೆ ಸಭೆ ಆರಂಭ

ದೊಡ್ಡಬಳ್ಳಾಪುರ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ (Guarantee scheme) ಕುರಿತಾದ ಕುಂದುಕೊರತೆ ಸಭೆಯನ್ನು ಕನಸವಾಡಿ ಗ್ರಾಮ ಪಂಚಾಯಿತಿ, ಚನ್ನಾದೇವಿ ಅಗ್ರಹಾರ ಗ್ರಾಮ ಪಂಚಾಯಿತಿ ಹಾಗೂ ದೊಡ್ಡ ತುಮಕೂರು ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಸಲಾಗಿದೆ.

ಸಭೆಯಲ್ಲಿ ಪ್ರಮುಖವಾಗಿ ಪಡಿತರ ಚೀಟಿ ವಿಳಂಬಕ್ಕೆ ಸ್ಥಳದಲ್ಲಿಯೇ ಪರಿಹಾರ, ಗೃಹಲಕ್ಷ್ಮಿ ಹಣ ಬರುತ್ತಿಲ್ಲವೆಂದು ತಿಳಿಸಿದ ಫಲಾನುಭವಿಗಳ ಅಕೌಂಟ್ ಪರಿಶೀಲನೆ ಮಾಡಿದಾಗ ಪ್ರತಿ ಬಾರಿ ಯೋಜನೆಯ ಖಾತೆಗೆ ಸಂದಾಯವಾಗಿರುವುದು.

ಕೆಲವು ಫಲಾನುಭವಿಗಳು 2,3 ಬ್ಯಾಂಕ್ ಖಾತೆ ಹೊಂದಿರುವ ಗೊಂದಲದ ಪರಿಹಾರ, ಕೆಲವರ BPL ಕಾರ್ಡ್ APL ಕಾರ್ಡ್ ಆಗಿ ಬದಲಾವಣೆಯಾಗಿರುವುದಕ್ಕೆ ಕಾರಣ ವಿವರಿಸಲಾಯಿತು. ಇದರಲ್ಲಿ ಪ್ರಮುಖವಾಗಿ ಆದಾಯ ತೆರಿಗೆ ಪಾವತಿ, GST, ಸ್ವಂತ ಕಾರು ಹೊಂದಿರುವುದಾಗಿದೆ.

ಇನ್ನೂ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅದ್ಯಕ್ಷ ಎನ್. ವಿಶ್ವನಾಥ ರೆಡ್ಡಿ ಮಾತನಾಡಿ, ಗ್ಯಾರಂಟಿ ಯೋಜನೆಗಳ ಕುಂದು ಕೊರತೆ ನಿವಾರಣೆ ಶಿಬಿರಗಳಲ್ಲಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಪಾಲ್ಗೊಂಡು ಫಲಾನುಭವಿಗಳ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಲಾಗಯತ್ತಿದೆ.

ವಿರೋಧ ಪಕ್ಷಗಳ ಸುಳ್ಳು ಆರೋಪದ ನಡುಗೆಯೂ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದು, ಐದು ಗ್ಯಾರಂಟಿ ಯೋಜನೆಗಳು ಕುಟುಂಬದ ಆರ್ಥಿಕ ಸದೃಢತೆಗೆ‌ ನೆರವಾಗಿದೆ.

ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ₹2,000/- ನೀಡುತ್ತಿರುವುದರಿಂದ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಿದ್ದಾರೆ.

200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಒದಗಿಸುತ್ತಿರುವುದರಿಂದ ಮಧ್ಯಮ ಮತ್ತು ಬಡ ಕುಟುಂಬಗಳ ಆರ್ಥಿಕ ಹೊರೆ ಕಡಿಮೆ ಆಗಿದೆ.

ಪ್ರತಿಯೊಬ್ಬರಿಗೂ ಉಚಿತ ಅಕ್ಕಿ ಮತ್ತು ಪೌಷ್ಟಿಕ ಆಹಾರ ನೀಡುವ ಮೂಲಕ ಹಸಿವು ಮುಕ್ತ ರಾಜ್ಯ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ.

ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೊಮಾ ದಾರಿಗಳಿಗೆ ಉದ್ಯೋಗ ಕಂಡುಕೊಳ್ಳುವ ವರೆಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ಈ ಯೋಜನೆಗಳ ಮೂಲಕ ಸಾಮಾಜಿಕ ಸಮಾನತೆ ಮತ್ತು ಆರ್ಥಿಕ ಸ್ಥಿರತೆಯನ್ನು ಸಾಧಿಸುವ ಮೂಲಕ ಗ್ಯಾರೆಂಟಿ ಯೋಜನೆಗಳು ಕೇವಲ ಭರವಸೆಗಳಲ್ಲ, ಇವು ಜನರ ಜೀವನ ಮಟ್ಟವನ್ನು ಸುಧಾರಿಸಿವೆ.

ಗ್ಯಾರಂಟಿ ಯೋಜನೆಗಳ ಬಗ್ಗೆ ಕೇವಲ ನಮ್ಮ ರಾಜ್ಯ ಮಾತಾಡ್ತಾ ಇತ್ತು, ಇಂದು ದೇಶ ಮಾತಾಡುತ್ತಿದೆ. ಯಾರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ವಿರೋಧಿಸಿ ಟೀಕೆ ಮಾಡಿದ್ದರೋ ಅವರೆ ಇಂದು ಕರ್ನಾಟಕದ ಗ್ಯಾರಂಟಿಗಳನ್ನು ಮಾದರಿಯಾಗಿಟ್ಟುಕೊಂಡು ಬೇರೆ ರಾಜ್ಯಗಳಾದ ಮದ್ಯಪ್ರದೇಶ, ಹರಿಯಾಣ, ದೆಹಲಿ ರಾಜ್ಯಗಳಲ್ಲಿ ಘೋಷಣೆ ಮಾಡಿದ್ದಾರೆ.

ಯಾರು ಮೈಕ್ ಹಿಡಿದುಕೊಂಡು ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡ್ತಿದ್ದಾರೋ ಅವರ ಮನೆಯ ಹೆಂಗಸರು ಗೃಹ ಲಕ್ಷ್ಮಿ ಯೋಜನೆಯನ್ನು, ಅನ್ನಭಾಗ್ಯ ಯೋಜನೆಯಡಿ ಅಕ್ಕಿ, ಶಕ್ತಿ ಯೋಜನೆಯಡಿ ಬಸ್ಸಿನಲ್ಲಿ ಪ್ರಯಾಣ, ಗೃಹ ಜ್ಯೋತಿಯಡಿ ವಿದ್ಯುತ್ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ ಎಂದರು.

ಸಭೆಯಲ್ಲಿ ದೊಡ್ಡಬಳ್ಳಾಪುರ ಯೋಜನಾ ಪ್ರಧಿಕಾರದ ಅಧ್ಯಕ್ಷ ಚುಂಚೇಗೌಡ, ಕಾಂಗ್ರೆಸ್ ಮುಖಂಡ ರಾಮಣ್ಣ, ಗ್ಯಾರಂಟಿ ಸದಸ್ಯರಾದ ನಂಜಪ್ಪ, ನಾಗೇಶ್, ಮಂಜುಳ, ಮಹೇಶ್ವರಿ, ತಿಮ್ಮರಾಯ ಗೌಡ, ಆಹಾರ ಶಿರಸ್ತೇದಾರರು ಶ್ರೀಧರ್, ಅನಂತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ಮಲಾ, ಕೌಶಲ್ಯ ಮತ್ತು ತರಬೇತಿ ಇಲಾಖೆ ಶೋಭಾ , ಕೆಎಸ್‌ಆರ್‌ಟಿಸಿ ವಿಭಾಗದ ಗೀತಾ, ಬೆಸ್ಕಾಂ ಇಲಾಖಡಯ ಹನುಮಂತೆ ಗೌಡ ಮತ್ತಿತರರಿದ್ದರು.

ರಾಜಕೀಯ

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ

“ಬೆಂಗಳೂರಿನಲ್ಲಿರುವ ಹೆಚ್ಎಎಲ್, ಜಕ್ಕೂರು, ವಾಯುನೆಲೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಕಟ್ಟಡ ಎತ್ತರದ ಮಿತಿಯಿಂದ ಅಭಿವೃದ್ಧಿ ಕಾಮಗಾರಿಗೆ ತೊಡಕಾಗಿದ್ದು, ಈ ಮಿತಿಯ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ನಾಗರೀಕ ವಿಮಾನಯಾನ ಸಚಿವರಿಗೆ ಮನವಿ

[ccc_my_favorite_select_button post_id="120305"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!