Doddaballapur: Sir CV Raman book launch

ದೊಡ್ಡಬಳ್ಳಾಪುರ: ಸರ್ ಸಿ.ವಿ.ರಾಮನ್ ಪುಸ್ತಕ ಬಿಡುಗಡೆ

ದೊಡ್ಡಬಳ್ಳಾಪುರ: ಕನ್ನಡ ಪುಸ್ತಕ ಓದಿ ಬಹುಮಾನ ಗೆಲ್ಲಿ’ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಮತ್ತು ಸಾರ್ವಜನಿಕರಲ್ಲಿ ಕನ್ನಡ ಓದುವ ಹವ್ಯಾಸವನ್ನು ಉತ್ತೇಜಿಸುತ್ತಿರುವ ಅತ್ಯಂತ ಶ್ಲಾಘನೀಯವಾಗಿದೆ ಎಂದು ಸಿ.ವಿ.ರಾಮನ್ (Sir C.V. Raman) ಪುಸ್ತಕ ಪ್ರಕಟಣೆಯ ಪ್ರಾಯೋಜಕರಾದ ಎಸ್.ಶ್ರೀಕಾಂತ್ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ನಗರದ ಕನ್ನಡ ಜಾಗೃತ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಜಾಗೃತ ಪರಿಷತ್ತು, ವಿಕಾಸ ಪ್ರಕಾಶ ಸಂಸ್ಥೆ ಎಸ್.ರಾಜಲಕ್ಷ್ಮಿ ಸ್ಮರಣಾರ್ಥ ಪ್ರಕಟಿಸಿರುವ ನೋಬಲ್ ಪ್ರಶಸ್ತಿ ಪುರಸ್ಕೃತ ವಿಜ್ಞಾನಿ ಸರ್ ಸಿ.ವಿ.ರಾಮನ್  ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಪುಸ್ತಕ ಓದುವ ಸ್ಪರ್ಧೆಯು ಜ್ಞಾನಾರ್ಜನೆಯನ್ನು ಪ್ರೋತ್ಸಾಹಿಸುವುದರ ಜೊತೆಗೆ, ಪುಸ್ತಕಗಳ ಪ್ರೀತಿಯನ್ನು ಬೆಳೆಸುತ್ತದೆ. ಇಂತಹ ಕಾರ್ಯಕ್ರಮಗಳು ಓದುಗರನ್ನು ಪುಸ್ತಕಗಳ ಮೂಲಕ ಜಗತ್ತಿನ ಅರಿವು ಮೂಡಿಸಲು ಪರಿಣಾಮಕಾರಿ ಮಾರ್ಗವಾಗಿದೆ. ಪುಸ್ತಕ ಓದಿ ಬಹುಮಾನ ಗೆಲ್ಲಿ ಕಾರ್ಯಕ್ರಮ ಸ್ಪರ್ಧಾತ್ಮಕ ಮನೋಭಾವವನ್ನು ಹೆಚ್ಚಿಸುತ್ತದೆ ಎಂದರು.

ಕನ್ನಡ ಜಾಗೃತ ಪರಿಷತ್ತು ಟ್ರಸ್ಟಿ  ಎಸ್.ಮಹಾಬಲೇಶ್ವರ್ ಮಾತನಾಡಿ,  ಮೊಬೈಲ್ ವ್ಯಸನವು ವಿದ್ಯಾರ್ಥಿಗಳಲ್ಲಿ ಓದಿನಿಂದ ಗಮನವನ್ನು ಬೇರೆಡೆಗೆ ಸೆಳೆಯುತ್ತದೆ. ಇದು ಮುಖಾಮುಖಿ ಸಂವಹನವನ್ನು ಕಡಿಮೆ ಮಾಡಿ, ಸಾಮಾಜಿಕ ಪ್ರತ್ಯೇಕತೆಗೆ ಕಾರಣವಾಗುತ್ತದೆ. ಅತಿಯಾದ ಮೊಬೈಲ್ ಬಳಕೆ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಆರೋಗ್ಯದ ಮೇಲೆ ಗಂಭೀರ ದುಷ್ಪರಿಣಾಮ ಬೀರುತ್ತದೆ ಎಂದರು.

ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಎಂ.ಬಿ.ಗುರುದೇವ್ ಮಾತನಾಡಿ, ಸರ್ ಸಿ.ವಿ. ರಾಮನ್ ಅವರು ಅಸಾಧಾರಣ ಸಮಯಪ್ರಜ್ಞೆ ಮತ್ತು ಕಟ್ಟುನಿಟ್ಟಿನ ಶಿಸ್ತಿಗೆ ಹೆಸರಾಗಿದ್ದರು.  ಸಿ.ವಿ.ರಾಮನ್ ಜೀವನದ ಕೊನೆಯವರೆಗೂ ಸಂಶೋಧನೆ ಮತ್ತು ಅಧ್ಯಯನದಲ್ಲಿ ನಿರತರಾಗಿ, ಶಿಸ್ತಿನ ಪ್ರತಿರೂಪವಾಗಿ ಬದುಕಿದವರು. 

ರಾಮನ್ ಅವರ ಜನಪ್ರಿಯ ಆವಿಷ್ಕಾರ ‘ರಾಮನ್ ಎಫೆಕ್ಟ್’ ಪ್ರಕಟವಾದ ದಿನದ ನೆನಪಿಗಾಗಿ ಫೆಬ್ರವರಿ 28 ಅನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ ಎಂದರು.

ಜನಪ್ರಿಯ ವಿಜ್ಞಾನ ಸಾಹಿತಿ ಡಾ.ಎ.ಓ.ಆವಲಮೂರ್ತಿ ಮಾತನಾಡಿ,  ಶ್ರೀ ಕೊಂಗಾಡಿಯಪ್ಪ. ವಿದ್ಯಾಸಂಸ್ಥೆಯ ನಿರ್ದೇಶಕಿಯಾಗಿದ್ದ ಎಸ್.ರಾಜಲಕ್ಷ್ಮಿ ಅವರ ಸ್ಮರಣಾರ್ಥ ಸಿ.ವಿ.ರಾಮನ್ ಪುಸ್ತಕ ಪ್ರಕಟಿಸಲಾಗಿದೆ. ಈ ಪುಸ್ತಕವನ್ನು ಪುಸ್ತಕ ಓದಿ ಬಹುಮಾನ ಗೆಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಆಯ್ಕೆ ಮಾಡಲಾಗಿದೆ.

ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಯುಕ್ತ ನಡೆಯುತ್ತಿರುವ ಕನ್ನಡ ಪುಸ್ತಕ ಓದಿ ಬಹುಮಾನ ಗೆಲ್ಲಿ ‌ಸ್ಪರ್ಧಾತ್ಮಕ ಪರೀಕ್ಷೆ  ಫೆ.22 ರಂದು ನಡೆಯಲಿದೆ. ಈ ಸ್ಪರ್ಧಾತ್ಮಕ ಪರೀಕ್ಷೆಗೆ ನೂರು ವಿದ್ಯಾರ್ಥಿಗಳನ್ನು ಪ್ರೇರಣೆ ಮಾಡಿದವರಿಗೆ ಕನ್ನಡ ಪ್ರೇರಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಸಿ.ವಿ. ರಾಮನ್ ಪುಸ್ತಕ ಸಂಪಾದಕ ಮಂಡಲಿಯ ಸದಸ್ಯರುಗಳಾದ ಪಿ.ಗೋವಿಂದರಾಜು, ಎಚ್.ಎನ್.ಪ್ರಕಾಶ್, ಡಿ.ಪುಷ್ಪವತಿ, ಸಂಚಾಲಕ ಸಿ.ವೆಂಕಟರಾಜು, ನಗರಸಭಾ ಮಾಜಿ ಸದಸ್ಯ ಜಿ.ಸತ್ಯನಾರಾಯಣ್, ನಿವೃತ್ತ ಉಪನ್ಯಾಸಕರುಗಳಾದ ಎಸ್.ಇಕ್ಬಾಲ್ ಅಹಮದ್, ಜಿ.ಸತ್ಯನಾರಾಯಣ, ಕನ್ನಡ ಜಾಗೃತ ಪರಿಷತ್ತು ಕಾರ್ಯದರ್ಶಿ ಡಿ.ಪಿ.ಆಂಜನೇಯ, ಕನ್ನಡಪರ ಸಂಘಟನೆಗಳ ಮುಖಂಡರುಗಳಾದ  ಸಂಜೀವ್ ನಾಯಕ್, ಗುರುರಾಜಪ್ಪ, ಡಿ.ವೆಂಕಟೇಶ್, ಕನ್ನಡ ಸಾಹಿತ್ಯ ಪರಿಷತ್ತು ಮತ್ತು ವಿವಿಧ ಸಂಘಟನೆಯ ಪದಾಧಿಕಾರಿಗಳಾದ ಜಿ.ಸುರೇಶ್, ಕೋದಂಡರಾಮ್, ಸಿ.ಅಣ್ಣಯ್ಯ, ರಂಗಸ್ವಾಮಯ್ಯ, ಸೂರ್ಯನಾರಾಯಣ್,  ಮುಖ್ಯಶಿಕ್ಷಕಿ ಲಕ್ಷ್ಮೀಕಾಂತಮ್ಮ, ಕರಾಟೆ ಶ್ರೀನಿವಾಸ್ ಮುಂತಾದವರು ಭಾಗವಹಿಸಿದ್ದರು.

ರಾಜಕೀಯ

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ

“ಬೆಂಗಳೂರಿನಲ್ಲಿರುವ ಹೆಚ್ಎಎಲ್, ಜಕ್ಕೂರು, ವಾಯುನೆಲೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಕಟ್ಟಡ ಎತ್ತರದ ಮಿತಿಯಿಂದ ಅಭಿವೃದ್ಧಿ ಕಾಮಗಾರಿಗೆ ತೊಡಕಾಗಿದ್ದು, ಈ ಮಿತಿಯ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ನಾಗರೀಕ ವಿಮಾನಯಾನ ಸಚಿವರಿಗೆ ಮನವಿ

[ccc_my_favorite_select_button post_id="120305"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!