ಬೆಂ.ಗ್ರಾ. ಜಿಲ್ಲೆ: ರೇಷ್ಮೆಇಲಾಖೆ ವತಿಯಿಂದ 2023-24 ಹಾಗೂ 2024-25ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ (Sericulture Award) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಗತಿ ಪರ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ (Applications invited) ಎಂದು ರೇಷ್ಮೆ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ರೇಷ್ಮೆಬೆಳೆಗಾರರು ಕನಿಷ್ಠ 1.00 ಎಕರೆ ಹಿಪ್ಪುನೇರಳೆ ವಿಸ್ತೀರ್ಣ ಹೊಂದಿರಬೇಕು. ಪ್ರತ್ಯೇಕ ಹುಳುಸಾಕಾಣಿಕಾ ಮನೆ ಹೊಂದಿರಬೇಕು. 100 ರೇಷ್ಮೆ ಮೊಟ್ಟೆಗೆ ಸರಾಸರಿ ರೇಷ್ಮೆ ಗೂಡಿನ ಇಳುವರಿ 65 ಕೆ.ಜಿ.ಗಿಂತ ಕಡಿಮೆ ಇರಬಾರದು.
ಒಂದು ಎಕರೆಗೆ ರೇಷ್ಮೆ ಗೂಡಿನ ಸರಾಸರಿ ಉತ್ಪಾದನೆ 500 ಕೆ.ಜಿ.ಗಿಂತ ಕಡಿಮೆ ಇರಬಾರದು. ಕನಿಷ್ಟ 2 ದ್ವಿತಳಿ ಬೆಳೆ ಬೆಳೆದಿರಬೇಕು.
ರೇಷ್ಮೆಬೆಳೆಗಾರರು ಆಯಾ ವರ್ಷದ ರೇಷ್ಮೆ ಪಾಸ್ ಪುಸ್ತಕ, ರೇಷ್ಮೆ ಮೊಟ್ಟೆ / ಚಾಕಿ ಖರೀದಿಸಿರುವ ಬಗ್ಗೆ ಹಾಗೂ ರೇಷ್ಮೆಗೂಡು ಮಾರಾಟ ಮಾಡಿರುವ ಬಗ್ಗೆ ಸೂಕ್ತ ದಾಖಲೆಗಳನ್ನು ಹೊಂದಿರಬೇಕು.
ಈ ಎಲ್ಲಾ ಅರ್ಹತೆ ಹೊಂದಿರುವ ರೇಷ್ಮೆ ಬೆಳೆಗಾರರು ಆಯಾ ತಾಲೂಕಿನ ಸ್ಥಳೀಯ ರೇಷ್ಮೆ ಕೃಷಿ ವಿಸ್ತರಣಾಧಿಕಾರಿಗಳು/ ರೇಷ್ಮೆ ಸಹಾಯಕ ನಿರ್ದೇಶಕರವರ ಕಛೇರಿಯನ್ನು ಸಂಪರ್ಕಿಸಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಅರ್ಜಿ ಪಡೆಯುವುದು.
ಭರ್ತಿ ಮಾಡಿದ ಅರ್ಜಿಯನ್ನು 07-02-2026 ರೊಳಗೆ ಅರ್ಜಿ ಪಡೆದ ಕಛೇರಿಗೆ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.