ಜೈಪುರ: ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧನಕ್ಕೆ ಒಳಗಾಗಿರುವ ಪ್ರಧಾನಿ ಮೋದಿ ಅವರ ಮಾಜಿ ಬೆಂಬಲಿಗ, ಸಾಮಾಜಿಕ ಕಾರ್ಯಕರ್ತ, ವಿಜ್ಞಾನಿ ಸೋನಮ್ ವಾಂಗ್‌ಚುಕ್ (Sonam Wangchuk) ಅವರ ಆರೋಗ್ಯ ಜೈಲಿನಲ್ಲಿ ಹೆದಗೆಟ್ಟಿದೆ.
ಸುಪ್ರೀಂ ಕೋರ್ಟ್ ಆದೇಶದ ನಂತರ ಪೊಲೀಸರು ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಜೋದ್‌ಪುರದ ಏಮ್ ಗೆ ಶಿಫ್ಟ್ ಮಾಡಲಾಗಿದೆ.
ಜೋದ್‌ಪುರ ಕೇಂದ್ರ ಕಾರಾಗೃಹದಿಂದ ಏಮ್ಸ್‌ನ ತುರ್ತು ವಿಭಾಗಕ್ಕೆ ವಾಂಗ್‌ಚುಕ್‌ರನ್ನು ಕರೆತಂದು ಒಂದೂವರೆ ಗಂಟೆಗಳ ಕಾಲ ಅವರ ಮೇಲೆ ನಿಗಾ ವಹಿಸಲಾಗಿದೆ.
ವಾಂಗ್‌ಚುಕ್ ಅವರು ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿದ್ದು, ದೇಹದ ಹಲವು ಭಾಗಗಳಲ್ಲಿ ನೋವಿನ ಬಗ್ಗೆ ಹೇಳಿಕೊಂಡಿದ್ದಾರೆಂದು ವರದಿಯಾಗಿದೆ.
Jaipur: Sonam Wangchuk, the environmentalist and activist who has been imprisoned in Jodhpur jail for over four months, was taken to AIIMS under tight security for a health check-up.#DNAUpdates | #SonamWangchuk | #AIIMS pic.twitter.com/1Ap14kGulp
— DNA (@dna) January 31, 2026
ಲಡಾಖ್‌ಗೆ ನೀಡಿದ ಭರವಸೆ ಈಡೇರಿಸುವಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದ್ದನ್ನು ಟೀಕಿಸಿದ ಕಾರಣ ವಾಂಗ್ಚುಕ್ ಅವರನ್ನು ಸುಳ್ಳು ಆರೋಪದ ಮೇಲೆ ಬಂಧಿಸಲಾಗಿದ್ದು, ಮೋದಿ ಸರ್ಕಾರದ ಜನ ವಿರೋಧಿ ನೀತಿಯನ್ನು ಟೀಕಿಸಿದರೆ ದೇಶ ವಿರೋಧಿ ಆಗಲು ಸಾಧ್ಯವಿಲ್ಲ ಎಂಬುದು ಅವರ ಬೆಂಬಲಿಗರ ಆಕ್ರೋಶವಾಗಿದೆ.