Commission scam in Congress government; 224 MLAs know about it, says H.D. Kumaraswamy

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ನವದೆಹಲಿ: ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಹೇಳಿದರು.

ಆಯವ್ಯಯದ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ತೆರಿಗೆ ಪಾಲಿನಲ್ಲಿ ಅನ್ಯಾಯ ಆಗಿದೆ ಎಂದು ರಾಜ್ಯ ಸರ್ಕಾರ ಸಾಮಾನ್ಯವಾಗಿ ದೂರುತ್ತಿತ್ತು. 16ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ಶೇ 4.13ರಷ್ಟು ತೆರಿಗೆ ಪಾಲು ಹಂಚಿಕೆಗೆ ಶಿಫಾರಸು ಮಾಡಿದೆ.

15ನೇ ಹಣಕಾಸು ಆಯೋಗವು ಶೇ 3.64 ಹಂಚಿಕೆ ಮಾಡಿತ್ತು. ಹೊಸದಾಗಿ ಹಂಚಿಕೆ ಆಗಿರುವುದರ ಮೂಲಕ ರಾಜ್ಯಕ್ಕೆ 2026–27ನೇ ಸಾಲಿನಲ್ಲಿ ₹63,049 ಕೋಟಿ ತೆರಿಗೆ ಪಾಲು ದೊರೆಯಲಿದೆ. ಇನ್ನು ಮುಂದೆ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ರಾಜಕೀಯವಾಗಿ ಕೇಂದ್ರವನ್ನು ಟೀಕೆ ಮಾಡುವುದನ್ನು ಬಿಡಬೇಕು ಎಂದು ಹೇಳಿದ್ದಾರೆ.

ಈ ಬಜೆಟ್ ನಲ್ಲಿ ಕರ್ನಾಟಕಕ್ಕೆ ನಿರಾಶೆಯೇನೂ ಆಗಿಲ್ಲ. ತೆಂಗು ಪ್ರೋತ್ಸಾಹ ಯೋಜನೆಯಡಿ ತೆಂಗಿನ ಉತ್ಪಾದನೆ ಹೆಚ್ಚಳಕ್ಕೆ ಉತ್ತೇಜನ ಕೊಡಲಾಗಿದೆ. ಹಾಗೆಯೇ ಗೋಡಂಬಿ ಮತ್ತು ಕೋಕೋವನ್ನು 2030ರ ವೇಳೆಗೆ ಪ್ರೀಮಿಯಂ ಗ್ಲೋಬಲ್ ಬ್ರಾಂಡ್ ಆಗಿ ರೂಪಿಸುವ ಅಂಶವು ಮುಂಗಡ ಪತ್ರದಲ್ಲಿ ಸೇರಿದೆ. ಶ್ರೀಗಂಧ, ತೆಂಗು ಬೆಳೆ, ಕೋಕೋ ಬೆಳೆಗೆ ವಿಶೇಷ ಯೋಜನೆ ಮೂಲಕ ರಾಜ್ಯದ ಹಲವಾರು ಜಿಲ್ಲೆಗಳಿಗೆ ಉಪಯೋಗ ಆಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಹೈದರಾಬಾದ್-ಬೆಂಗಳೂರು, ಬೆಂಗಳೂರು ಚೆನ್ನೈ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆ ರಾಜ್ಯಕ್ಕೆ ವರದಾನವಾಗಲಿದೆ. ಈಗಾಗಲೇ ರಾಜ್ಯದ ಹಲವು ವೇಗದ ರೈಲುಗಳು ಕಾರ್ಯಾಚರಿಸುತ್ತಿದ್ದು, ವಂದೇ ಭಾರತ್ ರೈಲುಗಳು ಕೂಡ ಸೇರ್ಪಡೆಯಾಗಿದೆ. ಈಗ ಹೈ ಸ್ಪೀಡ್ ರೈಲುಗಳು ರಾಜ್ಯಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ರೈಲು ಸಂಪರ್ಕದಲ್ಲಿ ಹೊಸ ಕ್ರಾಂತಿ ಆಗಲಿದೆ ಎಂದು ಸಚಿವರು ಪ್ರತಿಪಾದಿಸಿದರು.

ಇದು ಕೇವಲ ಅಂಕಿ ಅಂಶಗಳ ಮುಂಗಡ ಪತ್ರವಲ್ಲ, ಬದಲಿಗೆ ಮುನ್ನೋಟ, ಮುಂದಾಲೋಚನೆ, ವಿಕಾಸ, ಫಲಿತಾಂಶ ಆಧರಿತ ಮುಂಗಡ ಪತ್ರವಾಗಿದೆ. ವಿಕಸಿತ ಭಾರತ ಗುರಿ ಸಾಕಾರಕ್ಕೆ ಇದು ಪೂರಕವಾಗಿದೆ. 2047ಕ್ಕೆ ನಾವು ಈ ಗುರಿ ಸಾಧನೆ ಮಾಡಬೇಕು, ಅದಕ್ಕೆ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಈ ಬಜೆಟ್ ಸ್ಪಷ್ಟ ದಿಕ್ಸೂಚಿ ತೋರಿದೆ ಎಂದು ಅವರು ಹೇಳಿದ್ದಾರೆ.

ಗ್ರಾಮೀಣ ಭಾರತಕ್ಕೆ ಮನ್ನಣೆ ಕೊಡಲಾಗಿದೆ. ಪ್ರತಿ ರಾಜ್ಯ, ಪ್ರತಿ ಜಿಲ್ಲೆ, ಪ್ರತಿ ತಾಲೂಕು, ಪ್ರತಿ ಪಂಚಾಯಿತಿ, ಪ್ರತಿ ಹಳ್ಳಿ ಮುಂಗಡಪತ್ರದಲ್ಲಿ ಒಳಗೊಂಡಿದೆ. ವಿಶಾಲ, ವಿಸ್ತೃತ, ವಿಕಾಸ; ಇದು ಮೋದಿ ಅವರ ಲೋಕದೃಷ್ಟಿ. ಅದಕ್ಕೆ ತಕ್ಕಂತೆ ಮುಂಗಡಪತ್ರ ಮೂಡಿ ಬಂದಿದೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!