news channel discussion... FIR filed

ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ಬೆಂಗಳೂರು: ಕಳೆದ ಕೆಲ ದಿನಗಳ ಹಿಂದೆ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ (News channel) ಧರ್ಮಸ್ಥಳ ಪ್ರಕರಣ ಸಂಬಂಧಿಸಿ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಆರೋಪದ ಮೇಲೆ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಕಿರಿಕ್ ಕೀರ್ತಿ ವಿರುದ್ಧ ಬೆಂಗಳೂರಿನ ಎಸ್.ಜೆ.ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕರ್ನಾಟಕ ರಣಧೀರ ಪಡೆಯ ಹರೀಶ್ ಭೈರಪ್ಪ ಎಂಬುವರು ನೀಡಿದ ದೂರಿನನ್ವಯ ಎಸ್. ಜೆ.ಪಾರ್ಕ್ ಠಾಣೆಯಲ್ಲಿ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಚರ್ಚೆಯ ವಿಷಯ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆದು 13 ವರ್ಷಗಳಾಗಿದ್ದ ಹಿನ್ನೆಲೆ 2025ರ ಅಕ್ಟೋಬರ್ 9ರಂದು ಖಾಸಗಿ ಸುದ್ದಿ ವಾಹಿನಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಕರ್ನಾಟಕ ರಣಧೀರ ಪಡೆಯ ಹರೀಶ್ ಭೈರಪ್ಪ ಮತ್ತು ಚರ್ಚಾ ವಸಂತ್ ಗಿಳಿಯಾರ್ ಭಾಗವಹಿಸಿದರು.

ಈ ಚರ್ಚೆ ವೇಳೆ ಕೆಲ ವಾಗ್ವಾದ ನಡೆದಿತ್ತು. ಕಾರ್ಯಕ್ರಮ ಮುಗಿದು ಹರೀಶ್ ಭೈರಪ್ಪ ಮನೆಗೆ ತೆರಳುವ ವೇಳೆ, ವಸಂತ್ ಗಿಳಿಯಾರ್ ತಮ್ಮ ಸಹಚರರನ್ನು ಸುದ್ದಿ ವಾಹಿನಿಯ ಕಚೇರಿಗೆ ಕರೆಸಿಕೊಂಡು ಹರೀಶ್ ಮತ್ತು ಇತರರೊಂದಿಗೆ ದಾಂಧಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ.

ಈ ಕುರಿತಂತೆ ಹರೀಶ್ ಭೈರಪ್ಪ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು,
ಇತ್ತೀಚೆಗೆ ಕನ್ನಡ ಟಿವಿಯ ಚರ್ಚಾ ಕಾರ್ಯಕ್ರಮದಲ್ಲಿ ನಾನು ಭಾಗವಹಿಸಿದ್ದೆ. ಆ ಸಂದರ್ಭದಲ್ಲಿ ಪತ್ರಿಕಾ ಧರ್ಮದ ಮೌಲ್ಯಗಳನ್ನು ಬದಿಗೊತ್ತಿ, ನಿರಪೇಕ್ಷತೆಯ ಬದಲು ಪಕ್ಷಪಾತದ ಧೋರಣೆಯನ್ನು ತೋರಿಸಿದ ನಡವಳಿಕೆಯನ್ನು ಹಲವರು ಗಮನಿಸಿದ್ದೀರಿ.

ಚರ್ಚೆಯ ಹೆಸರಿನಲ್ಲಿ ಬೆಂಗಳೂರಿಗೆ ಬಂದು, ಮಾತನಾಡುವ ಬದಲು ಪೋಸ್ ಕೊಡುವುದು, ಗಂಭೀರ ವಿಚಾರಗಳನ್ನು ರೌಡಿ ಶೈಲಿಯಲ್ಲಿ ನಮ್ಮನ್ನೇ ಬೆದರಿಸಲು ಬಂದರೆ ಹೆದರಿ ಕೂರಲು ನಾವು ಸಾವರ್ಕರ್ ಸಂತತಿಯಲ್ಲ ಬಾಬಾ ಸಾಹೇಬರ ಆಶಯಗಳನ್ನು ಮುನ್ನಡೆಸುವ ಹುಲಿಗಳು ಅನ್ನೋದು ನೆನಪಿರಲಿ ಎಂದು ನಾನು ಅಂದೇ ಸ್ಪಷ್ಟವಾಗಿ ಹೇಳಿದ್ದೆ. ಇದನ್ನು ಸುಮ್ಮನೆ ಬಿಡೋದಿಲ್ಲ ಅನ್ನೋದು ಕೇವಲ ಮಾತಲ್ಲ ಅನ್ನೋದೂ ಈಗ ಸ್ಪಷ್ಟವಾಗಿದೆ.

ಕಾರ್ಯಕ್ರಮದ ಮುಖ್ಯಸ್ಥರಾದ ಶೋಭಾ ಮಳವಳ್ಳಿ ಅವರಿಗೆ ನೇರವಾಗಿ ಕೇಳಿದ್ದೆ FIR ಬಗ್ಗೆ ನಿಮ್ಮ ನಿಲುವೇನು ಎಂದು. ಅವರು“ಮಾಡಿಸಿ, ಒಂದಷ್ಟು ಬುದ್ಧಿ ಬರಲಿ” ಎಂಬ ಅವರ ಮಾತಿಗೆ ಗೌರವ ನೀಡಿ, ಕಾನೂನು ದಾರಿಯನ್ನೇ ಹಿಡಿದಿದ್ದೇನೆ.

ಇದು ಯಾರ ಮೇಲೂ ವೈಯಕ್ತಿಕ ದ್ವೇಷದಿಂದಲ್ಲ. ಆದರೆ ಪತ್ರಿಕೋದ್ಯಮ ಮತ್ತು ಬೆಂಗಳೂರನ್ನು ವೇದಿಕೆಯಾಗಿಸಿಕೊಂಡು ಅತಿರೇಕ ತೋರಿಸುವವರಿಗೆ ಒಂದು ಸಣ್ಣ ರಿಮೈಂಡರ್ ಅಷ್ಟೇ.

ಇನ್ನೂ ವಸಂತ್ ಮನೆಹಾಳ್ ಸ್ವಲ್ಪ ತಾಳ್ಮೆ ಇರಲಿ ಶಾಕ್‌ಗಳು ಸೀರಿಯಲ್ ಎಪಿಸೋಡ್ ತರಹ ಬರಬಹುದು ಇನ್ನೊಂದು 15 ರಿಂದ 20 ದಿದ ಕಾದು ನೋಡಿ ಎಂದು ಹರೀಶ್ ಬೈರಪ್ಪ ಬರೆದಿದ್ದಾರೆ.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ಕಳೆದ ಕೆಲ ದಿನಗಳ ಹಿಂದೆ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ (News channel) ಧರ್ಮಸ್ಥಳ ಪ್ರಕರಣ ಸಂಬಂಧಿಸಿ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಆರೋಪದ ಮೇಲೆ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಕಿರಿಕ್ ಕೀರ್ತಿ ವಿರುದ್ಧ ಬೆಂಗಳೂರಿನ

[ccc_my_favorite_select_button post_id="119114"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!