ಮಂಡ್ಯ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕೇಂದ್ರ ಸಚಿವ, ಮಾಜಿ ಸಿಎಂ, ಜೆಡಿಎಸ್ (JDS) ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ (H.D. Kumaraswamy) ಅವರು ಎನ್‌ಡಿಎ ಮುಖ್ಯಮಂತ್ರಿ ಅಭ್ಯರ್ಥಿ ಎಂಬ ಮಾತು ವ್ಯಾಪಕವಾಗಿದೆ. ಇದರ ಬೆನ್ನಲ್ಲೇ ಮೈತ್ರಿ ಕುರಿತಂತೆ ಬಿಜೆಪಿ (BJP) ಪಾಳಯದಲ್ಲಿ ಅಸಮಾಧಾನದ ಮಾತುಗಳು ಕೆಳಿಬರುತ್ತಿವೆ.
ಇದಕ್ಕೆ ಪೂರಕ ಎಂಬಂತೆ ಬಿಜೆಪಿ ಶಕ್ತಿಯು ತವಾಗಿರುವ ಜಿಲ್ಲೆಗಳಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ. ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಸ್ವತಂತ್ರವಾಗಿ ಎದುರಿ ಸೋಣ ಎನ್ನುವುದು ಮುಖಂಡರು, ಕಾರ್ಯಕರ್ತರ ಅಭಿಪ್ರಾಯವಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಹೇಳಿದ್ದಾರೆ.
ಮಂಗಳವಾರ ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯಲ್ಲೇ ಬಿಜೆಪಿ ಶಕ್ತಿಶಾಲಿಯಾಗಿದೆ ಎನ್ನುವುದು ಜೆಡಿಎಸ್ ಗೂ ತಿಳಿದಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯ ಕರ್ತರು ಸಹ ಅಭಿಪ್ರಾಯವನ್ನು ತಿಳಿಸಿದ್ದಾರೆ.
ಮೈತ್ರಿಗೆ ಅವಕಾಶ ನೀಡಿದ್ದೇ ಆದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಶೇ.50ರಷ್ಟು ಅವಕಾಶ ಕಲ್ಪಿಸ ಬೇಕು ಎಂದು ಒತ್ತಾಯಿಸಿದ್ದಾರೆ. ಈ ವಿಚಾರವನ್ನು ಪಕ್ಷದ ರಾಜ್ಯಾಧ್ಯಕ್ಷರು ಮತ್ತು ಮುಖಂಡರಿಗೆ ತಿಳಿಸುವುದಾಗಿ ಹೇಳಿದ್ದಾರೆ.
ಮೈತ್ರಿ ಬಗ್ಗೆ ರಾಜ್ಯಾಧ್ಯಕ್ಷರು, ಕೋರ್‌ಕಮಿಟಿ ಮುಂದೆ ಕಾರ್ಯಕತರ್ಕರ ಅಭಿಪ್ರಾಯವನ್ನು ಇಡಲಾಗುವುದು. ಅಲ್ಲಿನ ನಿರ್ಣಯವನ್ನು ದೆಹಲಿಗೆ ಕಳುಹಿಸಲಾಗುವುದು. ರಾಷ್ಟ್ರೀಯ ಅಧ್ಯಕ್ಷರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಅಂತಿಮವಾಗಿ ತೀರ್ಮಾನ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.
ಗೆಲ್ಲುವ ಕ್ಷೇತ್ರಗಳ ಸಮೀಕ್ಷೆ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ದಲ್ಲಿ ಯಾವ್ಯಾವ ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಗೆಲುವು ಸಾಧಿಸಲಿದೆ ಎಂಬ ಸಮೀಕ್ಷೆಯ ಆಧಾರದ ಮೇಲೆ ಸ್ಪರ್ಧೆಗೆ ಅವಕಾಶ ನೀಡಲಾಗುವುದೇ ಹೊರತು, ಜೆಡಿಎಸ್ ಅಥವಾ ಬಿಜೆಪಿ ಪ್ರಾಬಲ್ಯದ ಆಧಾರದ ಮೇಲೆ ಟಿಕೆಟ್ ಹಂಚಿಕೆ ಆಗುವುದಿಲ್ಲ.
ಬಿಜೆಪಿ 150, ಜೆಡಿಎಸ್ 30 ಸೇರಿ 180 ಸ್ಥಾನಗಳನ್ನು ಗೆಲ್ಲುವಂತಹ ಗುರಿ ಹೊಂದಲಾಗಿದ್ದು, ಗೆಲ್ಲುವ ಸಾಮರ್ಥ್ಯವಿರುವ ವರದಿಗಳನ್ನು ಆಧರಿಸಿ ಟಿಕೆಟ್ ಹಂಚಿಕೆ ಮಾಡಲಾಗುವುದು.
ಹಳೆ ಮೈಸೂರು ವ್ಯಾಪ್ತಿಯಲ್ಲಿ ಬಿಜೆಪಿ ಪ್ರಭಾವ ಹೆಚ್ಚಿ, ಜೆಡಿಎಸ್ ಪ್ರಭಾವ ಕುಸಿಯುತ್ತಿದೆ ಎಂದರು.
ಮೈತ್ರಿ ಬಗ್ಗೆ ಯಾವುದೇ ಗೊಂದಲವಿಲ್ಲದಿದ್ದರೂ, ರಾಜ್ಯದಲ್ಲಿ ಎರಡೂ ಪಕ್ಷಗಳ ವಾತಾವರಣ ತಿಳಿಯಾಗಬೇಕು. ಮೈತ್ರಿಗೆ ತಕ್ಕಂತೆ ಅವಕಾಶಗಳನ್ನು ನಿರ್ಮಿಸಬೇಕು. ಅದು ಬಿಟ್ಟು ಇವರೇ ಮುಖ್ಯಮಂತ್ರಿಯಾಗುತ್ತಾರೆ ಎಂಬುದನ್ನು ಘೋಷಣೆ ಮಾಡುವಂತಿಲ್ಲ. ಆದರೆ ನಿಖಿಲ್ ಕುಮಾರಸ್ವಾಮಿ ಅವರು ಕುಮಾರಸ್ವಾಮಿ ಯವರೇ ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಮಾಡುತ್ತಿರುವುದನ್ನು ವಿರೋಧಿಸಿದರು.
ನಮ್ಮಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸುವುದಿಲ್ಲ. ಅಂತಿಮವಾಗಿ ವರಿಷ್ಠರು ತೀರ್ಮಾನ ಮಾಡುತ್ತಾರೆ. ಅದಕ್ಕೆ ಬದ್ದರಾಗಬೇಕು. ಅದು ಬಿಟ್ಟು ಮೊದಲೇ ಇವರೇ ಸಿಎಂ, ಅವರೇ ಸಿಎಂ ಎನ್ನುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.