Private bus catches fire on the highway..

ಹೆದ್ದಾರಿಯಲ್ಲಿ ಬೆಂಕಿ ಹೊತ್ತಿ ಉರಿದ ಖಾಸಗಿ ಬಸ್‌.. ಪ್ರಯಾಣಿಕರು ಪಾರು..!

ನೆಲಮಂಗಲ: ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ನೆಲಮಂಗಳ ಸಮೀಪ ಹನುಮಂತಪುರ ಗೇಟ್ ಬಳಿ ಖಾಸಗಿ ಬಸ್‌ಗೆ (Private Bus) ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು (Crime) ಭಸ್ಮವಾಗಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.

ಖಾಸಗಿ ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಬಸ್‌ ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ವೇಳೆ, ಬೆಳಗಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಈ ಅಗ್ನಿ ಅವಘಡ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿದ್ದ ನಡೆಯುತ್ತಿದ್ದ ಕಾಮಗಾರಿಯ ಕಾರಣದಿಂದ ಬಸ್ ನಿಧಾನವಾಗಿ ಸಾಗುತ್ತಿದ್ದಾಗ, ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ.

ಬಸ್‌ನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಚಾಲಕನ ಸಮಯಪ್ರಜ್ಞೆಯಿಂದ ಹಾಗೂ ಪ್ರಯಾಣಿಕರ ತ್ವರಿತ ಪ್ರತಿಕ್ರಿಯೆಯಿಂದ ಎಲ್ಲರೂ ಬಸ್‌ನಿಂದ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿದ್ಯುತ್‌ ಕಂಬಕ್ಕೆ ಬಸ್‌ ಡಿಕ್ಕಿ ಹೊಡೆಯುತ್ತಿದ್ದಂತೆ ಬಸ್ ರಸ್ತೆ ಬಿಟ್ಟು ಕೆಳಕ್ಕೆ ಹೋಗಿದೆ. ಈ ವೇಳೆ ನೋಡು ನೋಡುತ್ತಿದ್ದಂತೆ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಕ್ಷಣಾರ್ಧದಲ್ಲಿ ಬೆಂಕಿ ಬಸ್ ಪೂರ್ತಿ ವ್ಯಾಪಿಸಿದ್ದು, ಸುಟ್ಟು ಭಸ್ಮವಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜಕೀಯ

ರಾಜ್ಯ ಸರ್ಕಾರದ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿ ಟೀಕೆ

ರಾಜ್ಯ ಸರ್ಕಾರದ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿ ಟೀಕೆ

ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ 2025-26ನೇ ಸಾಲಿನ ಬಜೆಟ್‌ನಲ್ಲಿ ಯಾರನ್ನೂ ಓಲೈಕೆ ಮಾಡದೇ ಎಲ್ಲಾ ವರ್ಗದವರ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗಾಗಿ ಬಜೆಟ್ ಮಂಡನೆ ಮಾಡಲಾಗಿದೆ. ಕಾಂಗ್ರೆಸ್ ಬಜೆಟ್ ಮಾಡಿದ್ದರೆ ತಾರತಮ್ಯ ಹಾಗೂ

[ccc_my_favorite_select_button post_id="119201"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ..  ರೈತರಿಗೆ ಅಪಾರ ನಷ್ಟ

ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ.. ರೈತರಿಗೆ ಅಪಾರ ನಷ್ಟ

ಸಹೋದರರು ಒಂದೇ ಕಡೆ ಹಾಕಿದ್ದ ಬಣವೆಗೆ (Haystack) ಆಕಸ್ಮಿಕವಾಗಿ ಬೆಂಕಿ (Fire) ತಗುಲಿ, ಹುಲ್ಲು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ತಾಲೂಕಿನ ***** ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119190"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!