ಚಿಕ್ಕಬಳ್ಳಾಪುರ: ಪ್ರೇಮಿಗಳ ದಿನ (Valentine’s Day) ಫೆ.14 ರಂದು ವಿಶ್ವವಿಖ್ಯಾತ ನಂದಿ ಗಿರಿಧಾಮ (Nandi Hills) ಬಂದ್ ಮಾಡಲಾಗಿದೆ.
ಇದೇ ಫೆ.14 ರಂದು ಪ್ರೇಮಿಗಳ ಪಾಲಿನ ಪ್ರೇಮಧಾಮ ಬಂದ್ ಆಗಲಿದೆ. ಬೆಳಗ್ಗೆ 6ರಿಂದ ಸಂಜೆ 6 ಗಂಟೆಯವರೆಗೂ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.
ಪ್ರೇಮಿಗಳ ದಿನ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ನಂದಿ ಗಿರಿಧಾಮಕ್ಕೆ ಭೇಟಿ ನೀಡಲಿದ್ದಾರೆ. ನಿರ್ಬಂಧ ವಿಧಿಸಿರುವ ಕ್ರಮ ಪ್ರೇಮಿಗಳಿಗೆ ಶಾಕ್ ನೀಡಿದೆ.
ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಿರ್ಬಂಧಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಜಿ.ಪ್ರಭು ಆದೇಶದಲ್ಲಿ ತಿಳಿಸಿದ್ದಾರೆ.