Land as the sixth guarantee: DCM D.K. Shivakumar promises

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ರಾಯಚೂರು: “ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು ನನಗೆ ಸಮಯಾವಕಾಶ ನೀಡುತ್ತಿಲ್ಲ. ಅವರು ನಮಗೆ ಅವಕಾಶ ಕೊಟ್ಟರೆ ಪೋಲಾಗುತ್ತಿರುವ 30 ಟಿಎಂಸಿ ತುಂಗಭದ್ರಾ ನೀರನ್ನು ನಿಲ್ಲಿಸಿ, ಈ ಭಾಗದ ರೈತರು, ಜನರಿಗೆ ನ್ಯಾಯ ಒದಗಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಭರವಸೆ ನೀಡಿದರು.

ರಾಯಚೂರು ಉತ್ಸವ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಮಾತನಾಡಿದರು.

“ನಿಮ್ಮ ಜಿಲ್ಲೆಯ ಶಾಸಕರು ನನ್ನ ಮೇಲೆ ಒತ್ತಡ ತಂದು, ಕಾಲುವೆಗಳ ಕೊನೆ ಭಾಗದವರೆಗೂ ನೀರು ಹರಿಯುವಂತೆ ಮಾಡಲು ಕಾನೂನು ತರುವಂತೆ ಮಾಡಿದರು. ಕಾಲುವೆಗಳ ಮೇಲ್ಬಾಗದಲ್ಲಿ ನೀರೆತ್ತುವ ಮೂಲಕ ಕೊನೆ ಭಾಗದವರೆಗೆ ನೀರು ತಲುಪುತ್ತಿರಲಿಲ್ಲ. ಹೀಗಾಗಿ ನಾವು ಹೊಸ ಕಾನೂನು ತಂದಿದ್ದೇವೆ. ಕಳೆದ ಬಾರಿ ನೀರಾವರಿ ಸಚಿವನಾಗಿದ್ದಾಗ ಇಲ್ಲಿಗೆ ಬಂದಿದ್ದೆ. ಬಂಗಾರಪ್ಪನವರ ಕೆರೆಗೆ 300 ಕೋಟಿ ನೀಡಿದ್ದು ಆ ಯೋಜನೆ ಕಾರ್ಯರೂಪಕ್ಕೆ ಬರುತ್ತಿದೆ. ಟಿಬಿ ಅಣೆಕಟ್ಟಿನ ಎಲ್ಲಾ ಗೇಟ್ ಬದಲಾಯಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ನಾವು ಇನ್ನು ಮಾಡಿಯೇ ತೀರುತ್ತೇವೆ” ಎಂದು ತಿಳಿಸಿದರು.

ಗಾಂಧಿ ಹಾಗೂ ಅಂಬೇಡ್ಕರ್ ಅವರ ಹೆಸರಿನಂತೆ ಖರ್ಗೆ ಅವರ ಹೆಸರನ್ನು ಚಿರಸ್ಥಾಯಿಯಾಗಿ ಉಳಿಸಿ

“ಈ ಹಿಂದೆ ಕಾಂಗ್ರೆಸ್ ಸರ್ಕಾರದ ಮಧ್ಯಾಹ್ನ ಬಿಸಿಯೂಟ, ಮನರೇಗಾ, ಸ್ತ್ರೀಶಕ್ತಿ ಕಾರ್ಯಕ್ರಮಗಳನ್ನು ಈ ಭಾಗದಿಂದಲೇ ನಾವು ಆರಂಭಿಸಿದೆವು. ನಮ್ಮ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಹೋರಾಟ ಮಾಡಿ ನಿಮ್ಮೆಲ್ಲರ ಅಭಿವೃದ್ಧಿಗೆ 371ಜೆ ಜಾರಿಗೆತಂದು ನಿಮ್ಮ ಬದುಕಿನಲ್ಲಿ ದೊಡ್ಡ ಬದಲಾವಣೆ ತಂದಿದ್ದಾರೆ. ಹೀಗಾಗಿ ಮಹಾತ್ಮಾ ಗಾಂಧಿ ಹಾಗೂ ಅಂಬೇಡ್ಕರ್ ಅವರನ್ನು ಸ್ಮರಿಸುವಂತೆ ಈ ಭಾಗದ ಜನ ಖರ್ಗೆ ಅವರನ್ನು ಸ್ಮರಿಸಬೇಕು. ಆ ಮೂಲಕ ಖರ್ಗೆ ಅವರ ಹೆಸರನ್ನು ಚಿರಸ್ಥಾಯಿಯಾಗಿ ಉಳಿಸಬೇಕು ಎಂದು ನಿಮ್ಮಲ್ಲಿ ಪ್ರಾರ್ಥಿಸುತ್ತೇನೆ” ಎಂದು ಮನವಿ ಮಾಡಿದರು.

“ಶರಣರು, ದಾಸರು, ಸಂತರ ಪರಂಪರೆಯ ನೆಲೆಬೀಡು. ರೈತರನ್ನು ಕಾಪಾಡುವ ಕೃಷ್ಣ, ತುಂಗಭದ್ರೆಯ ಬೀಡು. ಎಡೆದೊರೆ ಖ್ಯಾತಿಯ ರಾಯಚೂರು ಜಿಲ್ಲೆ ಇಡೀ ರಾಜ್ಯಕ್ಕೆ ಬೆಳಕು ಕೊಟ್ಟ ಪವಿತ್ರವಾದ ನಾಡು. ನಮ್ಮೆಲ್ಲರಿಗೂ ಉತ್ತಮವಾದ ಸೋನಾ ಮಸೂರಿ ಅಕ್ಕಿ, ಹತ್ತಿ, ಚಿನ್ನ ನೀಡುತ್ತಿರುವ ಪವಿತ್ರವಾದ ನೆಲಕ್ಕೆ ಬಂದು, ರಾಯಚೂರು ಉತ್ಸವದಲ್ಲಿ ಭಾಗಿಯಾಗಿರುವುದು ನನ್ನ ಭಾಗ್ಯ” ಎಂದರು.

“ಇದು ಪರಂಪರೆಯ ಬೇರು, ಪ್ರಗತಿಯ ಗುರಿ ಇಲ್ಲಿದೆ. ರಾಯಚೂರು ಉತ್ಸವ ನಮ್ಮೆಲ್ಲರ ಹೆಮ್ಮೆ. ಕಲೆ, ಸಂಸ್ಕೃತಿ ಸಂಗಮವೇ ರಾಯಚೂರು ಉತ್ಸವ. ಇತ್ತೀಚೆಗೆ ನಾನು ಕನಕಪುರದಲ್ಲಿ ತಾಲ್ಲೂಕು ಮಟ್ಟದ ಕನಕೋತ್ಸವ ಕಾರ್ಯಕ್ರಮ ಮಾಡಿದೆ. ನಗುವು ಸಹಜದ ಧರ್ಮ; ನಗಿಸುವುದು ಪರಧರ್ಮ, ನಗುವ ಕೇಳುತ ನಗುವುದತಿಶಯದ ಧರ್ಮ, ನಗುವ ನಗಿಸುವ ನಗಿಸಿ ನಗುತ ಬಾಳುವ ವರವ ಬೇಡಿಕೊಳ್ಳೋ – ಮಂಕುತಿಮ್ಮ ಎಂದು ಡಿವಿಜಿ ಅವರು ಹೇಲಿದ್ದಾರೆ. ಅದೇ ರೀತಿ 20 ವರ್ಷಗಳ ಬಳಿಕ ರಾಯಚೂರಿನಲ್ಲಿ ಈ ಉತ್ಸವವನ್ನು ಮಾಡುವ ಮೂಲಕ ನಿಮ್ಮನ್ನು ಸಂತೋಷವಾಗಿಡಲು ಈ ಪ್ರಯತ್ನ ಮಾಡಿದ್ದಾರೆ” ಎಂದು ಹೇಳಿದರು.

ಈ ನಾಡಿನ ನಾಡಿ, ಜನರ ಸೌಹಾರ್ದತೆಯನ್ನು ರಾಯಚೂರು ಜಿಲ್ಲೆಯಲ್ಲಿ ಕಾಣುತ್ತಿದ್ದೇವೆ. ಕಳೆದ ಮೂರು ದಿನಗಳಲ್ಲಿ ಲಕ್ಷಾಂತರ ಜನ ಈ ಸಂಭ್ರಮದ ಉತ್ಸವದಲ್ಲಿ ಪಾಲ್ಗೊಂಡಿದ್ದೀರಿ ಎಂದು ನಮ್ಮ ನಾಯಕರು ಹೇಳಿದ್ದು ಕೇಳಿ ಬಹಳ ಸಂತೋಷವಾಯಿತು.

ಜನಪದವೇ ನಮ್ಮೆಲ್ಲರ ಗುರುತು. ಸಂಸ್ಕೃತಿ, ಕಲೆಯೇ ನಮ್ಮೆಲ್ಲರ ಶಕ್ತಿ. ನಿಮ್ಮನ್ನು ಸಂತೋಷವಾಗಿಡುವುದು ನಮ್ಮ ಸರ್ಕಾರದ ಗುರಿ. ನಾನು ಚುನಾವಣೆ ಸಮಯದಲ್ಲಿ ಇಲ್ಲಿಗೆ ಬಂದಾಗ ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಮಾತ್ರ ಚೆಂದ ಎಂದು ಹೇಳಿದ್ದೆ. ಈ ದಾನ ಧರ್ಮ ಮಾಡುವ ಕೈ ಅಧಿಕಾರಕ್ಕೆ ಬಂದಿದ್ದಕ್ಕೆ ಈ ಸಂತೋಷ ಬಂದಿದೆ.

ಎಲ್ಲರಿಗೂ 200 ಯೂನಿಟ್ ವರೆಗೂ ವಿದ್ಯುತ್ ಉಚಿತ, 10 ಕೆ.ಜಿ ಅಕ್ಕಿ, ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಮಹಿಳೆಯರಿಗೆ ತಿಂಗಳಿಗೆ 2 ಸಾವಿರ, ನಿರುದ್ಯೋಗ ಯುವಕರಿಗೆ ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ. ಈ ಐದು ಗ್ಯಾರಂಟಿ ಯೋಜನೆಗಳ ಮೂಲಕ ನಿಮ್ಮ ಬದುಕಿನಲ್ಲಿ ಬದಲಾವಣೆ ತರಲಾಗುತ್ತಿದೆ ಎಂದರು.

“ಆಕಾಶಕ್ಕೆ ಏಣಿ ಇಲ್ಲ, ಸಮುದ್ರಕ್ಕೆ ಸೇತುವೆ ಇಲ್ಲ. ಆದರೆ ರಾಯಚೂರು ನಾಡು, ಭತ್ತದ ಬೀಡು ನಮಗೆ ಶಕ್ತಿ ನೀಡುತ್ತಿದೆ. ಆಭರಣದ ರೂಪ ಬೇರೆಯಾದರೂ ಅದನ್ನು ಮಾಡುವ ಚಿನ್ನ ಒಂದೇ ಆಗಿದೆ. ಧರ್ಮ ಯಾವುದಾದರೂ ತತ್ವವೊಂದೇ, ನಾಮ ನೂರಾದರೂ ದೈವವೊಂದೇ, ಪೂಜೆಯಾಯವುದಾದರೂ ಭಕ್ತಿಯೊಂದೇ, ಕರ್ಮ ಹಲವಾದರೂ ನಿಷ್ಠೆಯೊಂದೇ, ದೇವನೊಬ್ಬ ನಾಮ ಹಲವು. ಇಲ್ಲಿ ನಾವು ಬೇರೆ ಬೇರೆ ಸಮುದಾಯದ ಜನ ಸೇರಿದ್ದೇವೆ. ಕಲೆಗಳು ಬೇರೆಯಾದರೂ ಕಲಾವಿದರೆಲ್ಲರೂ ಒಂದೇ. ಕಲಾವಿದರಿಗೆ ಜಾತಿ ಧರ್ಮದ ಬೇಧವಿಲ್ಲ. ಇದು ರೈತರ ನಾಡು. ಹಸಿದಾಗ ಅನ್ನ ಕೊಟ್ಟು, ಬದುಕಿದಾಗ ಶಿಕ್ಷಣ ನೀಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ನೀವು ಹೊಸ ರೂಪ ನೀಡುತ್ತಿದ್ದೀರಿ” ಎಂದು ಹೇಳಿದರು.

“ಇದು ಚಾಲುಕ್ಯರು, ಚೋಳರು, ವಿಜಯನಗರ ಅರಸರು ಆಳಿದ ಭೂಮಿ. ಎಲ್ಲಾ ಧರ್ಮದ ನಾಯಕರು ಬಂದ ಭೂಮಿ. ನಮ್ಮ ಸರ್ಕಾರ ನಿಮ್ಮ ಜತೆಯಲ್ಲಿದೆ. ನಿಮ್ಮ ಬದುಕಿನಲ್ಲಿ ಬದಲಾವಣೆ ತರಲು ಬದ್ಧರಾಗಿದ್ದೇವೆ. ಈ ಜಿಲ್ಲೆಯ ಆಸ್ಪತ್ರೆ ವಿಚಾರದಲ್ಲಿ ಐತಿಹಾಸಿಕ ತೀರ್ಮಾನ ಮಾಡಿದ್ದು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಸಂಕಲ್ಪ ಮಾಡಿದ್ದಾರೆ. ಈ ಭಾಗದಲ್ಲಿ ಏಮ್ಸ್ ತರಬೇಕು ಎಂದು ಪಣ ತೊಟ್ಟಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ” ಎಂದರು.

“ನಮ್ಮ ಸರ್ಕಾರ ಐದು ಗ್ಯಾರಂಟಿಗಳ ಜೊತೆಗೆ ಆರನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿ ನೀಡುತ್ತಿದೆ. ಸರ್ಕಾರ ಸಾವಿರ ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಫೆ.14ರಂದು ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಮುಂದೆಯೂ ನೀವು ಈ ಕೈ ಅನ್ನು ಅಧಿಕಾರಕ್ಕೆ ತಂದು ಶಕ್ತಿ ಕೊಡಬೇಕು” ಎಂದು ಮನವಿ ಮಾಡಿದರು.

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ..  ರೈತರಿಗೆ ಅಪಾರ ನಷ್ಟ

ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ.. ರೈತರಿಗೆ ಅಪಾರ ನಷ್ಟ

ಸಹೋದರರು ಒಂದೇ ಕಡೆ ಹಾಕಿದ್ದ ಬಣವೆಗೆ (Haystack) ಆಕಸ್ಮಿಕವಾಗಿ ಬೆಂಕಿ (Fire) ತಗುಲಿ, ಹುಲ್ಲು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ತಾಲೂಕಿನ ***** ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119190"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!