Mr. Narayanaswamy, here is the affidavit I submitted to the Lokayukta: D.K. Shivakumar

ಬಾಯಿ ಮುಚ್ಚಿಕೊಂಡು ಇರಬೇಕು ಎಂಬ ಆದೇಶವನ್ನು ಎಲ್ಲರೂ ಪಾಲಿಸಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು ಎಂದು ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಹೇಳಿದ್ದಾರೆ. ಅದನ್ನು ನಾವು ಪಾಲನೆ ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ತಿಳಿಸಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದರು.

ಅಧಿಕಾರ ಹಂಚಿಕೆ ಕುರಿತು ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ “ನನ್ನ ಪರ, ವಿರುದ್ಧ ಹೇಳಿಕೆಗಳನ್ನು ಶಾಸಕರು, ಮಂತ್ರಿಗಳು, ಯಾರೇ ನೀಡುತ್ತಿರಬಹುದು. ಈ ಹೇಳಿಕೆಗಳು ಪಕ್ಷಕ್ಕೆ ಹಾನಿ ಮಾಡುವ ಹೇಳಿಕೆಗಳೇ ಹೊರತು ಪಕ್ಷಕ್ಕೆ ಒಳ್ಳೆಯದನ್ನು ಮಾಡುವ ಹೇಳಿಕೆಗಳಲ್ಲ” ಎಂದರು.

ಪ್ರತಿದಿನವೂ ಶುಭದಿನ

ಒಂದಷ್ಟು ಕಾಂಗ್ರೆಸ್ ನಾಯಕರು ನೀವು ಶುಭಸುದ್ದಿ ತರುವಿರಿ ಎಂದಿರುವ ಬಗ್ಗೆ ಕೇಳಿದಾಗ, “ಪ್ರತಿದಿನವೂ ನನಗೆ ಶುಭದಿನ, ಶುಭ ಜೀವನ, ಶುಭ ಪ್ರಾರಂಭ, ಯಶಸ್ಸಿನ ದಿನ, ಪ್ರತಿದಿನವೂ ಕಷ್ಟದ ದಿನವೇ. ಪ್ರತಿದಿನವೂ ಏನೂ ಸುಲಭವಾಗಿ ಇರುವುದಿಲ್ಲ. ಜನರ ಕಷ್ಟಗಳನ್ನು ಬಗೆಹರಸಿಬೇಕಾದರೆ ಕಷ್ಟ ಕಾರ್ಪಣ್ಯಗಳು, ಅಡಚಣೆಗಳು, ತೊಡಕುಗಳು ಇದ್ದೇ ಇರುತ್ತವೆ. ಟೀಕೆಗಳು ಬರುತ್ತಲೇ ಇರುತ್ತವೆ. ಟೀಕೆಗಳನ್ನು ಎದುರಿಸಲೇ ಬೇಕು. ನಮ್ಮ ಕೆಲಸವನ್ನು ಮುಂದುವರೆಸಲೇ ಬೇಕು” ಎಂದು ಉತ್ತರಿಸಿದರು.

ನಾನು, ಸಿದ್ದರಾಮಯ್ಯ ಅವರು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ

ಹೈಕಮಾಂಡ್ ಗೊಂದಲವನ್ನು ಬೇಗ ಇತ್ಯರ್ಥ ಮಾಡಬೇಕು ಎನ್ನುವ ಬಗ್ಗೆ ಕೇಳಿದಾಗ, “ನನಗೆ ಯಾವ ಗೊಂದಲವೂ ಇಲ್ಲ. ಗೊಂದಲ ಬೇರೆಯವರಿಗೆ ಇರಬಹುದು. ನಾನು ಹಾಗೂ ಸಿದ್ದರಾಮಯ್ಯ ಅವರು ಏನು ಮಾತನಾಡಿದ್ದೇವೆ ಎಂಬುದು ನಮಗೆ ಗೊತ್ತು. ನಾವಿಬ್ಬರು ಕದ್ದು ಮುಚ್ಚಿ ಮಾತನಾಡಿಕೊಂಡಿಲ್ಲ. ನಮ್ಮ ಪಕ್ಷದ ವರಿಷ್ಠರು ಎಲ್ಲಾ ಸೇರಿ ಮಾತನಾಡಿಕೊಂಡಿದ್ದೇವೆ. ಬೇರೆಯವರೆಲ್ಲ ಇದಕ್ಕೆ ಟೆನ್ಷನ್ ತೆಗೆದುಕೊಳ್ಳುವುದು, ಹೇಳಿಕೆ ಕೊಡುವುದರಿಂದ ಯಾರಿಗೂ ಪ್ರಯೋಜನವಾಗುವುದಿಲ್ಲ‌” ಎಂದರು.

ನಾವು ಮಾತನಾಡಿದರೆ ನೋಟಿಸ್ ನೀಡುತ್ತಾರೆ ಯತೀಂದ್ರ ಮಾತನಾಡಿದರೆ ಏಕೆ ನೋಟಿಸ್ ನೀಡುವುದಿಲ್ಲ ಎಂದು ಶಾಸಕ ಇಕ್ಬಾಲ್ ಹುಸೇನ್ ಅವರು ಪ್ರಶ್ನಿಸಿರುವ ಬಗ್ಗೆ ಕೇಳಿದಾಗ, “ಈ ಬಗ್ಗೆ ಹೈಕಮಾಂಡ್ ಅನ್ನು ಕೇಳೋಣ” ಎಂದರು.

ಹೈಕಮಾಂಡ್ ನಾಯಕರನ್ನು ಭೇಟಿಯಾಗುವುದಾಗಿ ತಿಳಿಸಿದ್ದೀರಿ ಎಂದು ಕೇಳಿದಾಗ, “ದೆಹಲಿಗೆ ಹೋದ ಮೇಲೆ ಎಲ್ಲಾ ನಾಯಕರನ್ನು, ಯಾರು ಸಿಗುತ್ತಾರೋ ಅವರನ್ನು ಭೇಟಿ ಮಾಡಲಾಗುವುದು. ಸಂಸತ್ ಅಧಿವೇಶನ ನಡೆಯುತ್ತಿರುತ್ತದೆ. ಬಿಡುವಿದ್ದರೆ ಖಂಡಿತವಾಗಿ ಭೇಟಿ ಮಾಡುತ್ತೇನೆ” ಎಂದರು.

“ಇಂದು ಸಂಜೆ 4 ಗಂಟೆಗೆ ಎಐಸಿಸಿಯಲ್ಲಿ ಸಭೆಯಿದೆ. ವಿವಿಧ ಚುನಾವಣೆಗಳು ಹಾಗೂ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಲಾಗುವುದು. ಚುನಾವಣಾ ದಿನಾಂಕಗಳು ಘೋಷಣೆಯಾಗುವ ಸಾಧ್ಯತೆಯಿದೆ. ಆದ ಕಾರಣಕ್ಕೆ ನನ್ನನ್ನು ಚರ್ಚೆ ನಡೆಸಲು ಕರೆದಿದ್ದಾರೆ. ನಾನು ಹೋಗುತ್ತಿದ್ದೇನೆ” ಎಂದರು.

“ಕೇರಳಕ್ಕೆ ಹೋಗಿದ್ದೆ ನಂತರ ಅಸ್ಸಾಂಗೂ ತೆರಳಬೇಕು. ಇಂದು ಬಜೆಟ್ ಸಭೆ ಇರುವ ಕಾರಣಕ್ಕೆ ಮುಖ್ಯಮಂತ್ರಿಗಳ ಬಳಿ ಬರಲು ಆಗುವುದಿಲ್ಲ ಎಂದು ಮನವಿ ಮಾಡಿದ್ದೆ. ಸೋಮವಾರದಂದು ಅಧಿಕಾರಿಗಳ ಜೊತೆ ಬಜೆಟ್ ಸಭೆ ನಡೆಸಿದ್ದೇನೆ. ಅವರು ಎಲ್ಲವನ್ನು ವಿವರಿಸುತ್ತಾರೆ. ನಂತರ ಬಂದು ಅವರ ಬಳಿ ಮಾತನಾಡುತ್ತೇನೆ” ಎಂದು ತಿಳಿಸಿದರು.

ರಾಜಕೀಯ

ಬಾಯಿ ಮುಚ್ಚಿಕೊಂಡು ಇರಬೇಕು ಎಂಬ ಆದೇಶವನ್ನು ಎಲ್ಲರೂ ಪಾಲಿಸಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಬಾಯಿ ಮುಚ್ಚಿಕೊಂಡು ಇರಬೇಕು ಎಂಬ ಆದೇಶವನ್ನು ಎಲ್ಲರೂ ಪಾಲಿಸಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

"ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು ಎಂದು ಮಲ್ಲಿಕಾರ್ಜುನ ಖರ್ಗೆ ಸಾಹೇಬರು ಹೇಳಿದ್ದಾರೆ. ಅದನ್ನು ನಾವು ಪಾಲನೆ ಮಾಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="119290"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!