ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ಪಾದಯಾತ್ರಿಗಳಿಗೆ ಮತ್ತೆ ಚಿರತೆ ಭೀತಿ ಎದುರಾಗಿದ್ದು, ಬಾಲಕನ ಮೇಲೆ ಚಿರತೆ ದಾಳಿ (Leopard attack) ನಡೆಸಿದೆ.
ಅದೃಷ್ಟವ ಶಾತ್ ಬಾಲಕನಿಗೆ ಯಾವುದೇ ಹಾನಿಯಾಗಿಲ್ಲ. ಸಣ್ಣಪುಟ್ಟ ತರಚಿದ ಗಾಯಗಳಾಗಿವೆ.
ಮಲೆ ಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಚನ್ನಪಟ್ಟಣ ತಾಲೂಕಿನ ಭುವಳ್ಳಿ ಗ್ರಾಮದ ಶ್ರೇಯಸ್ (8 ವರ್ಷ) ಮೇಲೆ ಚಿರತೆ ದಾಳಿ ನಡೆಸಿದೆ.
ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಭಕ್ತಾದಿಗಳು ಪಾದ ಯಾತ್ರೆಯ ಮೂಲಕ ತೆರಳುವುದು ವಾಡಿಕೆ. ಅದರಂತೆ ಪಾದಯಾತ್ರೆಯ ಮೂಲಕ ಪೊನ್ನಾಚಿ ಕ್ರಾಸ್ ನಿಂದ ತಲುಪಿ ನಂತರ ಮುಂದೆ ಅರಣ್ಯ ಪ್ರದೇಶದಲ್ಲಿ ತೆರಳುತ್ತಿದ್ದಾಗ ಬಾಲಕ ಶ್ರೇಯಸ್ ಮೇಲೆ ಚಿರತೆ ದಾಳಿ ಮಾಡಿದೆ.
ಗಾಯಗೊಂಡಿದ್ದ ಬಾಲಕನನ್ನು ಜೊತೆಯಲ್ಲಿದ್ದ ಭಕ್ತಾದಿಗಳು ಬಸ್ಸಿನ ಮೂಲಕ ಮಲೆ ಮಾದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ.