ಕಂಪ್ಲಿ ಉತ್ಸವ: ಸಂಭ್ರಮ, ಸಾಂಸ್ಕೃತಿಕ ಇತಿಹಾಸ ಮರುಕಳಿಸಿದ ವೈಭವ ಮೆರವಣಿಗೆ

Kampli Festival: A glorious procession

ಬಳ್ಳಾರಿ: ಐತಿಹಾಸಿಕ ಇತಿಹಾಸವಿರುವ ವಿಜಯನಗರ ಸಾಮ್ರಾಜ್ಯದ ಹೆಬ್ಬಾಗಿಲು ಕಂಪ್ಲಿ ಪಟ್ಟಣದಲ್ಲಿ ಎರಡು ದಿನಗಳ ಕಾಲ ಆಯೋಜಿಸಿರುವ ಕಂಪ್ಲಿ ಉತ್ಸವದ (Kampli Utsav) ಮೊದಲ ದಿನ ಬುಧವಾರ ಕಲಾತಂಡಗಳ ಮೆರವಣಿಗೆ ಜನಮನ ಸೆಳೆಯಿತು.

ಕಂಪ್ಲಿ ಉತ್ಸವದ ಅಂಗವಾಗಿ ಕಂಪ್ಲಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳನ್ನೊಳಗೊಂಡ ಸಂಭ್ರಮದ ಭವ್ಯ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.

ಕಂಪ್ಲಿ ಉತ್ಸವ: ಸಂಭ್ರಮ, ಸಾಂಸ್ಕೃತಿಕ ಇತಿಹಾಸ ಮರುಕಳಿಸಿದ ವೈಭವ ಮೆರವಣಿಗೆ

ಕಲಾ ವಾದ್ಯಗಳ ವೈಭವದ ಮೆರವಣಿಗೆಯು ಪಟ್ಟಣದ ಸಾಂಸ್ಕೃತಿಕ ಕಲಾ ವೈಭವವನ್ನು ಮರುಕಳಿಸಿತು.

ಕಂಪ್ಲಿ ಉತ್ಸವ: ಸಂಭ್ರಮ, ಸಾಂಸ್ಕೃತಿಕ ಇತಿಹಾಸ ಮರುಕಳಿಸಿದ ವೈಭವ ಮೆರವಣಿಗೆ

ಕಂಪ್ಲಿ ಉತ್ಸವದ ಅಂಗವಾಗಿ ಏರ್ಪಡಿಸಿದ್ದ ಕಲಾ ತಂಡಗಳ ಮೆರವಣಿಗೆಗೆ ಕಂಪ್ಲಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳಿ ನಿಯಮಿತ (ಕಾವೇರಿ ಹ್ಯಾಂಡ್‌ಲೂಮ್ಸ್) ದ ಅಧ್ಯಕ್ಷರೂ ಆಗಿರುವ ಜೆ.ಎನ್.ಗಣೇಶ್ ಅವರು ಪಟ್ಟಣದ ಕೋಟೆ ಪ್ರದೇಶದಲ್ಲಿ ಕಂಪಿಲರಾಯ, ಗಂಡುಗಲಿ ಕುಮಾರರಾಮ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಚಾಲನೆ ನೀಡಿದರು.

ಕಂಪ್ಲಿ ಉತ್ಸವ: ಸಂಭ್ರಮ, ಸಾಂಸ್ಕೃತಿಕ ಇತಿಹಾಸ ಮರುಕಳಿಸಿದ ವೈಭವ ಮೆರವಣಿಗೆ

ಅದ್ಧೂರಿಯಾಗಿ ನಡೆದ ಮೆರವಣಿಗೆ

ವಿವಿಧ ಸಾಂಸ್ಕೃತಿಕ ಕಲಾ ತಂಡದೊಂದಿಗೆ ಮೆರವಣಿಗೆಯು ಪಟ್ಟಣದ ಕೋಟೆ ಪ್ರದೇಶದಿಂದ ಆರಂಭವಾಗಿ ಡಾ.ರಾಜ್ ಕುಮಾರ್ ರಸ್ತೆಯ ಮೂಲಕ ಮಾರ್ಕೆಟ್ ಮಾರ್ಗವಾಗಿ ಮಸೀದಿ ಮೂಲಕ ಅಂಬೇಡ್ಕರ್ ವೃತ್ತದಿಂದ ಸೋಮೇಶ್ವರ ದೇವಸ್ಥಾನದವರೆಗೆ ಸಾಗಿತು.

ಕಂಪ್ಲಿ ಉತ್ಸವ: ಸಂಭ್ರಮ, ಸಾಂಸ್ಕೃತಿಕ ಇತಿಹಾಸ ಮರುಕಳಿಸಿದ ವೈಭವ ಮೆರವಣಿಗೆ

ಗಮನ ಸೆಳೆದ ವಿವಿಧ ಕಲಾತಂಡಗಳು

ಮೆರವಣಿಗೆಯಲ್ಲಿ ಕಳಸ-ಅರ್ಧ ಕುಂಭ ಹೊತ್ತ ಮಹಿಳೆಯರು, ಸಾಂಸ್ಕೃತಿಕ ಕಲಾತಂಡಗಳಾದ ತಾಷೆ ರಂಡೋಲ್, ಡೊಳ್ಳು ಕುಣಿತ, ಹಗಲುವೇಷ, ನಂದಿಧ್ವಜ, ಮರಗಾಲು ಕುಣಿತ, ಕಹಳೆ ವಾದನ, ವೀರಗಾಸೆ ಕುಣಿತ, ಹಕ್ಕಿಪಿಕ್ಕಿ, ಕಂಸಾಳೆ, ವೀರಗಾಸೆ, ರಾಮಾಯಣ ವೇಷಧಾರಿತ ಪಾತ್ರಧಾರಿಗಳು, ಜನಪದ ಮಹಿಳಾ ನೃತ್ಯ ತಂಡದಿಂದ ಜಾನಪದ ನೃತ್ಯ, ಕುದುರೆ ಕುಣಿತ, ಗೊರವರ ಕುಣಿತ, ಹಲಗೆ ವಾದನ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಉತ್ಸವವದ ಮೆರಗನ್ನು ಇನ್ನಷ್ಟು ಹೆಚ್ಚಿಸಿದವು.

ಕಂಪ್ಲಿ ಉತ್ಸವ: ಸಂಭ್ರಮ, ಸಾಂಸ್ಕೃತಿಕ ಇತಿಹಾಸ ಮರುಕಳಿಸಿದ ವೈಭವ ಮೆರವಣಿಗೆ

ಈ ಸಂದರ್ಭದಲ್ಲಿ ಕಂಪ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸರಾವ್, ತಹಶೀಲ್ದಾರ ಜೂಗಲ ಮಂಜುನಾಯಕ, ತೋರಣಗಲ್ಲು ಡಿಎಸ್ಪಿ ಪ್ರಸಾದ್ ಗೋಖಲೆ, ತಾಪಂ ಇಒ ಆರ್.ಕೆ.ಶ್ರೀಕುಮಾರ್, ಪುರಸಭೆ ಮುಖ್ಯಾಧಿಕಾರಿ ಮಲ್ಲಿಕಾರ್ಜುನ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸಾರ್ವಜನಿಕರು ಇದ್ದರು.

ರಾಜಕೀಯ

ಜನರ ಸಮಸ್ಯೆಗೆ ದನಿಯಾಗಿದ್ದ ರಾಘವ್ ಚಡ್ಡಾಗೆ ಆಪ್ ಶಾಕ್..!

ಜನರ ಸಮಸ್ಯೆಗೆ ದನಿಯಾಗಿದ್ದ ರಾಘವ್ ಚಡ್ಡಾಗೆ ಆಪ್ ಶಾಕ್..!

ಜನಪರ ಸಮಸ್ಯೆಗಳನ್ನು ರಾಜ್ಯಸಭೆಯಲ್ಲಿ ಪ್ರಶ್ನಿಸುವ ಮೂಲಕ ಮೋದಿ (Modi) ಸರ್ಕಾರದ ವಿರುದ್ದ ಗುಡುಗುತ್ತಿದ್ದ ಆಮ್ ಆದ್ಮಿ ಪಕ್ಷದ (APP) ಸಂಸದ ರಾಘವ್ ಚಡ್ಡಾ (Raghav Chadha) ಅವರ ರೆಕ್ಕೆ ಕತ್ತರಿಸುವ ಕೆಲಸವನ್ನು ತನ್ನದೇ ಪಕ್ಷ

[ccc_my_favorite_select_button post_id="120655"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ದೊಡ್ಡಬಳ್ಳಾಪುರ: ಅಪಘಾತ.. ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಆಕ್ರೋಶ..!

ದೊಡ್ಡಬಳ್ಳಾಪುರ: ಅಪಘಾತ.. ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ಆಕ್ರೋಶ..!

ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿ ಹೊಡೆದ (Accident) ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ಹಿಂದೂಪುರ- ಬೆಂಗಳೂರು ನಡುವಿನ ರಾಜ್ಯ ಹೆದ್ದಾರಿ ದೊಡ್ಡಬಳ್ಳಾಪುರ ಎಪಿಎಂಸಿ ಮಾರುಕಟ್ಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="120640"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]