ಶಾಸಕರು ಮಜಾ ಮಾಡಲು ವಿದೇಶ ಪ್ರವಾಸ ಹೋಗುತ್ತಿದ್ದಾರೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

Two and a half thousand crores of bribery is illegal in the Excise Department.. R. Ashoka alleges against the minister

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಖಾಲಿಯಾಗಿದ್ದು, ಇದು ಸರ್ಕಾರ ಪಾಪರ್‌ ಆಗಿರುವುದರ ಸಂಕೇತವಾಗಿದೆ. ಇಂತಹ ಸಮಯದಲ್ಲಿ ಕಾಂಗ್ರೆಸ್‌ ಶಾಸಕರು ಮಜಾ ಮಾಡಲು ವಿದೇಶ ಪ್ರವಾಸ ಹೋಗುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಔಷಧಿ ಖರೀದಿಸಲು ಹಣವಿಲ್ಲ. ಪ್ಯಾರಾಸಿಟಾಮಾಲ್‌ನಿಂದ ಆರಂಭವಾಗಿ ಅಗತ್ಯವಾದ 800 ಕ್ಕೂ ಅಧಿಕ ಔಷಧಿಗಳು ಲಭ್ಯವಿಲ್ಲವೆಂದು ನಾನು 2024 ರ ಡಿಸೆಂಬರ್‌ನ ಅಧಿವೇಶನದಲ್ಲಿ ಹೇಳಿದ್ದೆ. ಆಗ ಸಚಿವ ದಿನೇಶ್‌ ಗುಂಡೂರಾವ್‌, ಕೂಡಲೇ ಔಷಧಿ ಖರೀದಿಸಲಾಗುವುದು ಎಂದು ಹೇಳಿದ್ದರು. ಇನ್ನೂ ಯಾವುದೇ ಔಷಧಿ ದಾಸ್ತಾನಿಲ್ಲ. ಈ ಮೂಲಕ ಆರೋಗ್ಯ ಇಲಾಖೆ ಅನಾರೋಗ್ಯ ಪೀಡಿತವಾಗಿದೆ. ಆಸ್ಪತ್ರೆಗಳ ನಿರ್ವಹಣೆಯ ಹಣದಿಂದ ಔಷಧಿ ಖರೀದಿಸುವ ದುಸ್ಥಿತಿಗೆ ಸರ್ಕಾರ ಬಂದಿದೆ. ಸಾಲ ಮಾಡಿ ಔಷಧಿ ಖರೀದಿಸುವ ಸ್ಥಿತಿ ಬಂದಿದೆ ಎಂದರು.

ಮಾರ್ಚ್‌ಗೆ ಟೆಂಡರ್‌ಗೆ ಅಂತಿಮಗೊಳಿಸಲು ಆರೋಗ್ಯ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ. ಅಂದರೆ ಮೇ, ಜೂನ್‌ವರೆಗೆ ಸರ್ಕಾರಿ ಆಸ್ಪತ್ರೆಗಳಿಗೆ ಔಷಧಿ ಬಾರದೇ ಇದ್ದರೆ ರೋಗಿಗಳು ಸಾಯಬೇಕಾಗುತ್ತದೆ. ಅಪಘಾತವಾದರೆ ಬ್ಯಾಂಡೇಜ್‌ ಕೂಡ ಸಿಗುವುದಿಲ್ಲ. ಕೆಲವು ಆಸ್ಪತ್ರೆಗಳಲ್ಲಿ ವೈದ್ಯರು ಅನಿವಾರ್ಯವಾಗಿ ಹೊರಗೆ ಔಷಧಿ ಖರೀದಿಗೆ ಚೀಟಿ ಬರೆದುಕೊಡುತ್ತಿದ್ದಾರೆ. ನಮ್ಮ ಸರ್ಕಾರ ಇದ್ದಾಗ ಹೊರಗೆ ಔಷಧಿ ಖರೀದಿಗೆ ಚೀಟಿ ಬರೆಯಬಾರದೆಂದು ಸೂಚನೆ ನೀಡಲಾಗಿತ್ತು. ಕೇಂದ್ರ ಸರ್ಕಾರದ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಲು ಸರ್ಕಾರ ಪ್ರಯತ್ನ ಮಾಡಿದೆ. ಈಗ ಜನರು ಜನೌಷಧಿ ಕೇಂದ್ರಗಳಲ್ಲೇ ಔಷಧಿ ಖರೀದಿಸುತ್ತಿದ್ದಾರೆ ಎಂದರು.

ಕಳೆದ ಬಜೆಟ್‌ನಲ್ಲಿ ಆರೋಗ್ಯ ಇಲಾಖೆಗೆ 30% ಅನುದಾನ ಕಡಿತವಾಗಿದೆ. ಐದು ಗ್ಯಾರಂಟಿಗಳಿಗಾಗಿ ಜನರಿಗೆ ನೀಡುವ ಔಷಧಿಯನ್ನು ಕೊರತೆ ಮಾಡಲಾಗಿದೆ. ಕೆಲವು ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ದ್ರಾವಣ, ನೋವು ನಿವಾರಕ ಔಷಧಿ ಇಲ್ಲದೆ ಆಪರೇಶನ್‌ ಮಾಡುವುದಿಲ್ಲ ಎಂದು ಹೇಳಲಾಗಿದೆ. ಕಮಿಶನ್‌ ತರುವ ಇಲಾಖೆಗಳಿಗೆ ಗಮನ ನೀಡಿ, ಜನರ ಸಮಸ್ಯೆ ಬಗೆಹರಿಸುವ ಇಲಾಖೆಗಳನ್ನು ಕಡೆಗಣಿಸಲಾಗಿದೆ. ಇದು ಸರ್ಕಾರ ಪಾಪರ್‌ ಆಗಿರುವುದಕ್ಕೆ ಕನ್ನಡಿ ಎಂದರು.

ವಿದೇಶ ಪ್ರವಾಸ

ಪಶುಸಂಗೋಪನಾ ಸಚಿವರು ಶಾಸಕರನ್ನು ಫಾರಿನ್‌ ಟೂರ್‌ಗೆ ಕರೆದೊಯ್ಯುತ್ತಿದ್ದಾರೆ. ಸರ್ಕಾರದ ಹಣದಲ್ಲಿ ವಿದೇಶ ಪ್ರವಾಸ ಹೋಗುವುದನ್ನು ಹಿಂದೆಯೇ ತಡೆಯಲಾಗಿದೆ. ಪ್ರವಾಸ ಹೋಗಬೇಕೆಂದರೆ ಆ ನಿಯೋಗದಲ್ಲಿ ಎಲ್ಲ ಪಕ್ಷಗಳ ಸದಸ್ಯರು ಇರುತ್ತಾರೆ. ಸಚಿವರು ಕರೆದುಕೊಂಡು ಹೋಗುತ್ತಿದ್ದಾರೆ ಎಂದರೆ ಇದಕ್ಕೆ ಸರ್ಕಾರ ಅನುಮತಿ ಹೇಗೆ ನೀಡಿದೆ? ಇದಕ್ಕೆ ಯಾರು ಹಣ ಖರ್ಚು ಮಾಡುತ್ತಿದ್ದಾರೆ ಎಂದು ತಿಳಿಸಬೇಕಿದೆ. ಸ್ಪೀಕರ್‌ ಯು.ಟಿ.ಖಾದರ್‌ ಇದನ್ನು ತಡೆಯಬೇಕಿದೆ ಎಂದರು.

ಕಾಂಗ್ರೆಸ್‌ ಶಾಸಕರು ಯಾವ ಅಧ್ಯಯನ ಮಾಡಲು ಹೋಗುತ್ತಿದ್ದಾರೆ ಎಂದು ಗೊತ್ತಿಲ್ಲ. ಈಗ ಬಜೆಟ್‌ ತಯಾರಿ ನಡೆಯುತ್ತಿದ್ದು, ಶಾಸಕರು ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಬೇಕಿದೆ. ಇಂತಹ ಸಮಯದಲ್ಲಿ ಸ್ವಂತ ಹಣದಲ್ಲಿ ಹೋಗುತ್ತಿದ್ದೇವೆ ಎಂದು ಶಾಸಕ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಸ್ವಂತ ಹಣದಲ್ಲಿ ಅಧ್ಯಯನ ಪ್ರವಾಸ ಮಾಡಲು ಸಾಧ್ಯವಿಲ್ಲ. ಅಧ್ಯಯನ ಮಾಡಿದರೂ ನಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು. ಆದರೆ ಇಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ನಿರ್ಧಾರ ಕೈಗೊಳ್ಳಲು ವಿದೇಶಕ್ಕೆ ಹೋಗುತ್ತಿದ್ದಾರೆ ಎಂಬ ಅನುಮಾನವಿದೆ. ಇದು ಒಳ್ಳೆಯ ಸಂಸ್ಕೃತಿಯಲ್ಲ. ಸರ್ಕಾರಿ ಶಾಲೆಯ ಮಕ್ಕಳು ಬಸ್‌ ಇಲ್ಲದೆ ಜೆಸಿಬಿ, ಟಿಪ್ಪರ್‌ನಲ್ಲಿ ಪ್ರಯಾಣ ಮಾಡುತ್ತಿದ್ದರೆ, ಶಾಸಕರು ಎಮಿರೇಟ್ಸ್‌ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದಾರೆ ಎಂದರು.

ಅಬಕಾರಿ ಇಲಾಖೆಯ ಭ್ರಷ್ಟಾಚಾರವನ್ನು ಮುಚ್ಚಿಹಾಕುವ ಪ್ರಯತ್ನ ನಡೆದಿದ್ದು, ಬಿಜೆಪಿ ಇದರ ವಿರುದ್ಧ ಹೋರಾಟ ಮಾಡುತ್ತಿದೆ. ಇದನ್ನು ತನಿಖೆ ಮಾಡದಿದ್ದರೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಏನೂ ಕೇಳಿಲ್ಲ. ಏಕೆಂದರೆ ಇದರಲ್ಲಿ ಸಿಎಂ ಸಿದ್ದರಾಮಯ್ಯ ಜೊತೆಗೆ ರಾಹುಲ್‌ ಗಾಂಧಿಗೂ ಹಣ ದೊರೆಯುತ್ತಿದೆ. ಬಿಜೆಪಿ ಸರ್ಕಾರವಿದ್ದಾಗ ಆರೋಪ ಬಂದಾಗ ಸಚಿವರ ರಾಜೀನಾಮೆ ಪಡೆದು ತನಿಖೆ ಮಾಡಿಸಲಾಗಿತ್ತು ಎಂದರು.

ಕಾಂಗ್ರೆಸ್‌ ಪಕ್ಷ ಹಾಗೂ ಮಾಜಿ ಪ್ರಧಾನಿ ಪಂಡಿತ್‌ ಜವಹರಲಾಲ್‌ ನೆಹರು ವಂದೇಮಾತರಂ ಗೀತೆಯ ಸಾಲುಗಳನ್ನು ಕಡಿತ ಮಾಡಿ ಹಾಡಲು ಮಾತ್ರ ಅವಕಾಶ ಮಾಡಿತ್ತು. ವಂದೇಮಾತರಂ ಗೀತೆಯನ್ನು ಸಂಪೂರ್ಣವಾಗಿ ಹಾಡುವ ಕುರಿತು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ತಿಳಿಸುತ್ತೇನೆ. ಹಾಡಿನಲ್ಲಿ ದುರ್ಗೆಯ ಹೆಸರು ಇದೆ ಎಂಬ ಕಾರಣಕ್ಕೆ ಗೀತೆಯನ್ನು ಕಡೆಗಣಿಸಲಾಗಿತ್ತು ಎಂದರು.

ಬೇರೆ ಪಕ್ಷದಿಂದ ಬಂದವರಿಗೆ ಅಧಿಕಾರ ನೀಡಲಾಗಿದೆ ಎಂದು ಡಿ.ಕೆ.ಸುರೇಶ್‌ ಬಹಳ ತಡವಾಗಿ ಹೇಳಿ ಬಂಡಾಯದ ಬಾವುಟ ಹಾರಿಸಿದ್ದಾರೆ. ಇನ್ನು ಡಿ.ಕೆ.ಶಿವಕುಮಾರ್‌ ಕಾದುಕೊಂಡಿದ್ದರೆ ಯಾವುದೇ ಪ್ರಯೋಜನವಿಲ್ಲ. ಮೂಲ ಕಾಂಗ್ರೆಸ್ಸಿಗರು ದಿಕ್ಕಿಲ್ಲದಂತಾಗಿದ್ದಾರೆ ಎಂದರು.

ಆರ್‌ಸಿಬಿ ಸಂಭ್ರಮಾಚರಣೆಯನ್ನು ತಪ್ಪಾಗಿ ಆಯೋಜಿಸಿದ್ದು ಕಾಂಗ್ರೆಸ್‌ ಸರ್ಕಾರದ ತಪ್ಪು. ಆದರೆ ಆರ್‌ಸಿಬಿ ಹಾಗೂ ಕ್ರಿಕೆಟ್‌ ಅಸೋಸಿಯೇಶನ್‌ ಮೇಲೆ ತಪ್ಪು ಹೊರಿಸಲಾಗಿದೆ. ಸರ್ಕಾರಕ್ಕೆ ಯೋಗ್ಯತೆ ಇದ್ದರೆ ಭದ್ರತೆ ನೀಡಲಿ ಎಂದರು.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]