Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರಿಂದು ಸಂಯಮದಿಂದ ವ್ಯವಹರಿಸಿ

Astrology: ಶುಕ್ರವಾರ, ಫೆಬ್ರವರಿ 13, 2026, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ಆರ್ಥಿಕವಾಗಿ ಹಾಗೂ ಸಾಂಸಾರಿಕವಾಗಿ ಉತ್ತಮ ಕೆಲಸ ಗಳಾದರೂ ಕೆಲವು ಹಿತಶತ್ರುಗಳ ಕಾಟದಿಂದ ಮನಸ್ಸಿಗೆ ನೋವುಂಟಾ ಗಲಿದೆ. ಹೊಗಳಿಕೆಗೆ ಮರುಳಾಗದಿರಿ. ಹಂತ ಹಂತವಾಗಿ ಯಶಸ್ಸು ಕಂಡು ಬಂದೀತು.

ವೃಷಭ ರಾಶಿ

ಲಾಭ ಸ್ಥಾನಗತನಾದ ಗುರುವಿನಿಂದಾಗಿ ಅನಿರೀಕ್ಷಿತ ಎಷ್ಟೋ ಕಾರ್ಯ ಸಾಧನೆಯಾಗಲಿವೆ. ಮುಖ್ಯವಾಗಿ ದೂರ ಸಂಚಾರ, ಪ್ರಯಾಣದಲ್ಲಿ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯವಿದೆ. ದಿನಾಂತ್ಯದಲ್ಲಿ ಸಂಭ್ರಮವಿದೆ.

ಮಿಥುನ ರಾಶಿ

ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಿರಿ. ಕೋರ್ಟು ಕಚೇರಿ ಕೆಲಸದಲ್ಲಿ ಹೆಚ್ಚಿನ ಜಾಗ್ರತೆ ವಹಿಸಿರಿ, ಮುಖ್ಯವಾಗಿ ಯಾವುದೇ ಕೆಲಸ ಕಾರ್ಯ ಅರ್ಧಕ್ಕೆ ನಿಂತು ಆರ್ಥಿಕ ಮುಗ್ಗಟ್ಟು ಕಾಡಬಹುದು ಜಾಗರೂಕರಾಗಿರಿ.

ಕಟಕ ರಾಶಿ

ಕೆಟ್ಟ ಜನರ ಸಹಕಾರದಿಂದ ಅಪಕೀರ್ತಿ ಉಂಟಾದೀತು. ವೈಯಕ್ತಿಕ ವಾಗಿ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಕೌಟುಂಬಿಕ ಸಮಸ್ಯೆಗಳು ಕಾಡಬಹುದು. ನೌಕರ ವರ್ಗದವರಿಗೆ ಉತ್ತಮ ಬದಲಾವಣೆ ಕಂಡು ಬರಲಿದೆ.

ಸಿಂಹ ರಾಶಿ

ಮಕ್ಕಳ ವಿದ್ಯಾಭ್ಯಾಸ, ಉದ್ಯೋಗಿಗಳ ಉದ್ಯೋಗದ ಸಮಸ್ಯೆ ಕಂಡು ಬರಬಹುದು. ನಿಮ್ಮ ತಾಳ್ಮೆಗೆ ಇದು ಸಕಾಲವೆನಿಸಲಿದೆ. ಹಲವು ಸಂದರ್ಭಗಳಲ್ಲಿ ತಾಳ್ಮೆಯೇ ಉತ್ತರ ನೀಡಲಿದೆ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನವಹಿಸಿ.

ಕನ್ಯಾ ರಾಶಿ

ಕೆಲಸ ಕಾರ್ಯಗಳಲ್ಲಿ ವಿಘ್ನ, ಭಯ ಕಂಡು ಬಂದರೂ ಯಶಸ್ಸು ತೋರಿ ಬರಲಿದೆ. ಸಿಟ್ಟಿನ ನಿರ್ಣಯಗಳಿಂದ ಅನಾವಶ್ಯಕ ತೊಂದರೆ ಅನುಭವಿಸುವಿರಿ ಸಂಯಮದಿಂದ ವ್ಯವಹರಿಸಿ.

ತುಲಾ ರಾಶಿ

ಏಕಾದಶ ಸ್ಥಾನ ರಾಹು ವಿನಿಂದಾಗಿ ಹಾಗೂ ಶನಿಯ ಲಾಭ ಸ್ಥಾನದಿಂದಾಗಿ ಉನ್ನತಿ ತೋರಿ ಬರಲಿದೆ, ಅದಾಗ್ಯೂ ಗುರುವಿನ ವ್ಯಯಸ್ಥಿತಿ ಅನೇಕ ರೀತಿಯ ಖರ್ಚು ವೆಚ್ಚಗಳ ಹಾದಿ ಎದುರಾಗಬಹುದು. ಉದ್ಯೋಗಿಗಳಿಗೆ ವೇತನ ಹೆಚ್ಚಳ ತರಲಿದೆ.

ವೃಶ್ಚಿಕ ರಾಶಿ

ಮಹಿಳೆಯರಿಗೆ ಉದ್ಯೋಗ ಲಾಭವಿರುತ್ತದೆ. ಕೃಷಿಕ ವರ್ಗದವರಿಗೆ ಆದಾಯ ವರ್ಧಿಸಲಿದೆ. ಸಂಧಿ ನೋವು ಮೂಳೆ ಮುರಿತ, ಅವಘಡಗಳಿಗೆ ಕಾರಣವಾದೀತು. ಆಲಸ್ಯ, ಉದಾಸೀನತೆ ಉಂಟಾಗಬ ಹುದು. ಕ್ಷೇತ್ರ ದರ್ಶನ ಭಾಗ್ಯ ಬರಲಿದೆ.

ಧನಸ್ಸು ರಾಶಿ

ಉದ್ಯೋಗಿಗಳಿಗೆ ವಿದೇಶ ದಲ್ಲಿ ಆಕರ್ಷಕವಾದ ದುಡಿಮೆಗೆ ಅವಕಾಶ ಗಳು ಒದಗಿ ಬರಲಿವೆ. ನಿರುದ್ಯೋಗಿಗಳಿಗೆ ಉದ್ಯೋಗ ಕಂಡುಕೊಳ್ಳಲು ಇದು ಸಕಾಲ. ವ್ಯಾಪಾರ ವ್ಯವಹಾರಗಳು ಚೇತರಿಕೆ ಕೊಟ್ಟು ಆದಾಯ ವೃದ್ಧಿಸಲಿವೆ.

ಮಕರ ರಾಶಿ

ಸಾಮಾಜಿಕವಾಗಿ ಉನ್ನತ ಸ್ಥಾನಮಾನಗಳು, ಕ್ರಿಯಾ ಶೀಲತೆಯಲ್ಲಿ ಪ್ರಶಂಸೆ ಸಿಗಲಿದೆ. ಮುಖ್ಯವಾಗಿ ನಿಮ್ಮ ವಿಶ್ವಾಸದ ದುರುಪಯೋಗವಾಗದಂತೆ ನಿಮ್ಮಲ್ಲಿ ಎಚ್ಚರವಿರಲಿ. ಮಾತಿನಿಂದ ಅನಾವಶ್ಯಕ ಮನಸ್ತಾಪವಾಗದಂತೆ ಜಾಗ್ರತೆ ವಹಿಸಿರಿ.

ಕುಂಭ ರಾಶಿ

ಕ್ರೀಡಾ ಜಗತ್ತಿನ ಪಟುಗಳಿಗೆ ಜಯವು ಕಾದಿದೆ. ಹದಗೆಟ್ಟ ಆರೋಗ್ಯ ಉತ್ತಮ ರೀತಿಯಲ್ಲಿ ಸುಧಾರಿಸಲಿದೆ. ಕೃಷಿ ಹಾಗೂ ರೈತ ವರ್ಗಕ್ಕೆ ಸಕಾಲದಲ್ಲಿ ಬೆಳೆಗಳ ವಿಲೇವಾರಿ ಧನಲಾಭವನ್ನು ಕೊಡಲಿದೆ. ಆರೋಗ್ಯದಲ್ಲಿ ಜಾಗ್ರತೆ.

ಮೀನ ರಾಶಿ

ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡು ಜೀವನದ ಬಹು ಮುಖ್ಯ ಗುರಿಯೊಂದನ್ನು ಸಾಧಿಸಲಿದ್ದೀರಿ. ಹಳೆಯ ಬಾಕಿ ಕೆಲಸಗಳು ಅತೀ ಶೀಘ್ರದಲ್ಲಿ ನೆರವೇರಲಿವೆ. ರಾಜಕೀಯ ವರ್ಗ ದವರಿಗೆ ಉತ್ತಮ ಭವಿಷ್ಯವಿದೆ.

ತಿಥಿ: ಏಕಾದಶಿ
ನಕ್ಷತ್ರ: ಮೂಲ ನಕ್ಷತ್ರ.

ರಾಹುಕಾಲ: 10:30AM ರಿಂದ 12:00PM
ಗುಳಿಕಕಾಲ: 07:30AM ರಿಂದ 09:00AM
ಯಮಗಂಡಕಾಲ: 03:00PM ರಿಂದ 04:30PM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಬಿಜೆಪಿ ಏಜೆಂಟ್‌ಗಳಂತೆ ವರ್ತಿಸಬೇಡಿ: ನ್ಯೂಸ್ ಚಾನಲ್‌ಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ| Video

ಬಿಜೆಪಿ ಏಜೆಂಟ್‌ಗಳಂತೆ ವರ್ತಿಸಬೇಡಿ: ನ್ಯೂಸ್ ಚಾನಲ್‌ಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ| Video

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸುತ್ತಲೇ ಸುತ್ತುತ್ತಿದ್ದ ರಾಷ್ಟ್ರ ರಾಜಕಾರಣ, ಇತ್ತೀಚೆಗೆ ಹಲವು ಕಾರಣಗಳಿಂದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸುತ್ತ ಸುತ್ತುತ್ತಿದೆ.

[ccc_my_favorite_select_button post_id="119385"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!