Don't act like BJP agents: Rahul Gandhi lashes out at news channels

ಬಿಜೆಪಿ ಏಜೆಂಟ್‌ಗಳಂತೆ ವರ್ತಿಸಬೇಡಿ: ನ್ಯೂಸ್ ಚಾನಲ್‌ಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ| Video

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸುತ್ತಲೇ ಸುತ್ತುತ್ತಿದ್ದ ರಾಷ್ಟ್ರ ರಾಜಕಾರಣ, ಇತ್ತೀಚೆಗೆ ಹಲವು ಕಾರಣಗಳಿಂದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸುತ್ತ ಸುತ್ತುತ್ತಿದೆ.

ಎಪ್ಸ್ಟೀನ್ ಪೈಲ್ಸ್, ಮಾಜಿ ಸೇನಾಧಿಕಾರಿ ನರಾವಣೆ ಅವರ ಅಪ್ರಕಟಿತ ಪುಸ್ತಕ, ಭಾರತದ ಮೇಲೆ ಅಮೇರಿಕಾ ಶೇ.18 ಸುಂಕ, ಅಮೇರಿಕಾಗೆ ಭಾರತದಿಂದ ಶೂನ್ಯ ಶುಲ್ಕದ ಟ್ರೇಡ್ ಮಾಡಿ ಕೊಂಡಿರುವ ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದು, ವಿರೋಧ ಪಕ್ಷಗಳು, ದೇಶದ ಜನತೆ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡುವಂತಾಗಿದೆ.

ಇನ್ನೂ ಬುಧವಾರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಜೆಟ್ ಮೇಲಿನ ಚರ್ಚೆ ಸಂಧರ್ಭದಲ್ಲಿ ಮಾತನಾಡಿರುವ ವಾಗ್ದಾಳಿ, ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಮೋದಿ ಸರ್ಕಾರವನ್ನು ಗಲಿಬಿಲಿಗೊಳಿಸಿದೆ.

ಮತ್ತೊಂದೆಡೆ ಮೋದಿ ಸರ್ಕಾರದ ಪರವಾಗಿ ಸುದ್ದಿ ಮಾಡುತ್ತವೆ ಎಂದು ಗೋದಿ ಮೀಡಿಯಾ ಎಂದು ಬಿರುದು ಪಡೆದಿರುವ ಕೆಲ ಖಾಸಗಿ ಚಾನಲ್‌ಗಳ ವಿರುದ್ಧ ನಿನ್ನೆ ರಾಹುಲ್ ಗಾಂಧಿ ಬಹಿರಂಗವಾಗಿ ಕಿಡಿಕಾರಿದ್ದು, ಮಾಧ್ಯಮಗಳ ವಲಯದಲ್ಲಿಯೂ ತೀವ್ರ ಚರ್ಚೆಗೆ ಕಾರಣವಾಗಿದೆ.

ಹೌದು ಗುರುವಾರ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ನಿರ್ಣಯ ಮಂಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೋಟಿಸ್ ಸಲ್ಲಿಸಿದ ನಂತರ, ಈ ಬಗ್ಗೆ ಮಾಧ್ಯಮಗಳು ಕೇಳಿದಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಸರ್ಕಾರದ ಕೀವರ್ಡ್” ತೆಗೆದುಕೊಂಡು ಅದರ ಬಗ್ಗೆ ಕಾರ್ಯಕ್ರಮಗಳನ್ನು ನಡೆಸುತ್ತೀರಿ. ಆ ಮೂಲಕ “ದೇಶಕ್ಕೆ ಅಪಚಾರ” ಮಾಡುತ್ತಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಸತ್ತಿನಲ್ಲಿ ವಿಷಯಾಧಾರಿತ ನಿಲುವಳಿ ಸೂಚನೆಯ ಕುರಿತು ಗಾಂಧಿಯವರನ್ನು ಪ್ರಶ್ನಿಸಿದಾಗ, ಈ ದಿನ ಮಾಧ್ಯಮಗಳಿಗೆ ಒದಗಿಸಲಾದ ಕೀವರ್ಡ್ ಅದೇನಾ ಎಂದು ಅವರು ಲೇವಡಿ ಮಾಡಿದರು.

“ಕುಚ್ ತೋ ಅಪ್ನಾ ಕಾಮ್ ಕರಾ ಕರೋ ಭಾಯ್ ( ಕನಿಷ್ಠ ಆದರೂ ನೀವು ನಿಮ್ಮ ಕೆಲವು ಕೆಲಸಗಳನ್ನು ಮಾಡಬೇಕು). ನೀವು ಬಿಜೆಪಿಯಿಂದ ನೇಮಕವಾಗಿರುವ ಸಂಪೂರ್ಣವಾಗಿ ಉದ್ಯೋಗಿಯಾಗಿಲ್ಲ. ಸ್ವಲ್ಪ ವಸ್ತುನಿಷ್ಠ ಕೆಲಸ ಮಾಡಲು ಪ್ರಯತ್ನಿಸಿ. ಇದು ನಿಜವಾಗಿಯೂ ನಾಚಿಕೆಗೇಡಿನ ಸಂಗತಿ. ಅದು ತುಂಬಾ ಜಾಸ್ತಿ ಆಗಿದೆ. ನೀವು ಯೋಚಿಸುವುದಿಲ್ಲವೇ? ನೀವು ಜವಾಬ್ದಾರಿಯುತ ಜನರು. ನೀವು ಮಾಧ್ಯಮದವರು ಎಂಬುದ ಮರೆಯಬೇಡಿ.”

“ನೀವು ವಸ್ತುನಿಷ್ಠರಾಗಿರಬೇಕಾದ ಜವಾಬ್ದಾರಿಯನ್ನು ಹೊಂದಿದ್ದೀರಿ. ಅವರು ಪ್ರತಿದಿನ ನಿಮಗೆ ನೀಡುವ ಒಂದು ಮಾತನ್ನು ನೀವು ಸುಮ್ಮನೆ ನಂಬಿ ಅದರ ಮೇಲೆಯೇ ನಿಮ್ಮ ಇಡೀ ಪ್ರಸಾರ ನಡೆಸಲು ಸಾಧ್ಯವಿಲ್ಲ. ನೀವು ದೇಶಕ್ಕೆ ಅನ್ಯಾಯ ಮಾಡುತ್ತಿದ್ದೀರಿ. ಅದನ್ನು ಗುರುತಿಸಲು ನಿಮಗೆ ಸಾಧ್ಯವಾಗುತ್ತಿಲ್ಲವೇ?” ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತಾದ PTIಗೆ ಸೇರಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪರ-ವಿರೋಧ ಚರ್ಚೆಗೆ ಕಾರಣವಾಗಿದೆ.

ರಾಜಕೀಯ

ಬಿಜೆಪಿ ಏಜೆಂಟ್‌ಗಳಂತೆ ವರ್ತಿಸಬೇಡಿ: ನ್ಯೂಸ್ ಚಾನಲ್‌ಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ| Video

ಬಿಜೆಪಿ ಏಜೆಂಟ್‌ಗಳಂತೆ ವರ್ತಿಸಬೇಡಿ: ನ್ಯೂಸ್ ಚಾನಲ್‌ಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ| Video

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸುತ್ತಲೇ ಸುತ್ತುತ್ತಿದ್ದ ರಾಷ್ಟ್ರ ರಾಜಕಾರಣ, ಇತ್ತೀಚೆಗೆ ಹಲವು ಕಾರಣಗಳಿಂದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸುತ್ತ ಸುತ್ತುತ್ತಿದೆ.

[ccc_my_favorite_select_button post_id="119385"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!