Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರ ಆರ್ಥಿಕ ಸ್ಥಿತಿ ಉತ್ತಮವಾಗಿರುವುದು

Astrology: ಶನಿವಾರ, ಫೆಬ್ರವರಿ 14, 2026, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ

ನಿಮ್ಮ ಸ್ನೇಹಿತರು ಸಕಾಲದಲ್ಲಿ ಸಹಾಯ ಮಾಡುವುದರಿಂದ ನಿಮ್ಮ ಸಮಸ್ಯೆಗಳು ಪರಿಹಾರ ವಾಗುವುದು. ಕಚೇರಿಯಲ್ಲಿ ಹೊಸತಂತ್ರದ ಪ್ರಯೋಗ ಮಾಡುವಿರಿ. ಮತ್ತು ಅದರಲ್ಲಿ ಯಶಸ್ಸನ್ನು ಹೊಂದುವಿರಿ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ವೃಷಭ ರಾಶಿ

ಇಂದು ಕೆಲವು ಸವಾಲು ಗಳಿರುತ್ತವೆ.ಆದರೆ ಅನುಭವಿ ವ್ಯಕ್ತಿಯಿಂದ ಸರಿಯಾದ ಸಲಹೆಯೊಂದಿಗೆ, ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಮನೆಯಲ್ಲಿ ಮಂಗಳ ಕಾರ್ಯ ಆಯೋಜನೆಗೆ ಯೋಜನೆ ರೂಪಿಸಲಾಗುವುದು. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ

ನಿಮ್ಮ ಪ್ರಾಮಾಣಿಕ ಪ್ರಯತ್ನಗಳೇ ನಿಮ್ಮ ಇಂದಿನ ಪರಿಸ್ಥಿತಿಗೆ ಕಾರಣವಾಗಿದೆ . ಆದರೆ ಶುದ್ಧ ಬಂಗಾರದಿಂದ ಒಡವೆಗಳನ್ನು ಮಾಡಲಾಗುವುದಿಲ್ಲ. ಅದಕ್ಕೆ ಸ್ವಲ್ಪವಾದರು ಬಾಳಿನಲ್ಲಿ ಆನಂದ ಸಂತೋಷ ಹೊಂದುವಿರಿ. ಕೌಟುಂಬಿಕ ಜೀವನದಲ್ಲೂ ಸಂತಸ ಕಂಡುಬರುವುದು. ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಹರಿಸಿರಿ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ

ನಿಮ್ಮನ್ನು ರಕ್ಷಿಸುವ ಗ್ರಹಗಳು ಉತ್ತಮ ಸ್ಥಿತಿಯಲ್ಲಿ ರುವುದರಿಂದ ಈ ದಿನ ನಿಮ್ಮ ಮನೋ ಕಾಮನೆಗಳು ಪೂರ್ಣವಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. (ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ

ವಿನಾಕಾರಣ ಆಪಾದನೆ ಗಳನ್ನು ಎದುರಿಸುವ ವಿಚಾರ ಬರಬಹುದು. ಅದಕ್ಕೆ ನೀವು ಕಾರಣರಲ್ಲ ದಿದ್ದರೂ ಗ್ರಹಗಳು ಅಶುಭ ಸ್ಥಿತಿಯಲ್ಲಿ ಸಂಚರಿಸುವ ಮೂಲಕ ನಿಮ್ಮ ಗೌರವ ಘನತೆಗೆ ಕುಂದುಂಟು ಮಾಡುವವು. ನವಗ್ರಹ ಸ್ತೋತ್ರ ಪಠಿಸಿರಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಕನ್ಯಾ ರಾಶಿ

ನಿಮ್ಮ ಇಚ್ಛಾಶಕ್ತಿಗೆ ಹೆಚ್ಚಿನ ಬಲವಿದೆ. ಅನೇಕ ಉತ್ತಮ ಕೆಲಸ ಕಾರ್ಯಗಳಲ್ಲಿ ಗೆಲುವನ್ನು ಸಾಧಿಸುವಿರಿ.ವಿರೋಧಿಗಳು ಸಹಾ ನಿಮ್ಮ ಕರ್ತೃತ್ವ ಶಕ್ತಿಯನ್ನು ಕಂಡು ಬೆರಗಾಗುವರು. ಕೌಟುಂಬಿಕ ಜೀವನದಲ್ಲಿ ನೆಮ್ಮದಿಯ ವಾತಾವರಣ ಕಂಡು ಬರುವುದು. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ

ಅತ್ಯಮೂಲ್ಯವಾದ ದಾಖಲೆ ಪತ್ರಗಳನ್ನು ಕುಟುಂಬ ಸದಸ್ಯರಿಂದ ಕಾಪಾಡುವುದು ಉತ್ತಮ.ಪ್ರವಾಸ ಸಮಯದಲ್ಲಿ ಅವುಗಳಿಗೆ ಸೂಕ್ತ ಭದ್ರತೆಯನ್ನು ಕಾಯ್ದುಕೊಳ್ಳಿರಿ. ಈ ದಿನ ಮಹತ್ತರ ಅಮೂಲ್ಯ ವಸ್ತುಗಳನ್ನು ಕಳೆದು ಕೊಳ್ಳುವ ಸಾಧ್ಯತೆ ಇದೆ ಎಚ್ಚರಿಕೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ಸಂಕಷ್ಟದ ದಿನಗಳಿಂದ ಹೇಗೆ ಪಾರಾಗಬಹುದೆಂಬುದು ನಿಮ್ಮ ಅನುಭವ ತಿಳಿಸುತ್ತದೆ. ಈ ದಿನದ ಕ್ಲಿಷ್ಟಕರ ಸನ್ನಿವೇಶವನ್ನೂ ಸಹ ಭಗವಂತನ ದಯೆಯಿಂದ ಎದುರಿಸಿ ಯಶಸ್ಸನ್ನು ಹೊಂದುವಿರಿ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ

ನಿಮ್ಮ ಕ್ರಿಯಾಶೀಲ ಮತ್ತು ಯೋಜನಬದ್ಧ ಪ್ರಾವೀಣ್ಯ ಗೌರವ ಆದರಗಳನ್ನು ತಂದು ಕೊಡುವುದು. ಹಿತಶತ್ರುಗಳ ಬಗ್ಗೆ ಎಚ್ಚರದಿಂದ ಇರಿ.(ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ

ಮನೆಯ ವಿಚಾರಗಳಲ್ಲಿ ಕಾಳಜಿ ವಹಿಸಲು ಮುಂದಾಗುವಿರಿ. ಇದು ನಿಮ್ಮ ಸಂಗಾತಿಯ ಹರ್ಷಕ್ಕೆ ಕಾರಣವಾಗುವುದು.ಅನೇಕ ದಿನಗಳಿಂದ ನಿಶ್ಚಯಿಸಿದ್ದ ಕಾರ್ಯಗಳಿಗೆ ಚಾಲನೆ ದೊರೆಯುವುದು. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ

ಈ ದಿನ ಬರುವ ಅಡೆ – ತಡೆಗಳನ್ನು ಧೈರ್ಯವಾಗಿ ಎದುರಿಸುವಿರಿ. ಗುರುವು ನಿಮ್ಮ ಬೆಂಗಾವಲಿಗೆ ನಿಲ್ಲುವರು . ಹಲವು ಬದಲಾವಣೆಗಳಿಗೆ ಇಂದು ಸಾಕ್ಷಿಯಾಗುವ ಸಂಭವ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು. (ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ

ಉತ್ಸಾಹ ಹಾಗೂ ಸಮರ್ಪಕ ನಡೆ ನುಡಿಗಳಿಂದಲೇ ಜನರನ್ನು ಆಕರ್ಷಿಸುವಿರಿ. ಪ್ರಶಂಸೆಗಳ ಸುರಿಮಳೆಯಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮ ವಾಗಿರುತ್ತದೆ. ಕೌಟುಂಬಿಕ ಜೀವನದಲ್ಲಿ ಮಾನಸಿಕ ನೆಮ್ಮದಿ ದೊರೆಯುವುದು. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ದ್ವಾದಶಿ
ನಕ್ಷತ್ರ: ಪೂರ್ವಾಷಾಡ ನಕ್ಷತ್ರ

ರಾಹುಕಾಲ: 09:00AM ರಿಂದ 10:30AM
ಗುಳಿಕಕಾಲ: 06:00AM ರಿಂದ 07:30AM
ಯಮಗಂಡಕಾಲ: 01:30PM ರಿಂದ 03:00PM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು, ಯುಕೆಪಿ ಯೋಜನೆಗಳ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು, ಯುಕೆಪಿ ಯೋಜನೆಗಳ ಜಾರಿ: ಡಿಸಿಎಂ ಡಿ.ಕೆ.

“ಕೇಂದ್ರ ಸರ್ಕಾರ ಅಗತ್ಯ ಅನುಮತಿ ನೀಡಿದರೆ ಕರ್ನಾಟಕ ಸರ್ಕಾರವು ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಬಾಕಿ ಯೋಜನೆಗಳನ್ನು ಜಾರಿ ಮಾಡಲಿದೆ. ಕೇಂದ್ರ ಸರ್ಕಾರ ನಮಗೆ ಸಹಕಾರ ನೀಡುವ ಭರವಸೆ ಇದೆ” ಎಂದು ಡಿಸಿಎಂ ಡಿ.ಕೆ.

[ccc_my_favorite_select_button post_id="119395"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!