ದೊಡ್ಡಬಳ್ಳಾಪುರ: ಶಿವರಾತ್ರಿ ಹಬ್ಬಕ್ಕೆಂದು ಮನೆಯ ಮುಂದೆ ರಂಗೋಲಿ ಬಿಡಿಸುತ್ತಿದ್ದ ಮಹಿಳೆಯ ಚಿನ್ನದ ಮಾಂಗಲ್ಯ ಸರ (Gold Mangalya chain) ಕಿತ್ತುಕೊಂಡು, ಸರ ಕಳ್ಳರು (Chain thieves snatched) ಪರಾರಿಯಾಗಿರುವ ಘಟನೆ ನಗರದ ಮುತ್ಯಾಲಮ್ಮ ದೇವಾಲಯದ ಹಿಂಭಾಗದಲ್ಲಿನ ಮುಕ್ತಾಂಬಿಕಾ ಬಡವಾಣೆಯಲ್ಲಿ ನಡೆದಿದೆ.

ಶನಿವಾರ ರಾತ್ರಿ 9 ಗಂಟೆ ಸುಮಾರಿಗೆ ಭಾನುವಾರದ ಶಿವರಾತ್ರಿಯ ಕಾರಣ, ಗಿರಿಜಮ್ಮ ಎನ್ನುವವರು ಮನೆಯ ಮುಂದೆ ರಂಗೋಲಿ ಬಿಡಿಸುವ ವೇಳೆ ಈ ಘಟನೆ ನಡೆದಿದೆ.
ವಿಳಾಸ ಕೇಳುವ ನೆಪದಲ್ಲಿ ಪಲ್ಸರ್ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು, ಗಿರಿಜಮ್ಮ ಅವರ ಕುತ್ತಿಗೆಯಲ್ಲಿದ್ದ ಸುಮಾರು 40 ಗ್ರಾಂ ತೂಕದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ದೂರಲಾಗಿದೆ.
ಕಳ್ಳರು ತೆಲುಗು ಭಾಷೆಯಲ್ಲಿ ಮಾತನಾಡುತ್ತಿದ್ದರು, ಎನ್ನಲಾಗಿದ್ದು, ಇವರು ಓಡಾಡುವ ದೃಶ್ಯಗಳು ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.