A wealthy state is becoming poorer due to the tussle over seats: Nikhil Kumaraswamy

ಕುರ್ಚಿ ಕಿತ್ತಾಟದಿಂದ ಸಂಪದ್ಭರಿತ ರಾಜ್ಯ ಬಡವಾಗುತ್ತಿದೆ: ನಿಖಿಲ್ ಕುಮಾರಸ್ವಾಮಿ ಕಿಡಿ

ವಿಜಯಪುರ: ಇಂದಿನ ಸಿಎಂ ಆಡಳಿತದಲ್ಲಿ ಪ್ರತಿ ವರ್ಷ ಒಂದು ಲಕ್ಷ ಕೋಟಿ ಸಾಲ ಆಗಿದೆ. ದಿನಕ್ಕೆ 300 ಕೋಟಿ ಸಾಲ ಆಗ್ತಿದೆ . ಈ ಸರ್ಕಾರ ಪ್ರತಿನಿತ್ಯ ಕುರ್ಚಿ ಕಿತ್ತಾಟದಿಂದಲೇ ಕಾಲ‌ ಕಳೆಯುತ್ತಿದ್ದಾರೆ. ಇದರಿಂದಾಗಿ ಸಂಪದ್ಭರಿತ ರಾಜ್ಯ ಬಡವಾಗುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ವಾಗ್ದಾಳಿ ನಡೆಸಿದರು.

ವಿಜಯಪುರದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಸಾವಿರ ದಿನದ ಸರ್ಕಾರ ಎಂದು ಸಂಭ್ರಮಾಚರಣೆ ಮಾಡುತ್ತಿದೆ. ಇಂದಿನ‌ ರಾಜ್ಯದ ಮುಖ್ಯ ಮಂತ್ರಿಗಳ ಆಡಳಿತ ವೈಖರಿ ಪ್ರತಿ ವರ್ಷ ಕೂಡ ಒಂದು ಲಕ್ಷ ಕೋಟಿ ಸಾಲದಲ್ಲಿದೆ. ಇಲ್ಲಿಯವರೆಗೆ 7 ಲಕ್ಷ ಕೋಟಿ ಸಾಲ ಮಾಡಿದೆ. ಈ ಸಾಲದ ಹೊರೆ ನಮ್ಮ ತಲೆಯ ಮೇಲೆ ಹಾಕುತ್ತಿದ್ದಾರೆ. ಸಾಲ ನಮ್ಮ ಮೇಲೆ ಹೊರೆಸುತ್ತಿರುವುದೇ ನಮಗೆ ಕೊಟ್ಟ ರಾಜ್ಯ ಸರ್ಕಾರದ ಕೊಡುಗೆ.

ಮೈತ್ರಿ ವಿಚಾರಕ್ಕೆ ಮಾತನಾಡಿದ ಅವರು, ಎಲ್ಲರೂ ಒಂದು ಗುರಿ ಇಟ್ಟುಕೊಂಡು ಒಂದು ಫ್ಲೈಟ್ ಹತ್ತಿದ್ದೇವೆ. ಅದು ಮೂವ್ ಆಗುವಾಗ ಸ್ವಲ್ಪ ಫ್ಲೈಟ್ ಅಲ್ಲಾಡುತ್ತದೆ, ಹಾಗಂತ ನಾವು ವಾಪಸ್ ಹೋಗ್ತಿವಿ ಎನ್ನೋಕೆ ಆಗಲ್ಲ. ನಾಲ್ಕೈದು ಜನ ಅಂದ್ರೆ ಆಗಲ್ಲ. ಮೈತ್ರಿ ಗಟ್ಟಿಯಾಗಿದೆ, ಗಟ್ಟಿಯಾಗಿ ಮುಂದುವರೆಯುತ್ತೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.

ಈ ದೇಶದ ಪ್ರಧಾನಿಗಳು ಸಹಿತ ಮಾಜಿ ಪ್ರಧಾನಿ ದೆವೇಗೌಡರಿಗೆ ಕೊಡುವ ಪ್ರೀತಿ ಗೌರವ ಎಲ್ಲರಿಗೂ ಗೊತ್ತಿರುವ ವಿಚಾರ. ಜೆಡಿಎಸ್ ಹಾಗೂ ಬಿಜೆಪಿ ಯಿಂದ ಭ್ರಷ್ಟ ಕಾಂಗ್ರೆಸ್ ತೊಡೆದು ಹಾಕಲು ಹೊರಟಿದ್ದೇವೆ… ಬಿಜೆಪಿ ಜೆಡಿಎಸ್ ಹೊಂದಾಣಿಕೆ ಕಾರ್ಯಕರ್ತರ ಶ್ರಮ ಕೂಡಾ ಇದೆ ಕಾರ್ಯಕರ್ತರ ಶ್ರಮ‌ ಹಾಳಾಗದಂತೆ ವರಿಷ್ಟರು ಕ್ರಮ ಜರುಗಿಸುವರು..

ಫೆ.27 ರಂದು ಪಕ್ಷದ ಜನತಾ ಸಮಾವೇಶ ನಡೆಯಲಿದೆ. ವಿಜಯಪುರ, ಬಾಗಲಕೋಟೆ, ಹುಬ್ಬಳ್ಳಿ, ಧಾರವಾಡ ಸೇರಿದಂತೆ ಏಳು ಜಿಲ್ಲೆಗಳ ಕಿತ್ತೂರು ಕರ್ನಾಟಕದ ಜನತಾ ಸಮಾವೇಶ ನಡೆಸಲಾಗುತ್ತಿದೆ. ಈಗಾಗಲೇ ಜಿಲ್ಲೆಗಳಲ್ಲಿ ಚರ್ಚೆಗಳನ್ನು, ಸಭೆಗಳನ್ನು ಮಾಡಲಾಗಿದೆ. ಎಲ್ಲರ ಸಹಕಾರದಿಂದ ಹಾಸನದಲ್ಲಿ ಮೊದಲನೇಯ ಜನತಾ ಸಮಾವೇಶ ಯಶಸ್ವಿಯಾಗಿದೆ. ಹಾಗಾಗಿ ಈ ಭಾಗದಲ್ಲೂ ಬೆಳ್ಳಿಹಬ್ಬ ಮಾಡಬೇಕು ಎಂದು ನಿರ್ಣಯಿಸಲಾಗಿದೆ ಎಂದು ಹೇಳಿದರು.

ದೇವೇಗೌಡರ ಮಾರ್ಗದರ್ಶನ ಹಾಗೂ ಕುಮಾರಸ್ವಾಮಿಯವರ ನೇತ್ರತ್ವದಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಸಮಾವೇಶಗಳನ್ನು ಮಾಡಲಾಗುತ್ತಿದೆ. ದೇವೇಗೌಡರು, ಕುಮಾರಸ್ವಾಮಿಯವರು ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಜಿಲ್ಲಾ ಮಟ್ಟದ ಪಕ್ಷದ ಸಭೆಯನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ಜೆಡಿಎಸ್ ಪಕ್ಷದಿಂದ ಮುಖಂಡರು‌ ಬಿಟ್ಟು ಹೋದ ವಿಚಾರಕ್ಕೆ ಮಾತನಾಡಿದ ಅವರು, ಜನತಾದಳ ಪಕ್ಷದಲ್ಲಿ 50ಕ್ಕೂ ಹೆಚ್ಚು ಜನ ಗುರುತಿಸಿಕೊಂಡು ಬೆಳೆದಿದ್ದಾರೆ.ಈ ಸರ್ಕಾರದ 9 ಜನ ಸಚಿವರು ಜೆಡಿಎಸ್ ಪ್ರಾಡಕ್ಟಗಳೇ. ದೇವೇಗೌಡರು ಕಟ್ಟಿ ಬೆಳೆಸಿದ ಈ ಪ್ರಾದೇಶಿಕ ಪಕ್ಷಕ್ಕೆ 25 ವರ್ಷ ಪೂರೈಸಿದೆ. ಇದು ನಾಯಕರನ್ನು ತಯಾರು ಮಾಡುವ ಕಾರ್ಖಾನೆ. ಇನ್ನೂ ಸಹ ಜೆಡಿಎಸ್ ಪಕ್ಷ ಸದೃಢವಾಗಿದೆ ಎಂದು ಒತ್ತಿ ಹೇಳಿದರು.

ರಾಜ್ಯದ ಸಿಎಂ ಆಗಿರುವ ಅವರು ಡಿಸಿಎಂ ಮಾಡದೆ ಹೋಗಿದ್ದರೆ ಇಂದು ಅವರು ಸಿಎಂ ಆಗುತ್ತಿದ್ದರಾ?. ಎಂ.ಪಿ.ಪ್ರಕಾಶ್ ಅವರನ್ನೂ ಸಹ ಡಿಸಿಎಂ ಮಾಡಲಾಗಿತ್ತು. ಜನತಾದಳ ಪಕ್ಷ ಸರ್ವ ಜನಾಂಗಕ್ಕೂ, ಸರ್ವ ಸಮಾಜಕ್ಕೂ ನ್ಯಾಯ ಒದಗಿಸಿದೆ ಎಂದು ಹೇಳಿದರು.

ಹಳೆ ಮೈಸೂರು ಪ್ರಾಂತ್ಯದಲ್ಲಿ 52 ರಲ್ಲಿ 40 ಕ್ಷೇತ್ರಗಳಲ್ಲಿ ನಾವು ಗೆದ್ದಿದ್ದೇವೆ. ಕಲ್ಯಾಣ ಕರ್ನಾಟಕದಲ್ಲಿ 12, ಮಧ್ಯ ಕರ್ನಾಟಕದಲ್ಲಿ 8 ಸ್ಥಾನ ಗೆಲ್ಲುತ್ತಲೇ ಇದ್ದೇವೆ. ಜನತಾದಳ ಪಕ್ಷ ತನ್ನದೇ ಶಕ್ತಿ, ತನ್ನ ವರ್ಚಸ್ಸನ್ನು ಉಳಿಸಿಕೊಂಡಿದೆ. ಬ್ರಷ್ಟ ಕಾಂಗ್ರೆಸ್ ಪಕ್ಷವನ್ನು ಹೊಡೆದೋಡಿಸಲು ಬಿಜೆಪಿಯ ಜೊತೆಗೆ ಸೇರಿದ್ದೇವೆ ಎಂದು ಹೇಳಿದರು.

ಬಜೆಟ್ ಬಗ್ಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮಾರ್ಚ್ ಬಜೆಟ್ ನಲ್ಲಿ ಚೊಂಬು ಕೊಡ್ತಾರೋ, ಅಕ್ಷಯ ಪಾತ್ರೆ ಕೊಡ್ತಾರೋ ನೊಡೋಣ? ಎರಡೂ ಪಕ್ಷಗಳ ಕಾರ್ಯಕರ್ತರ ಶಶ್ರಮ ಇರುವುದರಿಂದಲೇ ಲೋಕಸಭೆಯಲ್ಲಿ 19 ಸೀಟು ಗೆಲ್ಲಿಸಿದ್ದಾರೆ ಎಂದು ತಿಳಿಸಿದರು.

ವಿಜಯಪುರ ಜಿಲ್ಲೆಗೆ HDD ಕೊಡುಗೆ ಅಪಾರ

ವಿಜಯಪುರ ಜಿಲ್ಲೆಗೂ ದೇವೇಗೌಡರಿಗೂ ಅವಿನಾಭಾವ ಸಂಬಂಧವಿದೆ. ಆಲಮಟ್ಟಿ ಎತ್ತರಕ್ಕೆ ದೇವೇಗೌಡರು ಕೊಡುಗೆ ಕೊಟ್ಟಿದ್ದಾರೆ. ಜಿಲ್ಲೆಯಲ್ಲಿ ಶಕ್ತಿಯುತವಾಗಿ ಮುಂದಿನ ಚುನಾವಣೆಯಲ್ಲಿ ನಮಗೆಆಶೀರ್ವದಿಸಲಿದ್ದಾರೆ.
ಚುನಾವಣೆಯ ಗೆಲುವು ಸೋಲು ನಾಯಕತ್ವವನ್ನು ನಿರ್ಣಯಿಸುವುದಿಲ್ಲ. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಈಗಾಗಲೇ ಮೊದಲ ಹಂತದಲ್ಲಿ ರಾಜ್ಯಾದ್ಯಂತ ಸಂಚರಿಸಿ ಕೆಲಸ ಮಾಡಿದ್ದೇನೆ.

ಶಾಸಕ ರಾಜುಗೌಡ ಪಾಟೀಲ್ , ಮಾಜಿ ಶಾಸಕ ದೇವಾನಂದ ಚವ್ಹಾಣ್ , ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ, ಮುಖಂಡರಾದ ವೆಂಕಟರಾವ್ ನಾಡಗೌಡ, ಬಿ.ಡಿ.ಪಾಟೀಲ್ , ಅಪ್ಪುಗೌಡ ಪಾಟೀಲ, ಮಲ್ಲಿಕಾರ್ಜುನ ಯಂಡಿಗೇರಿ ಜತೆಯಲ್ಲಿದ್ದರು.

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!