ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿಯ ಪ್ರಸಿದ್ಧ ಗೀತಂ ವಿಶ್ವವಿದ್ಯಾಲಯದಲ್ಲಿ (Geetham University) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ (Suicide) ಪ್ರಕರಣಗಳಿಗೆ ಕೊನೆ ಇಲ್ಲವೇ ಎಂಬ ಪ್ರಶ್ನೆ ಪೋಷಕರನ್ನು ಕಾಡುತ್ತಿದ್ದು, ವಿದ್ಯಾರ್ಥಿಗಳ ಆಕಸ್ಮಿಕ ಸಾವು, ಆತ್ಮಹತ್ಯೆ ಕುರಿತಂತೆ ಪದೇ ಪದೇ ದೂರು ದಾಖಲಾಗುತ್ತಿದೆ.
ಹೌದು ಗೀತಂ ವಿವಿಯಲ್ಲಿ ಪದೇ ಪದೇ ವಿದ್ಯಾರ್ಥಿಗಳ ಸಾವಿನ ಪ್ರಕರಣ ವರದಿಯಾಗುತ್ತಿದೆ.
ನಿನ್ನೆ (ಫೆ.16)ರಂದು ನಯನ ಎಂಬ 20 ವರ್ಷದ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ.
ಮೃತ ನಯನ ಸರ್ಜಾಪುರ ಮೂಲದರಾಗಿದ್ದು, ಗೀತಂ ವಿವಿಯಲ್ಲಿ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.
ಈ ಕುರಿತಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ದೇಹವನ್ನು ಶವಾಗಾರಕ್ಕೆ ರವಾನೆ ಮಾಡಲಾಗಿದೆ.