ಗೋರಖ್‌ಪುರ: ಆರೋಪಿಯನ್ನು ಹಿಡಿಯಲು ತೆರಳಿದ್ದ ಪೊಲೀಸರು ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಸಬ್‌ಇನ್ಸ್‌ಪೆಕ್ಟರ್ ಸಾವನ್ನಪ್ಪಿ, ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮಹಾರಾಜಗಂಜ್ ಗೋರಖ್‌ಪುರ ಮುಖ್ಯ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಗೋರಖ್‌ಪುರದ ಪೊಲೀಸ್ ಠಾಣೆಯ ಸಿಬ್ಬಂದಿ ಕುಶಿನಗರ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಿ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಮೃತರನ್ನು ಸಬ್ಇನ್ಸ್‌ಪೆಕ್ಟರ್ ಸಂತೋಷ್ ಕುಮಾರ್ (50 ವರ್ಷ) ಎಂದು ಗುರುತಿಸಲಾಗಿದೆ.
ಅಪಘಾತ ಸಮಯದಲ್ಲಿ ಕುಮಾರ್ ತೀವ್ರವಾಗಿ ಗಾಯಗೊಂಡಿದ್ದರು ನಂತರ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ.
33 ಘಟನೆಯಲ್ಲಿ ಹಿರಿಯ ಇನ್‌ಸ್ಪೆಕ್ಟರ್ ಸೇರಿದಂತೆ ಇತರ ಐವರು ಗಾಯಗೊಂಡಿದ್ದು ಅವರನ್ನು ಗೋರಖ್ ಪುರದ ಬಿಆರ್‌ಡಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರಲ್ಲಿ ಕೆಲವರಿಗೆ ಗಂಭೀರವಾಗಿ ಗಾಯವಾಗಿದ್ದು ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದ್ದು ಪರಿಸ್ಥಿತಿ ಗಂಭೀರವಾಗಿದೆ.