ಮತದಾರ ಪಟ್ಟಿಯಲ್ಲಿ ಅಕ್ರಮ ಎಸಗಿರುವ ಬಿಎಲ್ಓ ಗಳ ಅಮಾನತುಗೊಳಿಸಿ: ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗ ಮನವಿ

Suspend BLOs who have committed irregularities in the voter list: DCM D.K. Shivakumar

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಲೋಪ ಸರಿಪಡಿಸುವಂತೆ ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗವು ಮಂಗಳವಾರ ರಾಜ್ಯ ಚುನಾವಣಾ ಆಯೋಗದ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಬಳ್ಳಾರಿ ರಸ್ತೆಯಲ್ಲಿರುವ ರಾಜ್ಯ ಚುನಾವಣಾ ಆಯೋಗದ ಕಚೇರಿಯಲ್ಲಿ ಆಯುಕ್ತರಾದ ಜಿ.ಎಸ್. ಸಂಗ್ರೇಶಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ನಿಯೋಗದಲ್ಲಿ ಸಚಿವರಾದ ರಾಮಲಿಂಗಾ ರೆಡ್ಡಿ, ದಿನೇಶ್ ಗುಂಡೂರಾವ್, ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್, ಶಾಸಕರಾದ ರಿಜ್ವಾನ್ ಅರ್ಷದ್, ಎ.ಸಿ. ಶ್ರೀನಿವಾಸ್, ಎಂ ಎಲ್ಸಿಗಳಾದ ಪುಟ್ಟಣ್ಣ, ಶ್ರೀನಿವಾಸ್ ಅವರು ಇದ್ದರು.

ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಇಂದು ನಮ್ಮ ಪಕ್ಷದ ನಾಯಕರ ನಿಯೋಗದೊಂದಿಗೆ ರಾಜ್ಯದ ಚುನಾವಣಾ ಆಯೋಗದ ಆಯುಕ್ತರನ್ನು ಭೇಟಿ ಮಾಡಿದ್ದೇವೆ. ರಾಜ್ಯ ಚುನಾವಣಾ ಆಯೋಗವು ಮುಂಬರುವ ಜಿಬಿಎ ಪಾಲಿಕೆಗಳ ಚುನಾವಣೆ, ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ಗ್ರಾಮ ಪಂಚಾಯ್ತಿ ಚುನಾವಣೆ ನಡೆಸಲಿದೆ. ಆಯೋಗವು ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡುತ್ತಿತ್ತು, ಈ ಹಿಂದೆ ನೀಡಲಾಗಿದ್ದ ಮತದಾರರ ಪಟ್ಟಿ ಆಧಾರವಾಗಿಟ್ಟುಕೊಂಡು ಈ ಪರಿಷ್ಕರಣೆ ಮಾಡುತ್ತಿದೆ. ಈಗ ಬಿಡುಗಡೆಯಾಗಿರುವ ಮತದಾರರ ಕರಡು ಪಟ್ಟಿಯಲ್ಲೂ ಕೆಲವು ಲೋಪಗಳಿವೆ” ಎಂದು ತಿಳಿಸಿದರು.

ಬಿಎಲ್ಓಗಳ ಜತೆಯಲ್ಲಿ ರಾಜಕೀಯ ಪಕ್ಷಗಳ ಬಿಎಲ್ಎಗಳನ್ನು ಕಳುಹಿಸಿ ಮ್ಯಾಪಿಂಗ್ ಮಾಡಿ

“ಬಿಎಲ್ಒಗಳು ಮತಪಟ್ಟಿಯಲ್ಲಿ ಅಕ್ರಮ ಎಸಗುತ್ತಿದ್ದಾರೆ. ಕಳೆದ ಬಾರಿ ಒಂದು ಕುಟುಂಬದ ಮತಗಳನ್ನು ಬೇರೆ ಬೇರೆ ಬೂತ್ ಗಳಿಗೆ ಸೇರಿಸಲಾಗಿತ್ತು. ಇಲ್ಲಿ ಮ್ಯಾಪಿಂಗ್ ಸರಿಯಾದ ರೀತಿಯಲ್ಲಿ ಆಗುತ್ತಿಲ್ಲ. ಹೀಗಾಗಿ ಬಿಎಲ್ಒಗಳ ಜತೆಗೆ ರಾಜಕೀಯ ಪಕ್ಷಗಳ ಬಿಎಲ್ಎಗಳನ್ನು ಕರೆದುಕೊಂಡು ಹೋಗಿ ಪರಿಷ್ಕರಣೆ ಮಾಡಬೇಕು. ಇಲ್ಲಿ ಮತದಾರರ ಪಟ್ಟಿ ಜತೆಗೆ, ಮನೆಗಳು ಹಾಗೂ ಮತಗಳ ಮ್ಯಾಪಿಂಗ್ ಆಗಬೇಕು. ಈ ಹಿನ್ನೆಲೆಯಲ್ಲಿ ಕಳೆದ ಚುನಾವಣೆಯಲ್ಲಿ ಕೆಲವು ಕ್ಷೇತ್ರಗಳು ಹಾಗೂ ಬೂತ್ ಗಳಲ್ಲಿ ಆಗಿದ್ದ ಲೋಪಗಳನ್ನು ಸರಿಪಡಿಸಬೇಕು. ನ್ಯಾಯಬದ್ಧವಾಗಿ ಕಾನೂನು ಚೌಕಟ್ಟಿನಲ್ಲಿ ಪರಿಷ್ಕರಣೆ ಮಾಡಬೇಕು. ಈ ಹಿಂದೆ ಮತದಾರರ ಬದಲಿಗೆ ಬೇರೆಯವರು ಫಾರಂ ಡಿಲೀಟ್ ಮಾಡಿಸಲಾಗಿದೆ. ಇದೆಲ್ಲವನ್ನು ಸರಿಪಡಿಸಬೇಕು ಎಂದು ಮನವಿ ಮಾಡಿದ್ದೇವೆ” ಎಂದರು.

“ಮುಂದಿನ ದಿನಗಳಲ್ಲಿ ಜಿಬಿಎ ಸೇರಿದಂತೆ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಚುನಾವಣೆಗಳನ್ನು ನಡೆಸಲಾಗುತ್ತದೆ. ಈಗಲೇ ಮತದಾರರ ಪಟ್ಟಿಯನ್ನು ಈಗಲೇ ಪರಿಷ್ಕರಿಸಬೇಕು. ನಾಳೆ ಹೆಚ್ಚು ಕಮ್ಮಿಯಾದರೆ ನಿಮಗೇ ಕೆಟ್ಟ ಹೆಸರು, ಸರ್ಕಾರಕ್ಕೂ ಕೆಟ್ಟ ಹೆಸರು ಝಙಎಂದು ಮುನ್ನೆಚ್ಚರಿಕೆಯಾಗಿ ಆಯುಕ್ತರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದೇವೆ. ಈವರೆಗೂ ಮತದಾರರ ಪಟ್ಟಿಯಲ್ಲಿ ನಾವು ಕಂಡಿರುವ ಲೋಪದೋಷಗಳನ್ನು ಅವರಿಗೆ ಮಾಹಿತಿ ನೀಡಿದ್ದೇವೆ. ಮತಗಳನ್ನು ಬೇರೆ ಬೂತ್ ಗಳಿಗೆ ವಿಂಗಡಿಸುವುದು, ಅಲ್ಪಸಂಖ್ಯಾತರು, ಪರಿಶಿಷ್ಟರ ಮತಗಳನ್ನು ಅಕ್ರಮವಾಗಿ ತೆಗೆದಿರುವವರು, ನಕಲಿ ಮತಗಳನ್ನು ಸೇರಿಸಿರುವ ಬಿಎಲ್ಒಗಳನ್ನು ಅಮಾನತುಗೊಳಿಸಬೇಕು. ಕಾನೂನು ಚೌಕಟ್ಟಿನಲ್ಲಿ ಮತದಾರರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಮನವಿ ಸಲ್ಲಿಸಿದ್ದೇವೆ” ಎಂದು ಹೇಳಿದರು.

ರಾಜ್ಯ ಚುನಾವಣಾ ಆಯೋಗ ಪ್ರತ್ಯೇಕವಾಗಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಿದೆಯೇ ಎಂದು ಕೇಳಿದಾಗ, “ರಾಜ್ಯ ಚುನಾವಣಾ ಆಯೋಗಕ್ಕೆ ಪ್ರತ್ಯೇಕವಾಗಿ ಪರಿಷ್ಕರಣೆ ಮಾಡುವ ಅವಕಾಶ ಇದೆ. ಆ ಕೆಲಸವನ್ನು ಅವರು ಮಾಡುತ್ತಿದ್ದಾರೆ” ಎಂದು ಹೇಳಿದರು.

ಹೊಸದಾಗಿ ಮ್ಯಾಪಿಂಗ್ ಮಾಡಿ ಮತದಾರರ ಪಟ್ಟಿ ಸಿದ್ಧಪಡಿಸಿ

ಎರಡು ಪರಿಷ್ಕರಣೆ ಗೊಂದಲವಾಗುವುದಿಲ್ಲವೇ ಎಂದು ಕೇಳಿದಾಗ, “ಅದರ ಬಗ್ಗೆ ನಾವು ಚರ್ಚೆ ಮಾಡುವುದಿಲ್ಲ. ನಾವು ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ನಡೆಸುವ ಜವಾಬ್ದಾರಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ನೀಡಿದ್ದು, ಅವರು ತಮ್ಮ ಕೆಲಸ ಮಾಡುತ್ತಿದ್ದಾರೆ. ಹಿಂದೆ ಇದ್ದ ಮತದಾರರ ಪಟ್ಟಿ ಸರಿಯಿಲ್ಲ. ಮತ್ತೊಮ್ಮೆ ಮ್ಯಾಪಿಂಗ್ ಮಾಡಿ ಮತದಾರರ ಪಟ್ಟಿ ಸಿದ್ಧಪಡಿಸಲಿ, ಯಾರಿಗೆ ಮತದಾನ ಮಾಡುವ ಅರ್ಹತೆ ಇದೆಯೋ ಅವರಿಗೆ ಮತದಾನದ ಹಕ್ಕು ನೀಡಲಿ” ಎಂದು ತಿಳಿಸಿದರು.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]