ದೊಡ್ಡಬಳ್ಳಾಪುರ: ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ ಸಂಭವಿಸಿದೆ.
ಮೃತ ಬೈಕ್ ಸವಾರನನ್ನು ಅಳಾಲಸಂದ್ರ ಗ್ರಾಮದ ರಾಮಕುಮಾರ್ (28 ವರ್ಷ) ಎಂದು ಗುರುತಿಸಲಾಗಿದೆ.
ರಾಜ್ಯ ಹೆದ್ದಾರಿ ಹಿಂದೂಪುರ-ಬೆಂಗಳೂರು ನಡುವಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಳಿ, ಗೌರಿಬಿದನೂರು ಮಾರ್ಗವಾಗಿ ದೊಡ್ಡಬಳ್ಳಾಪುರದ ಕಡೆಗೆ ತೆರಳುತ್ತಿದ್ದ ಖಾಸಗಿ ಕಂಪನಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಈ ದುರ್ಘಟನೆ ಸಂಭವಿಸಿದೆ.
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ರಾಜಕುಮಾರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ, ಮಾರ್ಗ ಮಧ್ಯದಲ್ಲಿ ಸಾವನಪ್ಪಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.