ಜೆಡಿಎಸ್ ಜೊತೆ ಮೈತ್ರಿ ಬೇಡ ಅಂತಿರೋ ಬಿಜೆಪಿ ಶಾಸಕರಿಗೆ ನಿಖಿಲ್ ಕುಮಾರಸ್ವಾಮಿ ಟಾಂಗ್

Nikhil Kumaraswamy lashes out at BJP MLAs who say no to alliance with JDS

ಬೆಂಗಳೂರು: ಜೆಡಿಎಸ್ (JDS)- ಬಿಜೆಪಿ (BJP) ಮೈತ್ರಿ ಬಗ್ಗೆ ಹಾದಿ ಬೀದಿಯಲ್ಲಿ ಚರ್ಚೆಯಾದರೆ ಬಗೆಹರಿಯುವುದಿಲ್ಲ. ನಾಲ್ಕು ಗೋಡೆಗಳ ಒಳಗಡೆ ಚರ್ಚೆಯಾಗಿರುವುದು ಆ ಗೋಡೆಗಳ ಒಳಗೆಯೇ ಇರಬೇಕು. ಬೀದಿಯಲ್ಲಿ ಚರ್ಚೆ ಆಗಬಾರದು ಎಂದು ಬಿಜೆಪಿ ನಾಯಕರು ಹೇಳಿಕೆಗೆ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ತಿರುಗೇಟು ನೀಡಿದರು.

ಬೆಂಗಳೂರಿನ ಜೆ.ಪಿ ನಗರ ನಿವಾಸದ ಬಳಿ ರಾಜ್ಯ ಬಿಜೆಪಿ ಜೆಡಿಎಸ್ ಮೈತ್ರಿಯಲ್ಲಿ ಗೊಂದಲ ವಿಚಾರ ಕುರಿತು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು,ಈ ವಿಚಾರಗಳು ನಾಲ್ಕು ಗೋಡೆಗಳ ಒಳಗೆ ಚರ್ಚೆ ಆಗಬೇಕು. ಹಾದಿಬೀದಿಯಲ್ಲಿ ಚರ್ಚಿಸಿ ಇತ್ಯರ್ಥವಾಗುವ ವಿಚಾರ ಅಲ್ಲ. ಲೋಕಸಭೆ ಚುನಾವಣೆಯಲಿಂದಲೂ ಎರಡೂ ಪಕ್ಷಗಳ ಮೈತ್ರಿ ಇದೆ. ಅಂದಿನಿಂದಲೂ ನಮ್ಮನ್ನ ಅತ್ಯಂತ ಗೌರವದಿಂದ ನೋಡಿಕೊಂಡಿದ್ದಾರೆ ಎಂದು ಹೇಳಿದರು.

ಬಿಜೆಪಿಯಿಂದ ಮೈತ್ರಿ ಮುರಿಯುವ ಹೇಳಿಕೆಗಳೇ ಬರುತ್ತಿದೆಯಲ್ಲ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ನಾವು ಮೈತ್ರಿ ಧರ್ಮವನ್ನು ಅತ್ಯಂತ ಗೌರವದಿಂದ ಪಾಲಿಸುತ್ತಿದ್ದೇವೆ. ನಮ್ಮ ಮೈತ್ರಿಗೆ ಬಿಜೆಪಿ ಹೈಕಮಾಂಡ್ ನಾಯಕರ ಮಾರ್ಗದರ್ಶನ ಇದೆ . ಬಿಜೆಪಿಯಾಗಿರಲಿ ಜೆಡಿಎಸ್ ಆಗಿರಲಿ ಯಾರು ಕೂಡ ಹೊರಗೆ ಬಂದು ಮಾತನಾಡಬಾರದು. ಸಮಸ್ಯೆ ಉದ್ಭವ ಆಗಿರೋದು ಯಾವುದೋ ಎರಡು ಜಿಲ್ಲೆಯಲ್ಲಿ. ಅಲ್ಲಿನ ಮೂರ್ನಾಲ್ಕು ಜನ ಪ್ರಚಾರಕ್ಕೆ ಮಾತನಾಡಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ NDA ಸರ್ಕಾರ ಗೆದ್ದು ಇತಿಹಾಸ ಸೃಷ್ಟಿಸುತ್ತೆ

ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಅಲ್ಲ ಎನ್ ಡಿಎ 140ರಿಂದ 150 ಸ್ಥಾನ ಗೆಲ್ಲುತ್ತೆ.
ನಾವು ಮೈತ್ರಿ ಧರ್ಮವನ್ನ ಪಾಲಿಸುತ್ತೇವೆ ಲೋಕಸಭೆ ಗೆದ್ದಂತೆ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುತ್ತೇವೆ.ಗೆದ್ದು ದಾಖಲೆಯನ್ನು ಸೃಷ್ಟಿ ಮಾಡುತ್ತೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕುಮಾರಸ್ವಾಮಿ ರವರು ರಾಜ್ಯ ರಾಜಕಾರಣಕ್ಕೆ ಬರುತ್ತಿರುವ ವಿಚಾರವಾಗಿ ಬಿಜೆಪಿಗೆ ಆತಂಕವೇ ಎಂಬ ಪ್ರಶ್ನೆಗೆ‌ ಪ್ರತಿಕ್ರಿಯೆ ನೀಡಿದ ಅವರು, ನಾವೆಲ್ಲಿಯೂ ಕೂಡ ಅಭ್ಯರ್ಥಿಗಳನ್ನ ಘೋಷಣೆ ಮಾಡಿಯೇ ಇಲ್ಲ. ಕೆ. ಆರ್ ಪೇಟೆಯಲ್ಲಿ ಮಂಜು ನೀವು ಈಗಾಗಲೇ ಶಾಸಕರಾಗಿದ್ದೀರಿ ಮತ್ತೆ ಆರಿಸಿ ಬರುವುದಕ್ಕೆ ಜನರ ಪ್ರೀತಿ ವಿಶ್ವಾಸವನ್ನು ಗಳಿಸಿ ಮಂಜಣ್ಣ ಅಂತ ಹೇಳಿದ್ದೆ. ಆದ್ರೆ ನನ್ನ ಹೇಳಿಕೆಯನ್ನ ತಿರುಚಿದ್ದಾರೆ ಎಂದರು.

ಅಭ್ಯರ್ಥಿಗಳ್ಳನ್ನ ಘೋಷಣೆ ಮಾಡೋದಕ್ಕೆ ನಾನು ಯಾರು? ನಾನು ಜನರ ವಿಶ್ವಾಸವನ್ನು ಉಳಿಸಿಕೊಂಡು ಹೋಗಿ ಅಂತ ಹೇಳುವುದರಲ್ಲಿ ತಪ್ಪೇನಿದೆ? ಎಂದು ಹೇಳಿದರು.

ಪ್ರಿಯಾಂಕ ಖರ್ಗೆಗೆ ಟಾಂಗ್ ಕೊಟ್ಟ ನಿಖಿಲ್ ಕುಮಾರಸ್ವಾಮಿ

ಒಂದು ಪ್ರಾದೇಶಿಕ ಪಕ್ಷ 25 ವರ್ಷಗಳನ್ನು ತುಂಬಿ ಮೊನ್ನೆ ಅಷ್ಟೇ ಬೆಳ್ಳಿಹಬ್ಬವನ್ನು ಕೂಡ ಆಚರಿಸಿದ್ದೇವೆ.50ಕ್ಕೂ ಹೆಚ್ಚು ಜನ ಈ ಪಕ್ಷವನ್ನು ರಾಜಕೀಯ ವೇದಿಕೆಯಾಗಿ ಉಪಯೋಗಿಸಿ ನಂತರ ವೈಯಕ್ತಿಕ ಕಾರಣಗಳಿಂದ ಬೇರೆ ಬೇರೆ ಪಕ್ಷಗಳಿಗೆ ಹೋಗಿದ್ದಾರೆ. ಪ್ರಿಯಾಂಕ ಖರ್ಗೆ ಅವರಿಗೂ ಜನತಾದಳದ ಶಕ್ತಿ ಏನು ಅಂತ ಗೊತ್ತಿದೆ. ಆದರೆ ಹೊರಗಡೆ ಮಾತನಾಡುವ ಸಂದರ್ಭದಲ್ಲಿ ಪಾಪ ಈ ರೀತಿ ಮಾತನಾಡಿದ್ದಾರೆ ಎಂದು ಹೇಳಿದರು.

ZP & TP ನಲ್ಲೂ ಮೈತ್ರಿ ಇರುತ್ತಾ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಇನ್ನೂ ಎರಡು ಪಕ್ಷಗಳ ಚೌಕಟ್ಟಿನಲ್ಲಿ ಚರ್ಚೆಗೆ ಬಂದೇ ಇಲ್ಲ. ಮೊದಲನೆಯದಾಗಿ ಚುನಾವಣೆಗಳು ನಡೆಯುತ್ತಾ ಇಲ್ಲವಾ ಅನ್ನೋದೇ ಗೊತ್ತಿಲ್ಲ. ಕಾರ್ಯಕರ್ತರ ಹಿತ ದೃಷ್ಟಿಯನ್ನು ಮುಂದಿಟ್ಟುಕೊಂಡು ಮೈತ್ರಿಯಾಗಿ ಹೋಗಬೇಕಾ ಅಥವಾ ಪಕ್ಷವಾಗಿ ಹೋಗಬೇಕಾ ತೀರ್ಮಾನ ಮಾಡಲಾಗುತ್ತೆ ಎಂದು ಹೇಳಿದರು.

ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ ವಿಚಾರವಾಗಿ ಮಾತನಾಡಿದ ಅವರು, ಅವರು ವಿದೇಶ ಅಥವಾ ಡೆಲ್ಲಿ ಪ್ರವಾಸಕ್ಕೆ ಹೋಗುವ ಬದಲು. ಪ್ರಣಾಳಿಕೆಯಲ್ಲಿ ಕೊಟ್ಟಂತ ಗ್ಯಾರಂಟಿಗಳನ್ನು ನಿಭಾಯಿಸಬೇಕು.ಬಳ್ಳಾರಿಗೆ ಹೋದಾಗ ಗೃಹಲಕ್ಷ್ಮಿ ಹಣ 5 ತಿಂಗಳಿಂದ ಬಂದಿಲ್ಲ ಅಂತ ತಿಳಿಸಿದ್ದಾರೆ. ಇದಕ್ಕೆ ಯಾರು ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

135 ರಿಂದ 136 ಜನ ಇವರಿಗೆ ಕ್ಲಿಯರ್ ಮ್ಯಾನ್‌ಡೇಟ್ ಕೊಟ್ಟಿದ್ದಾರೆ. ಇವತ್ತಿನ ಮುಖ್ಯಮಂತ್ರಿಗಳ ನೇತೃತ್ವದಲ್ಲಿ 3 ಲಕ್ಷ ಕೋಟಿ ಸಾಲ ಆಗಿದೆ. 7,64,000 ಕೋಟಿ ರೂಪಾಯಿ ಸಾಲದಲ್ಲಿ 5 ಲಕ್ಷ ಕೋಟಿ ಇವರ ಕಾಲಘಟ್ಟದಲ್ಲೇ ಸಾಲ ಆಗಿದೆ. ಇದರ ಬಗ್ಗೆ ಚಿಂತನೆ ಮಾಡಬೇಕಾ.? ಆಡಳಿತದ ಬಗ್ಗೆ ಚಿಂತನೆ ಮಾಡಬೇಕಾ ಅಥವಾ ಪ್ರವಾಸಕ್ಕೆ ಹೋಗಬೇಕಾ? ಎಂದು ಕಿಡಿಕಾರಿದರು.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]