ದೊಡ್ಡಬಳ್ಳಾಪುರ: ತಾಲೂಕಿನ ಮೆಳೇಕೋಟೆ ಕ್ರಾಸ್‌ನ (ಶ್ರೀ ಜಗದ್‌ಗುರು ಚಂದ್ರಶೇಖರ ನಾಥ ಸ್ವಾಮೀಜಿ ಗ್ರಾಮಾಂತರ ಶಾಲೆ (SJCR) ಶಾಲೆಯಲ್ಲಿ UKG ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಡಾ.ಕುಮಾರ್ ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಸಂವಿಧಾನದಲ್ಲಿ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ತಿಳುವಳಿಕೆ ನೀಡಲು ಚಟುವಟಿಕೆ ಮಾಡುವಂತೆ ಸಲಹೆ ನೀಡಿದರು.

ಬಮೂಲ್ (Bamul)ನ ನಿರ್ದೇಶಕ ಬಿ.ಸಿ.ಆನಂದಕುಮಾರ್ (B.C. Ananad Kumar) ಮಾತನಾಡಿ, ಉತ್ತಮ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡಲು ಹಾಗೂ ತಪ್ಪನ್ನು ತಿದ್ದಲು ಶಿಕ್ಷಕರು ಕೆಲವು ಸಂದರ್ಭದಲ್ಲಿ ದಂಡಿಸಬೇಕಾಗುತ್ತದೆ. ಈಗ ದಂಡಿಸಿ ಬುದ್ದಿ ಹೇಳದಿದ್ದರೆ ಮುಂದೆ ವಿದ್ಯಾರ್ಥಿಗಳು ತಪ್ಪು ದಾರಿ ಹಿಡಿಯುತ್ತಾರೆ. ಹೀಗಾಗಿ ಪೋಷಕರು ಶಿಕ್ಷಕರಿಗೆ ಈ ನಿಟ್ಟಿನಲ್ಲಿ ಸಹಕರಿಸಬೇಕಾಗಿ ತಿಳಿಸಿದರು.
ವಿದ್ಯಾರ್ಥಿಗಳಿಗೆ ಅತಿಥಿಗಳು ಪದವಿ ಪ್ರಮಾಣ ಪತ್ರ ನೀಡಿ ಅಭಿನಂದಿಸಿದರು.

ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಶಿಕ್ಷಕ ಹೆಚ್.ಎಲ್. ವಿಜಯಕುಮಾರ್, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.