ಕಸ ವಿಲೇವಾರಿಗೆ ಅಡ್ಡಿಪಡಿಸಿದರೆ ಮನೆ, ಕಚೇರಿ ಮುಂದೆ ಕಸ ಸುರಿಯುತ್ತೇವೆ: ಬಿಜೆಪಿ ಶಾಸಕರು, ಮುಖಂಡರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಎಚ್ಚರಿಕೆ

If garbage disposal is obstructed, we will dump garbage in front of houses and offices: D.K. Shivakumar

ಬೆಂಗಳೂರು: “ಗೌರವದಿಂದ ಇದ್ದರೆ ಸರಿ. ಇಲ್ಲ ಅಂದರೆ ಕಸ ವಿಲೇವಾರಿಗೆ ಅಡ್ಡಿ ಪಡಿಸುವವರು ಶಾಸಕರಾದರೂ ಸರಿ, ಬೇರೆ ಯಾರೇ ಆಗಿದ್ದರೂ ಸಹ ಎಸ್ಮಾ ಕಾಯ್ದೆ ಅಡಿ, ಯಾವುದೇ ಕರುಣೆ ಇಲ್ಲದೇ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಶಾಸಕರ ಮನೆ ಮುಂದೆ ಅಥವಾ ಬಿಜೆಪಿ ಕಚೇರಿ ಎದುರು ಲೋಡ್‌ ಕಸವನ್ನು ತೆಗೆದುಕೊಂದು ಹೋಗಿ ಹಾಕಬೇಕಾಗುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ (D.K. Shivakumar) ಅವರು ಎಚ್ಚರಿಕೆ ನೀಡಿದರು.

ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.

ಮಹದೇವಪುರದಲ್ಲಿ ಕಸ ವಿಲೇವಾರಿಗೆ ಅಡ್ಡಿಪಡಿಸಿರುವ ಬಗ್ಗೆ ಕೇಳಿದಾಗ, “ಶಾಸಕರು ಕಸ ಹಾಕಬಾರದು ಹಾಗೂ ನಮಗೆ ಅನುದಾನ ಬೇಕು ಎಂದು ಬ್ಲಾಕ್‌ ಮೇಲ್‌ ಮಾಡುತ್ತಿದ್ದಾರೆ. ಮಂಗಳವಾರದಂದು ಅರವಿಂದ ಲಿಂಬಾವಳಿ, ದೊಡ್ಡಬಳ್ಳಾಪುರ ಶಾಸಕರು ಬ್ಲಾಕ್‌ ಮೇಲ್‌ ಮಾಡಿದ್ದಾರೆ. ಹೀಗೆ ಮಾಡಿದರೆ ಕಸ ಎಲ್ಲಿಗೆ ಹೋಗಬೇಕು? ಕಸವು ಆರ್‌.ಅಶೋಕ್‌, ವಿಜಯೇಂದ್ರ ಅಥವಾ ಬಿಜೆಪಿ ಕಚೇರಿಗೆ ಹೋಗಬೇಕಾಗುತ್ತದೆ. ಇವರುಗಳು ಯಾರಿಗೆ ಎಂದು ಬ್ಲಾಕ್‌ ಮೆಲ್‌ ಮಾಡುತ್ತಿದ್ದಾರೆ” ಎಂದರು.

ಯಾವ ಉದ್ದೇಶಕ್ಕೆ ಶಾಸಕರುಗಳು ಬ್ಲಾಕ್‌ ಮೆಲ್‌ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಕಸವನ್ನು ಎಲ್ಲಾದರೂ ಒಂದು ಕಡೆ ಹಾಕಬೇಕಲ್ಲವೇ? ಈ ಹಿಂದಿನಿಂದ ಏನು ಕೆಲಸ ಮಾಡಿಕೊಂಡು ಬರಲಾಗುತ್ತಿತ್ತೊ ಅದೇ ಕೆಲಸವನ್ನು ಈಗಲೂ ಮಾಡಿಕೊಂಡು ಬರಲಾಗುತ್ತಿದೆ. ಅವರ ಕ್ಷೇತ್ರಗಳಿಗೆ ಅನುದಾನ ಬೇಕು ಎಂದು ಹೀಗೆ ಮಾಡುತ್ತಿದ್ದಾರೆ” ಎಂದು ಹೇಳಿದರು.

ಕಸದ ಲಾರಿಯಿಂದ ಅಪಘಾತವಾಗಿದೆ ಎನ್ನುವ ಕಾರಣಕ್ಕೆ ಹೀಗೆ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಅಪಘಾತ ಆಗಬಾರದಿತ್ತು ಆಗಿದೆ. ಇದಕ್ಕೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು ಕಸ ವಿಲೇವಾರಿ ನಿಲ್ಲಿಸಿರುವುದು ಸರಿಯಲ್ಲ. ಎಸ್‌.ಟಿ.ಸೋಮಶೇಖರ್‌, ಶಿವಣ್ಣ, ಕೃಷ್ಣಬೈರೇಗೌಡ ಅವರ ಕ್ಷೇತ್ರಗಳಲ್ಲೂ ಕಸ ವಿಲೇವಾರಿ ಮಾಡಲಾಗುತ್ತಿದೆ” ಎಂದು ತಿಳಿಸಿದರು.

“ಈಗ ಹೊಸದಾಗಿ ಎರಡು ಜಾಗಗಳನ್ನು ಖರೀದಿ ಮಾಡಲಾಗಿದೆ. ಅಲ್ಲಿ ಕಸ ವಿಲೇವಾರಿಗೆ ಕಾನೂನಿನ ಪ್ರಕಾರ ಟೆಂಡರ್‌ ಕರೆಯಲಾಗಿದೆ. ಒಂದಷ್ಟು ಕಾನೂನಾತ್ಮಕ ವಿಚಾರಗಳನ್ನು ಬಗೆಹರಿಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ” ಎಂದರು.

ಅನುದಾನ ಅಲಭ್ಯತೆಗೆ ಬಿಜೆಪಿ ಸರ್ಕಾರವೇ ಕಾರಣ

ಹಿಂದಿನ ಸರ್ಕಾರಕ್ಕಿಂತ ಈಗಿನ ಸರ್ಕಾರದಲ್ಲಿ ಕಮಿಷನ್‌ ಹೆಚ್ಚಿದೆ, ಕಾಮಗಾರಿ ನಿಲ್ಲಿಸುತ್ತೇವೆ ಎಂದು ಗುತ್ತಿಗೆದಾರರ ಸಂಘ ತಿಳಿಸಿರುವ ಬಗ್ಗೆ ಕೇಳಿದಾಗ, “ಇದರ ಬಗ್ಗೆ ದೂರು ನೀಡಲು ಅವರಿಗೆ ತಿಳಿಸಿ. ಅವರುಗಳು ಮೊದಲು ಕಾಮಗಾರಿ ನಿಲ್ಲಿಸಲಿ. ಯಡಿಯೂರಪ್ಪ ಅವರ ಸರ್ಕಾರ ಇದ್ದಾಗ ಅನುದಾನವಿಲ್ಲ ಕೆಲಸ ತೆಗೆದುಕೊಳ್ಳಬೇಡಿ ಎಂದು ಹೇಳಿಲ್ಲವೇ? ಆದರೂ ಏಕೆ ಕೆಲಸಗಳನ್ನು ತೆಗೆದುಕೊಂಡರು. ಆರ್ಥಿಕ ಲಭ್ಯತೆ ಇಲ್ಲದೇ ಇದ್ದರೂ ಸಹ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆ ಕೆಲಸಗಳನ್ನು ತೆಗೆದುಕೊಳ್ಳಲಾಯಿತು. ಬೆಂಗಳೂರು ನಗರದಲ್ಲಿ ಎಷ್ಟು ಹೊಂದಿಸಬೇಕೋ ಆ ಕೆಲಸವನ್ನು ನಾನು ಮಾಡಿದ್ದೇನೆ. ಉದಾಹರಣೆಗೆ 10 ಸಾವಿರ ಕೋಟಿ ಅನುದಾನವಿದ್ದರೆ 30- 40 ಸಾವಿರ ಕೋಟಿ ಟೆಂಡರ್‌ ಕರೆದಿದ್ದಾರೆ. ಇದೆಲ್ಲದ್ದಕ್ಕೂ ಬಿಜೆಪಿ ಸರ್ಕಾರವೇ ಕಾರಣ. ಈಗ ಬಿಲ್‌ ಬಿಲ್‌ ಎಂದರೆ ಏನು ಮಾಡುವುದು. ಅಂದು ಏಕೆ ಕೆಲಸಗಳನ್ನು ತೆಗೆದುಕೊಂಡರು. ನನ್ನ ಇಲಾಖೆಯ ದಾಖಲೆಗಳನ್ನು ನೀಡುತ್ತೇನೆ. ಹಣ ಇಲ್ಲ ಎಂದು ಗೊತ್ತಿದ್ದರೂ ಕೆಲಸಗಳನ್ನು ಏಕೆ ಪ್ರಾರಂಭ ಮಾಡಿದರು” ಎಂದು ಹೇಳಿದರು.

ನಿಮಗೂ ಕೆಲಸ ನಿಲ್ಲಿಸುತ್ತೇವೆ ಎಂದು ಬ್ಲಾಕ್‌ ಮೆಲ್‌ ಮಾಡುತ್ತಿದ್ದಾರೆಯೇ ಎಂದು ಕೇಳಿದಾಗ, “ಕೆಲಸ ನಿಲ್ಲಿಸಿಕೊಳ್ಳುವವರು ನಿಲ್ಲಿಸಿಕೊಳ್ಳಲಿ. ಏನು ಬೇಕಾದರೂ ಮಾಡಿಕೊಳ್ಳಲಿ. ನಮ್ಮ ಸರ್ಕಾರ ಬಜೆಟ್‌ ಪ್ರಕಾರ ಹಣ ನೀಡುತ್ತಿದೆ. ಎಷ್ಟು ಆಗುತ್ತದೆಯೋ ಅಷ್ಟು ಹಣವನ್ನು ನಾವು ಕೊಡುತ್ತೇವೆ. ಬಜೆಟ್‌ ಆದ ನಂತರ ಏನಾದರೂ ಮಾಡೋಣ. ನಮಗೂ ಮಾನವೀಯತೆ ಇದೆ. ಬ್ಲಾಕ್‌ ಮೆಲ್‌ ಮಾಡುತ್ತೇವೆ ಅನ್ನುವವರೆಲ್ಲಾ ಮಾಡಿಕೊಳ್ಳಲಿ” ಎಂದರು.

ನಕಲಿ ಬೆರಳಚ್ಚಿನ ಮೂಲಕ ಅನ್ನಭಾಗ್ಯ ಅಕ್ಕಿ ಲೂಟಿ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಇದರ ಬಗ್ಗೆ ಗೊತ್ತಿಲ್ಲ” ಎಂದರು

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]