ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಹಗಲು- ರಾತ್ರಿ ಶ್ರಮಿಸೋಣ: ಬಿ.ವೈ. ವಿಜಯೇಂದ್ರ ಕರೆ

Let's work day and night to restore BJP's past glory in Karnataka: B.Y. Vijayendra

ಬೆಂಗಳೂರು: ತೆಲಂಗಾಣ, ಹಿಮಾಚಲ ಪ್ರದೇಶ ಮತ್ತು ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್ ಪಕ್ಷ ಉಸಿರಾಡುತ್ತಿದೆ. ಕರ್ನಾಟಕದಲ್ಲಿ ಅಭಿವೃದ್ಧಿ ಶೂನ್ಯ ಸ್ಥಿತಿ ಇದ್ದು, ಆಡಳಿತ ಪಕ್ಷದ ಶಾಸಕರೇ ಸರಕಾರದ ವಿರುದ್ಧ ದಂಗೆ ಏಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ವಿಶ್ಲೇಷಿಸಿದ್ದಾರೆ.

ನಗರದ ಅರಮನೆ ಮೈದಾನದ ಗೇಟ್ ನಂ.4, ಗಾಯತ್ರಿ ಗ್ರ್ಯಾಂಡ್ ನಲ್ಲಿ ಇಂದು ನಡೆದ ರಾಜ್ಯ ಕಾರ್ಯಕಾರಿಣಿಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಕರ್ನಾಟಕದಲ್ಲಿ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಹಿಂದೂ ಕಾರ್ಯಕರ್ತರ, ದಲಿತರ ಹತ್ಯೆ ಆಗುತ್ತಿದೆ ಎಂದ ಅವರು, ಸುರತ್ಕಲ್, ಯಲ್ಲಾಪುರದಲ್ಲಿ ಆದ ಹತ್ಯೆಯನ್ನು ಉಲ್ಲೇಖಿಸಿದರು. ಯಲ್ಲಾಪುರದ ದಲಿತ ಮಹಿಳೆ ಹತ್ಯೆ, ಕೊಪ್ಪಳದಲ್ಲಿ ದಲಿತ ವ್ಯಕ್ತಿಯ ಹತ್ಯೆ ಆದರೂ ಪರಿಹಾರ ನೀಡಿಲ್ಲ ಎಂದು ಟೀಕಿಸಿದರು.

ಈ ಸರಕಾರ ಬಂದ ಬಳಿಕ ಕಾನೂನು- ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕಾವೇರಿ ನದಿಯ ಉಗಮಸ್ಥಾನ ಮೈಸೂರು ಮಾದಕವಸ್ತುಗಳಿಗೆ ಉಗಮ ಸ್ಥಾನವಾಗಿದೆ ಎಂದು ಆಕ್ಷೇಪಿಸಿದರು. ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ದಸರಾ ಸಂದರ್ಭದಲ್ಲಿ ಬಲೂನ್ ಮಾರಾಟ ಮಾಡುವ ವ್ಯಕ್ತಿಯ ಕುಟುಂಬದ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ- ಕೊಲೆ ನಡೆದಿದೆ ಎಂದು ನೆನಪಿಸಿದರು.

ರಾಜ್ಯ ಸರಕಾರದ ಚಳಿ ಬಿಡಿಸುವ ಕೆಲಸ

ರಾಜ್ಯ ಸರಕಾರದ ಚಳಿ ಬಿಡಿಸುವ ಕೆಲಸವನ್ನು ವಿಪಕ್ಷವಾದ ಬಿಜೆಪಿ ರಾಜ್ಯ ಘಟಕ ಮಾಡುತ್ತಲೇ ಬಂದಿದೆ. ಮುಂದಿನ ದಿನಗಳದ್ದು ಅನೇಕ ಚುನಾವಣೆಗಳ ದಿನಗಳು. ಕಾರ್ಯಕರ್ತರ ಚುನಾವಣೆ ಮುಂದೆ ಬರಲಿದೆ. ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ನಮ್ಮ ಕಾರ್ಯಕರ್ತರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಜಿಬಿಎ ಚುನಾವಣೆಯೂ ಬರಲಿದೆ. ಈ ನಡುವೆ ವಿಧಾನಸಭೆಯ ಎರಡು ಉಪ ಚುನಾವಣೆಗಳು ಬರಲಿದೆ. ಬಾಗೇಪಲ್ಲಿ ಉಪ ಚುನಾವಣೆಯೂ ಇದ್ದು, ಸರಣಿ ಚುನಾವಣೆಗಳು ಮುಂದಿನ ಆರೇಳು ತಿಂಗಳು ನಡೆಯಲಿವೆ ಎಂದು ತಿಳಿಸಿದರು.

ಸುವರ್ಣಾಕ್ಷರದಲ್ಲಿ ಬರೆದಿಡಬೇಕಾದ ಫಲಿತಾಂಶ ಬರಲಿ

2028ರ ಚುನಾವಣೆಗೆ ಬಹಳ ದೂರ ಇಲ್ಲ. ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ನಾವು ಹಗಲು- ರಾತ್ರಿ ಶ್ರಮ ಹಾಕಬೇಕೆಂದು ವಿನಂತಿಸಿದರು. ಕರ್ನಾಟಕವು ದಕ್ಷಿಣ ಭಾರತದ ಹೆಬ್ಬಾಗಿಲು. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಮತ್ತೊಮ್ಮೆ ಸುವರ್ಣಾಕ್ಷರದಲ್ಲಿ ಬರೆದಿಡಬೇಕಾದ ಫಲಿತಾಂಶ ತರಬೇಕೆಂದು ತಿಳಿಸಿದರು.

ಅಹಿಂದ ಹೆಸರು ಹೇಳಿಕೊಂಡು ರಾಜ್ಯದ ಚುಕ್ಕಾಣಿ ಹಿಡಿದ ಸಿದ್ದರಾಮಯ್ಯರ ಸರಕಾರವು ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ. ಎಲ್ಲ ಹಿಂದುಳಿದ ಸಮುದಾಯಗಳನ್ನು, ಪರಿಶಿಷ್ಟ ಜಾತಿ, ಪಂಗಡಗಳ ಏಳಿಗೆಯನ್ನು ಸಂಪೂರ್ಣವಾಗಿ ಮರೆತಿದೆ ಎಂದು ಟೀಕಿಸಿದರು.

ನರೇಂದ್ರ ಮೋದಿಜೀ ಅವರ ಸಮರ್ಥ ನಾಯಕತ್ವ

ಬಿಜೆಪಿ ಜಗತ್ತಿನಲ್ಲೇ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಹೊರಹೊಮ್ಮಿದೆ. ದೇಶದ ನಾಯಕತ್ವ ಹೊಂದಿದ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರ ನೇತೃತ್ವದಲ್ಲಿ ಭಾರತ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ವಿಶ್ವಗುರುವಾಗುವ ಸಂಕಲ್ಪದೊಂದಿಗೆ ಅವರು ದೇಶವನ್ನು ಮುನ್ನಡೆಸುತ್ತಿದ್ದಾರೆ ಎಂದು ಹೇಳಿದರು.

ಸ್ವರಾಜ್ಯದ ಕನಸು ಬಿತ್ತಿದ ಶಿವಾಜಿ ಮಹಾರಾಜರ ಜಯಂತ್ಯುತ್ಸವವನ್ನೂ ಇವತ್ತು ಆಚರಿಸಲಾಗುತ್ತಿದೆ ಎಂದು ತಿಳಿಸಿದರು. ಇಂಥ ದೊಡ್ಡ ಪಕ್ಷದ ನೇತೃತ್ವವನ್ನು ಯುವಕ ನಿತಿನ್ ನಬೀನ್ ಜೀ ಅವರಿಗೆ ನೀಡಿದ್ದು, ಯುವಶಕ್ತಿಗೆ ಹೆಮ್ಮೆಯ ವಿಚಾರ ಎಂದರು.

ನಿರ್ಮಲಾ ಸೀತಾರಾಮನ್ ಅವರ ಬಜೆಟ್ 2047ನೇ ಇಸವಿಗೆ ವಿಕಸಿತ ಭಾರತ ಸಂಕಲ್ಪಕ್ಕೆ ಪೂರಕ ಎಂದು ತಿಳಿಸಿದರು.

ಭಾರತವನ್ನು ಯುಪಿಎ ಸರಕಾರ ಇದ್ದಾಗ ಆರ್ಥಿಕವಾಗಿ ಗುರುತಿಸುತ್ತಿರಲಿಲ್ಲ. ಅಂಥ ಭಾರತವು ಇದೀಗ ಜಗತ್ತಿನ ನಾಲ್ಕನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಇದಕ್ಕೆ ಮೋದಿಜೀ ಅವರ ದಿಟ್ಟ ನಾಯಕತ್ವ ಕಾರಣ ಎಂದು ವಿವರಿಸಿದರು.

ವಿದೇಶಾಂಗ ನೀತಿ, ರಾಜತಾಂತ್ರಿಕ ನಡೆಯ ಪರಿಣಾಮವಾಗಿ ಯುರೋಪ್ ಒಕ್ಕೂಟವು ಭಾರತದ ಜೊತೆ ವ್ಯಾಪಾರ ಒಪ್ಪಂದ ಮಾಡಿಕೊಂಡಿದೆ. ಅಮೆರಿಕ ಕೂಡ ಭಾರತದ ಜೊತೆಗಿನ ಸಂಬಂಧ ಉತ್ತಮ ಪಡಿಸಲು ತೆರಿಗೆ ಪ್ರಮಾಣವನ್ನು ಇಳಿಸಿದೆ ಎಂದು ವಿಶ್ಲೇಷಿಸಿದರು.

ಮೋದಿಜೀ ಅವರಿಗೆ 25ಕ್ಕೂ ಹೆಚ್ಚು ರಾಷ್ಟ್ರಗಳು ತಮ್ಮ ದೇಶದ ಅತ್ಯುನ್ನತ ಗೌರವ ನೀಡಿವೆ. ಇದು ಮೋದಿಜೀ ಅವರ ನಾಯಕತ್ವಕ್ಕೆ ಸಿಕ್ಕಿದ ಗೌರವ ಎಂದರು.

ದೇಶದ ಚುನಾವಣಾ ಆಯೋಗವು ಎಸ್‍ಐಆರ್ (ವಿಶೇಷ ಮತಪಟ್ಟಿ ಪರಿಷ್ಕರಣೆ) ಮಾಡುತ್ತಿದೆ. ರಾಜ್ಯದಲ್ಲೂ ಬರಲಿರುವ ಎಸ್‍ಐಆರ್ ಸಂಬಂಧ ಜಾಗ್ರತೆ ವಹಿಸಲು ಸಲಹೆ ನೀಡಿದರು. ವಿಬಿ ಜಿ ರಾಮ್ ಜಿ ಮೂಲಕ ಭ್ರಷ್ಟಾಚಾರ ತೊಡೆದುಹಾಕಲು ಬಡವರಿಗೆ ಅನುಕೂಲ ತರಲು ಸರಕಾರ ಮುಂದಾಗಿದೆ. ಆದರೆ, ಇದರ ವಿರುದ್ಧ ಕಾಂಗ್ರೆಸ್ ಪಕ್ಷ ಅಪಪ್ರಚಾರ ಮಾಡುತ್ತಿದೆ ಹಾಗೂ ಹಳೆಯ ಚಾಳಿಯನ್ನು ಮುಂದುವರೆಸಿದೆ ಎಂದು ಆಕ್ಷೇಪಿಸಿದರು. ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಗೆಲುವು, ಸ್ಥಳೀಯ ಚುನಾವಣೆಯಲ್ಲೂ ಬಿಜೆಪಿ ಜಯಭೇರಿಯು ಇಡೀ ದೇಶದ ಕಾರ್ಯಕರ್ತರು ಸಂಭ್ರಮಿಸಿದ್ದಾರೆ ಎಂದರು.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]