ದೊಡ್ಡಬಳ್ಳಾಪುರ: ತಾಲೂಕಿನ ಆರೂಢಿಯಲ್ಲಿನ ಡಾ.ಬಿಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಗುರುವಾರ ಸಂಜೆ ನಿಲಯ ವಾರ್ಷಿಕೋತ್ಸವ (Hostel anniversary) ಮತ್ತು ಶಾರದಾ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಟಿ ಏನ್ ಶೇಷಾದ್ರಿ, ವಿದ್ಯಾರ್ಥಿಗಳಿಗೆ ಶಿಸ್ತು ಸಂಯಮ ಜೀವನದ ಅವಿಭಾಜ್ಯ ಅಂಗವಾಗಬೇಕಿದೆ. ಪರೀಕ್ಷೆಗಳು ಕೆಲವೇ ದಿನಗಳಲ್ಲಿ ಆರಂಭವಾಗಲಿದ್ದು, ಓದಿನ ಕಡೆ ಹೆಚ್ಚಿನ ಗಮನ ಹರಿಸಿ, ಉತ್ತಮ ಅಂಕಗಳಿಸಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಅರವಿಂದ ಪ್ರೌಢ ಶಾಲೆಯ ಮುಖ್ಯಶಿಕ್ಷಕ ಸುದರ್ಶನ್ ಬಾಬು, ಮುಖಂಡರಾದ ಮಂಜುನಾಥ್, ವಾರ್ಡನ್ ಶಿವಪ್ಪ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು
ಈ ವೇಳೆ ವಿವಿಧ ಕ್ರೀಡೆಗಳಲ್ಲಿ ಪಾಲ್ಗೊಂಡು ಜಯಶೀಲರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.