'Vignatam 2026' award to Dr. Surappa, a scholar in Adichunchanagiri: H.D. Kumaraswamy

ಆದಿಚುಂಚನಗಿರಿಯಲ್ಲಿ ವಿಜ್ಜಾನಿ ಡಾ. ಸೂರಪ್ಪ ಅವರಿಗೆ ‘ವಿಜ್ಞಾತಂ 2026’ ಪ್ರಶಸ್ತಿ ಪ್ರಧಾನ

ಶ್ರೀ ಆದಿಚುಂಚನಗಿರಿ ಕ್ಷೇತ್ರ: ಅಭಿವೃದ್ಧಿಯಲ್ಲಿ ರಾಜಕೀಯ ಬೆರೆಸುವ ಅಗತ್ಯವಿಲ್ಲ. ಪರಸ್ಪರ ಟೀಕೆ, ದೋಷಾರೋಪ ಮಾಡಿಕೊಳ್ಳುವ ಅಗತ್ಯವೂ ಇಲ್ಲ. ನಾವೆಲ್ಲರೂ ಸೇರಿ ಮಂಡ್ಯ ಜಿಲ್ಲೆಯನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯೋಣ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಹೇಳಿದರು.

ಆದಿಚುಂಚನಗಿರಿಯಲ್ಲಿ ಪ್ರಖ್ಯಾತ ವಿಜ್ಞಾನಿ ಡಾ. ಎಂ.ಕೆ. ಸೂರಪ್ಪ ಅವರಿಗೆ ಶ್ರೀ ಆದಿಚುಂಚನಗಿರಿ ಕ್ಷೇತ್ರದ ವತಿಯಿಂದ ನೀಡಲಾಗುವ ‘ವಿಜ್ಞಾತಂ 2026’ ಪ್ರಶಸ್ತಿಯನ್ನು ಪ್ರಧಾನ ಮಾಡಿ ಮಾತನಾಡಿದರು.

ವೇದಿಕೆಯ ಮೇಲೆ ಕೂತಿದ್ದ ರಾಜ್ಯದ ಸಚಿವರುಗಳ ಎದುರಿನಲ್ಲಿಯೇ ರಾಜ್ಯದ ಪ್ರಗತಿಯ ಬಗ್ಗೆ ಒತ್ತಿ ಹೇಳಿದ ಸಚಿವರು; ಮಂಡ್ಯ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಮತ್ತಷ್ಟು ಅಭಿವೃದ್ಧಿ ಹೊಂದಬೇಕಾಗಿದೆ. ಪಕ್ಷಾತೀತವಾಗಿ ನನ್ನನ್ನು ಈ ಕ್ಷೇತ್ರದ ಜನರು ಗೆಲ್ಲಿಸಿದ್ದಾರೆ. ಈ ಜನರಿಗೆ ದ್ರೋಹ ಮಾಡುವ ವ್ಯಕ್ತಿ ನಾನಲ್ಲ. ಶ್ರೀ ಕಾಲಭೈರವನ ಸನ್ನಿಧಿಯಲ್ಲಿ, ಗುರು ಸಾನ್ನಿಧ್ಯದಲ್ಲಿ ಹೇಳುತ್ತಿದ್ದೇನೆ. ಮಂಡ್ಯಕ್ಕೆ ಕನಿಷ್ಠಪಕ್ಷ ಎರಡು ಕೈಗಾರಿಕೆಗಳನ್ನಾದರೂ ತರುತ್ತೇನೆ ಎಂದು ಘೋಷಿಸಿದರು.

ಈಗಾಗಲೇ ನಾನು ಘೋಷಣೆ ಮಾಡಿದ್ದೇನೆ. ಮಂಡ್ಯಕ್ಕೆ ₹500 ಕೋಟಿ ವೆಚ್ಚದಲ್ಲಿ ಜಾಗತಿಕ ಮಟ್ಟದ ARAI ಸಂಶೋಧನಾ ಕೇಂದ್ರವನ್ನು ತರಲಾಗುವುದು. ಕೇಂದ್ರ ಬಜೆಟ್‌ʼನಲ್ಲೇ ಯೋಜನೆಗೆ ಹಣ ಮೀಸಲು ಇಡಲಾಗಿದ್ದು, 100 ಎಕರೆ ಜಾಗ ಬೇಕೆಂದು ರಾಜ್ಯದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ. ಅದಷ್ಟು ಬೇಗ ರಾಜ್ಯ ಸರಕಾರ ಸೂಕ್ತ ಜಾಗವನ್ನು ಕೆಐಎಡಿಬಿ ಯಿಂದ ಗುರುತಿಸಿ ಅಭಿವೃದ್ಧಿ ಮಾಡಿ ನಮಗೆ ಹಸ್ತಾಂತರ ಮಾಡಬೇಕು. ಜನಪ್ರತಿನಿಧಿಗಳಿಗೆ ಜಾಗ ಕೊಡುವ ಅಧಿಕಾರ ಇಲ್ಲ. ಈ ಬಗ್ಗೆ ರಾಜಕೀಯ ಅಗತ್ಯ ಇಲ್ಲ ಎಂದು ಕೇಂದ್ರ ಸಚಿವರು ಹೇಳಿದರು.

ಆಟೋಮೊಟಿವ್ ರಿಸರ್ಚ್ ಅಸೋಸಿಯೇಷನ್‌ ಆಫ್ ಇಂಡಿಯಾ (ARAI) ಕೇಂದ್ರಕ್ಕೆ ಕೊನೆಪಕ್ಷ ₹1000 ಕೋಟಿಯನ್ನಾದರೂ ಹೂಡಿಕೆ ಮಾಡಲಾಗುವುದು. ಈ ಯೋಜನೆ ಮಂಡ್ಯದ ಚಿತ್ರಣವನ್ನೇ ಬದಲಿಸಲಿದೆ. ಉದ್ಯೋಗ ಸೃಷ್ಟಿ ಅಷ್ಟೇ ಅಲ್ಲದೆ, ಪರೋಕ್ಷ ಉದ್ಯೋಗಗಳನ್ನು ಭಾರೀ ಪ್ರಮಾಣದಲ್ಲಿ ಸೃಷ್ಟಿಸಿ ದೊಡ್ಡ ಮಟ್ಟದ ಆಟೋ ಇಕೋ ಸಿಸ್ಟಮ್ ಅನ್ನು ಸೃಷ್ಟಿ ಮಾಡುತ್ತದೆ. ಜತೆಗೆ, ಮತ್ತೊಂದು ಕೈಗಾರಿಕೆಯನ್ನು ತರುವ ಬಗ್ಗೆ ನಾನು ನಿಕಟವಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಕೇಂದ್ರ ಸಚಿವರು ಹೇಳಿದರು.

ಭ್ರದಾವತಿಯಲ್ಲಿನ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (VSIL) ಪುನಶ್ಚೇತನಕ್ಕೆ ನಾನು ಕೆಲಸ ಮಾಡುತ್ತಿದ್ದೇನೆ. ಉಕ್ಕು ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ನಾನು ದೃಢವಾಗಿ ದುಡಿಮೆ ಮಾಡುತ್ತಿದ್ದೇನೆ. ಆರಂಭಿಕ ಹಂತದಲ್ಲಿ ಕನಿಷ್ಠ ₹5000 ಕೋಟಿಗಳನ್ನಾದರೂ ಈ ಕಾರ್ಖಾನೆಗೆ ಹೂಡಿಕೆ ಮಾಡಲಾಗುವುದು. ಅನೇಕ ರೀತಿಯ ತಾಂತ್ರಿಕ ಚರ್ಚೆಗಳು ನಡೆಯುತ್ತಿವೆ. ಡಿಪಿಆರ್ ಕೆಲಸ ನಡೆಯುತ್ತಿದೆ. ಹಾಗೆಯೇ ಹೆಚ್ ಎಂಟಿ ಗೂ ಕಾಯಕಲ್ಪ ನೀಡುವ ಉದ್ದೇಶವಿದೆ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ನಾವು ಗಮನವಿಟ್ಟು ಕೆಲಸ ಮಾಡುತ್ತಿದ್ದೇವೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಹೇಳಿದರು.

ಶಂಕುಸ್ಥಾಪನೆಗೆ ಬರುವಂತೆ ಒತ್ತಡ ಹಾಕುತ್ತಿದ್ದಾರೆ!

ನಾನು ಮಾಡುವ ಕೆಲಸಕ್ಕೆ ಶಂಕುಸ್ಥಾಪನೆ ಮಾಡುವ ಪರಿಪಾಠ ಇಟ್ಟುಕೊಂಡವನಲ್ಲ. ಆದರೆ, ಇತ್ತೀಚೆಗೆ ಶಂಕುಸ್ಥಾಪನೆಗೆ ಬರಲೇಬೇಕು ಎಂದು ಒತ್ತಡ ಹೇರಲಾಗುತ್ತಿದೆ.

ಚನ್ನಪಟ್ಟಣದಲ್ಲಿ ನಾನು ಸಾವಿರಾರು ಕೋಟಿ ಮೊತ್ತದ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. ಒಂದು ದಿನವೂ ನಾನು ಕ್ಷೇತ್ರಕ್ಕೆ ಹೋಗಿ ಅಡಿಗಲ್ಲು ಹಾಕಿ ಹೆಸರು ಕೆತ್ತಿಸಿಕೊಳ್ಳುವ ಕೆಲಸ ಮಾಡಲಿಲ್ಲ. ಈಗ ನೋಡಿದರೆ ಕೆಲವರು ಅಲ್ಲಿ ಕುಮಾರಾಸ್ವಾಮಿ ಅವರ ಸಾಕ್ಷಿಗುಡ್ಡೇ ಏನು ಎಂದು ಕೇಳುತ್ತಿದ್ದಾರೆ! ಎಂದು ಅವರು ಅಚ್ಚರಿ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕೇಂದ್ರ ಅನುದಾನಿತ ಅನೇಕ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ಕೇಂದ್ರದ ಅನುದಾನ ಇಲ್ಲಿ ಬಳಕೆ ಆಗದೆ ವಾಪಸ್ ಬಂದಿದೆ. ಮ್ಯಾಚಿಂಗ್ ಗ್ರಾಂಟ್ ಮತ್ತು ಸಕಾಲಕ್ಕೆ ಭೂಮಿ ಒದಗಿಸುವುದು ರಾಜ್ಯ ಸರ್ಕಾರಕ್ಕೆ ಆಗುತ್ತಿಲ್ಲ. ಈ ಸಮಸ್ಯೆಯನ್ನು ಸರ್ಕಾರ ಬಗೆಹರಿಸಬೇಕು. ಯೋಜನೆಗಳಿಗೆ ಹಣದ ಕೊರತೆ ಇದೆ ಎಂದ ಕೇಂದ್ರ ಸಚಿವರು; ನಮ್ಮ ಕಡೆಯಿಂದ ಎಲ್ಲಾ ಸಹಕಾರ ಕೊಡುವುದಕ್ಕೆ ಸಿದ್ಧರಿದ್ದೇವೆ. ಕೇವಲ ಜಾಹೀರಾತುಗಳ ಮೂಲಕ ಅಭಿವೃದ್ಧಿ ಸಾಧ್ಯವಿಲ್ಲ. ಅಂತಹ ಪ್ರವೃತ್ತಿ ನನ್ನದಲ್ಲ ಎಂದು ಅವರು ಹೇಳಿದರು.

ಸಮತೋಲಿತ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ. ಆ ನಿಟ್ಟಿನಲ್ಲಿ ನಾವು ಪ್ರಧಾನಿಗಳ ಮಾರ್ಗದರ್ಶನದಂತೆ ಕೆಲಸ ಮಾಡುತ್ತಿದ್ದೇವೆ. ಅವರ ನೇತೃತ್ವದಲ್ಲಿ ಭಾರತವು ಜಗತ್ತಿನ ಬೃಹತ್ ಆರ್ಥಿಕ ಶಕ್ತಿಯಾಗಿ ಬೆಳೆಯುತ್ತಿದೆ. ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಅಗ್ರದೇಶಗಳಿಗೆ ಸರಿಸಾಟಿ ಆಗುವ ರೀತಿಯಲ್ಲಿ ಭಾರತವನ್ನು ಮುನ್ನಡೆಸುತ್ತಿದ್ದಾರೆ ಎಂದು ಕೇಂದ್ರ ಸಚಿವರು ಬಣ್ಣಿಸಿದರು.

ಶ್ರೀ ಆದಿಚುಂಚನಗಿರಿ ಮಠದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದ ನಾಥ ಮಹಾಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿದ್ದರು. 13ನೇ ಪಟ್ಟಾಭಿಷೇಕ ಮಹೋತ್ಸವದ ಹಿನ್ನೆಲೆಯಲ್ಲಿ ಪರಮಪೂಜ್ಯರಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಅವರು, ಗೋಸಾಯಿ ಮಠದ ಶ್ರೀ ಮಂಜುನಾಥ ಭಾರತೀ ಸ್ವಾಮೀಜಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ರಾಜ್ಯದ ಸಚಿವರಾದ ಕೆ.ಹೆಚ್. ಮುನಿಯಪ್ಪ, ಚೆಲುವರಾಯಸ್ವಾಮಿ, ಮಾಜಿ ಶಾಸಕ ಸುರೇಶ್ ಗೌಡ, ಶಾಸಕ ಕೆ.ಆರ್.ಪೇಟೆ ಮಂಜುನಾಥ್, ವಿಜ್ಞಾತಂ ಪ್ರಶಸ್ತಿ ಪುರಸ್ಕೃತರಾದ ಖ್ಯಾತ ವಿಜ್ಞಾನಿ ಡಾ. ಎಂ.ಕೆ. ಸೂರಪ್ಪ ಸೇರಿದಂತೆ ವಿವಿಧ ಗಣ್ಯರು, ಸ್ವಾಮೀಜಿಗಳು ಉಪಸ್ಥಿತರಿದ್ದರು.

ರಾಜಕೀಯ

ಆದಿಚುಂಚನಗಿರಿಯಲ್ಲಿ ವಿಜ್ಜಾನಿ ಡಾ. ಸೂರಪ್ಪ ಅವರಿಗೆ ‘ವಿಜ್ಞಾತಂ 2026’ ಪ್ರಶಸ್ತಿ ಪ್ರಧಾನ

ಆದಿಚುಂಚನಗಿರಿಯಲ್ಲಿ ವಿಜ್ಜಾನಿ ಡಾ. ಸೂರಪ್ಪ ಅವರಿಗೆ ‘ವಿಜ್ಞಾತಂ 2026’ ಪ್ರಶಸ್ತಿ ಪ್ರಧಾನ

ಅಭಿವೃದ್ಧಿಯಲ್ಲಿ ರಾಜಕೀಯ ಬೆರೆಸುವ ಅಗತ್ಯವಿಲ್ಲ. ಪರಸ್ಪರ ಟೀಕೆ, ದೋಷಾರೋಪ ಮಾಡಿಕೊಳ್ಳುವ ಅಗತ್ಯವೂ ಇಲ್ಲ. ನಾವೆಲ್ಲರೂ ಸೇರಿ ಮಂಡ್ಯ ಜಿಲ್ಲೆಯನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯೋಣ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="119645"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!