ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ (Tubagere) ಗ್ರಾಮದಲ್ಲಿ ಬಿಎಂಎಸ್ ಕಾನೂನು ಮಹಾವಿದ್ಯಾಲಯ ವತಿಯಿಂದ ಕಾನೂನು ಅರಿವು ಮತ್ತು ನೆರವು (Legal awareness) ಕಾರ್ಯಕ್ರಮ ನಿನ್ನೆ ಸಂಜೆ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್ ಆರ್ ಜೆ ಎಸ್ ರವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಸಮಾಜದಲಿ ವಕೀಲಿ ವೃತ್ತಿ ಬಹಳಷ್ಟು ಗೌರವ ಸ್ಥಾನ ಪಡೆದು ಕೊಂಡಿದ್ದು, ಜವಾಬ್ದಾರಿ ಹೆಚ್ಚಿದೆ ಎಂದರು.
ಜೆಎಂಎಫ್‌ಸಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಡಿ ಕ್ರಾಂತಿ ಕಿರಣ್ ಮಾತನಾಡಿ, ಕಾನೂನು ವಿದ್ಯಾರ್ಥಿಗಳು ಸಮಾಜಕ್ಕೆ ಮಾದರಿಯಾಗಬೇಕಿದೆ. ಸಮಾಜದಲ್ಲಿ ನೊಂದ ವರ್ಗದವರಿಗೆ ರಕ್ಷಣೆಯನ್ನು ಕೊಡುವಲ್ಲಿ ನ್ಯಾಯಾಲಯಗಳು ಮಹತ್ತರ ಪಾತ್ರವನ್ನು ನಿರ್ವಹಿಸುತ್ತದೆ ಎಂಬುದನ್ನು ಸಂಕ್ಷಿಪ್ತವಾಗಿ ವಿವರಿಸಿದರು.
ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ಅಧ್ಯಕ್ಷರಾದ ರೇಣುಕಾ ಮೂರ್ತಿ ಮಾತನಾಡಿ, ಗ್ರಾಮೀಣ ಸೊಗಡನ್ನು ವಿದ್ಯಾರ್ಥಿಗಳು ಇಂದು ಅನುಭವದ ಮೂಲಕ ತಮ್ಮ ಅರಿವಿಗೆ ತೆಗೆದುಕೊಳ್ಳಬೇಕೆಂದರು. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊಫೆಸರ್ ಡಾಕ್ಟರ್ ಅನಿತಾ ಎಫ್ ಎನ್ ಡಿಸೋಜ ವಹಿಸಿದರು.
ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಕೆ. ಕನಕ ರಾಜ್, ಉಪಾಧ್ಯಕ್ಷ ಜಗನ್ನಾಥ್,, ಜಂಟಿ ಕಾರ್ಯದರ್ಶಿ ನರಸಿಂಹಮೂರ್ತಿ, ಖಜಾಂಚಿ ಗೀತಾ, ಸೇರಿದಂತೆ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ವೃಂದದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.