ಮಂಡ್ಯ: ನಾಗಮಂಗಲದ ಜೆಡಿಎಸ್ (JDS) ಮಾಜಿ ಶಾಸಕ ಸುರೇಶ್ ಗೌಡ (Suresh Gowda) ಕಾರು ಪಲ್ಟಿಯಾಗಿ ಅಪಘಾತ (Accident) ಸಂಭವಿಸಿರುವ ಘಟನೆ ಮಂಡ್ಯದ ಬೊಂತೆಕೊಪ್ಪಲು ಸಮೀಪ ನಡೆದಿದೆ.
ಕಾರ್ಯಕರ್ತರ ಮದುವೆಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಭಾಗಶಃ ಜಖಂಗೊಂಡಿದೆ. ಅಪಘಾತದಲ್ಲಿ ಸುರೇಶ್ ಗೌಡರ ಕೈಗೆ ಪೆಟ್ಟು ಬಿದ್ದಿದ್ದು, ಚಾಲಕನಿಗೂ ಗಾಯಗಳಾಗಿವೆ.
ಕಾರು ಪಲ್ಟಿಯಾದ ತಕ್ಷಣ ಸುರೇಶ್ ಗೌಡ ಅವರ ಗನ್ ಮ್ಯಾನ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಸುರೇಶ್ ಗೌಡರನ್ನು ಆಸ್ಪತ್ರೆಗೆ ದಾಲಿಸಿದ್ದಾರೆ.
ಇಬ್ಬರನ್ನೂ ಮೊದಲು ಮಂಡ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.