ಲಂಚ ಪ್ರಕರಣ: ಬಿಜೆಪಿಗೆ ಭಾರೀ ಮುಜುಗರ.. ಶಾಸಕ ಲಮಾಣಿಗೆ ನೋಟಿಸ್ ?

BJP MLA falls into Loka's trap while accepting bribe

ಬೆಂಗಳೂರು: ಗುತ್ತಿಗೆದಾರರಿಂದ 5 ಲಕ್ಷ ಲಂಚ ಪಡೆಯುವ ವೇಳೆ ಲೋಕಾಯುಕ್ತರಿಂದ ಬಂಧನಕ್ಕೊಳಪಟ್ಟು ಜೈಲು ಪಾಲಾಗಿರುವ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ (BJP MLA) ಡಾ.ಚಂದ್ರು ಲಮಾಣಿಗೆ (Dr. Chandru Lamani) ಪಕ್ಷವು ವಿವರಣೆ ಕೇಳಿ ನೋಟಿಸ್‌ ನೀಡಲು ಮುಂದಾಗಿದೆ ಎಂದು ವರದಿಯಾಗಿದೆ.

ವಿಧಾನಸಭೆಯ ಪ್ರತಿಪಕ್ಷದ ನಾಯಕ ಆ‌ರ್.ಅಶೋಕ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಕರಣದ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಪ್ರಕರಣದಿಂದ ಬಿಜೆಪಿಗೆ ಭಾರೀ ಮುಜುಗರವಾಗಿದ್ದು, ಚಂದ್ರು ಲಮಾಣಿಯಿಂದ ವಿವರಣೆ ಪಡೆಯುವ ತೀರ್ಮಾನಕ್ಕೆ ಬರಲಾಗಿದೆ.

ಬಿಜೆಪಿ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಆರ್. ಅಶೋಕ, ಲಮಾಣಿಗೆ ಒಂದೆರಡು ದಿನದಲ್ಲಿ ಸ್ಪಷ್ಟನೆ ಕೇಳಿ ನೋಟಿಸ್‌ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ: ಬಸವರಾಜ ಬೊಮ್ಮಾಯಿ

ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರ ವಿರುದ್ಧ ಪಡ್ಯಂತ್ರ ನಡೆದಿದೆ. ಒತ್ತಾಯಪೂರ್ವಕವಾಗಿ ಅವರಿಗೆ ಹಣ ನೀಡುವ ಪ್ರಯತ್ನ ನಡೆದಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಪ್ರಕಾರ ಲಂಚ ಕೊಡುವ ಒತ್ತಾಯ ಮಾಡುವುದೂ ಕೂಡ ತಪ್ಪು ಹೀಗಾಗಿ ಎಲ್ಲ ಆಯಾಮಗಳಲ್ಲಿ ಸರಿಯಾದ ರೀತಿಯಲ್ಲಿ ತನಿಖೆಯಾಗಬೇಕೆಂದು ಒತ್ತಾಯಿಸುದಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕ ಚಂದ್ರು ಲಮಾಣಿ ಅವರ ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಜನರು ಬಂದಿರುತ್ತಾರೆ. ಹೀಗಾಗಿ ಅದರಲ್ಲಿ ಯಾವುದೂ ಸ್ಪಷ್ಟತೆ ಇಲ್ಲ. ಲೋಕಾಯುಕ್ತರು ಕೇಸ್ ಹಾಕಿದ್ದಾರೆ.

ತನಿಖೆ ನಂತರ ಸತ್ಯಾ ಸತ್ಯತೆ ಹೊರ ಬರುತ್ತದೆ. ಒಬ್ಬ ಯುವ ವೈದ್ಯರು ಒಳ್ಳೆಯ ಕೆಲಸ ಮಾಡುತ್ತಿರುವಾಗ ಒಂದು ಕರಿ ನೆರಳು ಅವರ ಸೇವೆಗೆ ಅಡ್ಡಿಯಾಗಿದೆ. ಲಂಚ ಕೊಡುವ ಒತ್ತಾಯ ಮಾಡುವುದೂ ಕೂಡ ಭಷ್ಟಾಚಾರ ನಿಗ್ರಹ ಕಾಯ್ದೆಯ ಪ್ರಕಾರ ತಪ್ಪು ಹೀಗಾಗಿ ಎಲ್ಲ ಆಯಾಮಗಳಲ್ಲಿ ಸರಿಯಾದ ರೀತಿಯಲ್ಲಿ ತನಿಖೆಯಾಗಬೇಕೆಂದು ಒತ್ತಾಯ ಮಾಡುತ್ತೇನೆ.

ಯಾವುದೇ ಒಬ್ಬರ ಸಾರ್ವಜನಿಕರ ಜೀವನವನ್ನು ಪಡ್ಯಂತ್ರದಿಂದ ಮುಗಿಸುವ ಕೆಲಸವನ್ನು ಯಾರೂ ಪೋತ್ಸಾಹ ಮಾಡಬಾರದು ಖಂಡಿಸಬೇಕು ಎಂದು ಹೇಳಿದರು.

ಗುತ್ತಿಗೆದಾರರ ಸಂಘದವರು ಮಾಡಿರುವ ಕಮಿಷನ್ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ. ಅವರು, ಕಾಂಗ್ರೆಸ್ ನಾಟಕ ಬಟಾ ಬಯಾಗಿದೆ. ಗುತ್ತಿಗೆದಾರರ ಸಂಘ ಒಂದೇ ಅಲ್ಲ. ಬೆಸ್ಕಾಂ ಗುತ್ತಿಗೆದಾರರ ಸಂಘ, ಪಿಡಬ್ಲ್ಯುಡಿ ಸಂಘ, ಎಲ್ಲ ಗುತ್ತಿಗೆದಾರರ ಸಂಘದವರು ಪತ್ರಿಕಾ ಗೋಷ್ಠಿ ಮಾಡಿ ಕಮಿಷನ್ ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ನವರಿಗೆ ಈ ಬಗ್ಗೆ ಪ್ರಶ್ನೆ ಮಾಡುವ ನೈತಿಕತೆ ಇಲ್ಲ ಎಂದು ಹೇಳಿದರು.

ಸಿಎಂ ಲೆಕ್ಕ ಕೊಡಲಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯವಾಗಿ ತಮಗೆ ಅನ್ಯಾಯ ಮಾಡಲಾಗುತ್ತಿದೆ ಎನ್ನುವ ದೃಷ್ಠಿಯಲ್ಲಿ ಮಾಡಿರುವ ಅಭಿಪ್ರಾಯದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರಿಗೆ ಅನ್ಯಾಯವಾಗಿದೆ. ರಾಜಕೀಯ ಬೆಳವಣಿಗೆಯನ್ನು ಯಾರೂ ಸಹಿಸುತ್ತಿಲ್ಲ ಅಂತ ಹೇಳುತ್ತಿದ್ದಾರೆ. ಅವರು ಸಿಎಂ ಆಗಿ ದೇವರಾಜ ಅರಸು ಅವರ ಅವಧಿಯ ದಾಖಲೆಯನ್ನು ಮೀರಿದ್ದಾರೆ. ಏಳು ವರ್ಷ ಅಧಿಕಾರ ಅನುಭವಿಸಿದ್ದಾರೆ. ಅತಿ ಹೆಚ್ಚು ಅವಧಿ ಅಧಿಕಾರ ಅನುಭವಿಸಿದವರೇ ಅನ್ಯಾಯ ಆಗಿದೆ ಅಂದರೆ ಏನು? ಅವರ ಅವಧಿಯಲ್ಲಿ ಹಿಂದುಳಿದ ವರ್ಗದವರಿಗೆ, ಪರಿಶಿಷ್ಟ ವರ್ಗದವರಿಗೆ ಏನು ಮಾಡಿದ್ದಾರೆ ಅನ್ನುವುದನ್ನು ಸಿದ್ದರಾಮಯ್ಯ ಲೆಕ್ಕಾ ಕೊಡಬೇಕು. ಅವರು ಲೆಕ್ಕ ಕೊಡುವ ಸ್ಥಾನದಲ್ಲಿದ್ದಾರೆ ಎಂದು ಹೇಳಿದರು.

ಎಸ್ಸಿಗಳಿಗೆ ಸಿಎಂ ಸ್ಥಾನ ಕೊಡಬೇಕು ಅನ್ನುವ ಮಾತನಾಡುತ್ತಾರೆ. ಸಿದ್ದರಾಮಯ್ಯ, ಮಹದಾದೇವಪ್ಪ ಕಾಂಗ್ರೆಸ್‌ಗೆ ಆಮದಾದವರು. ಬಸವಲಿಂಗಪ್ಪ, ರಂಗನಾಥವರು, ಖರ್ಗೆಯವರು ಬಹಳಷ್ಟು ಘಟಾನುಘಟಿಗಳು ಕಾಂಗ್ರೆಸ್‌ ಗೆ ಬೆಂಬಲ ಕೊಡುತ್ತ ಬಂದಿದ್ದಾರೆ. ಎಪ್ಪತ್ತೈದು ವರ್ಷಗಳಿಂದ ದಲಿತರು ಕಾಂಗ್ರೆಸ್‌ ಗೆ ಬೆಂಬಲ ನೀಡುತ್ತ ಬಂದಿದ್ದಾರೆ. ದಲಿತರ ಋಣದಲ್ಲಿ ಇರುವಂತ ಕಾಂಗ್ರೆಸ್‌ನವರು ಅವರನ್ನು ಸಿಎಂ ಮಾಡಬೇಕು. ನಿಜವಾಗಲು ರಾಜಕೀಯ ಬದ್ಧತೆ ಇದ್ದರೆ, ಕಾಂಗ್ರೆಸ್ ದಲಿತರ ಹಕ್ಕನ್ನು ಕೊಡಬೇಕು. ಅದು ಭಿಕ್ಷೆಯಲ್ಲ. ದಲಿತರಿಗೆ ಮೂಗಿಗೆ ತುಪ್ಪ ಸವರುವ ಮೂಲಕ ದಲಿತರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಎಸ್ಪಿ ವರ್ಗಾವಣೆ ಮಾಡಬೇಕು

ಬಾಗಲಕೋಟೆಯಲ್ಲಿ ನಡೆದ ಗಲಾಟೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಗಲಾಟೆಯನ್ನು ಯಾರು ಸೃಷ್ಟಿ ಮಾಡಿದ್ದಾರೆ. ಮಸೂತಿಯಿಂದ ಕಲ್ಲು, ಚಪ್ಪಲಿ ಬಿದ್ದಿದೆ. ಅದನ್ನು ಯಾರು ಮಾಡಿದ್ದಾರೆ. ಪೊಲಿಸರು ಒಂದು ಸೈಡ್ ಬಂಧನ ಮಾಡುವುದು. ಪ್ರಮುಖರನ್ನು ಬಿಟ್ಟು ಬಂಧನ ಮಾಡುವುದು. ಪಿತೂರಿ ಹಿಂದಿರುವವರನ್ನು ಬಿಟ್ಟು ಇತರರನ್ನು ಬಂಧಿಸಿದರೆ ಪಿತೂರಿ ಮಾಡುವವರು ಮುಂದೆಯೂ ಮಾಡುತ್ತಾರೆ ತುಷೀಕರಣ ಮಾಡುವ ಮೂಲಕ ಹಿಂದೂಗಳ ಹಬ್ಬ, ಮೆರವಣಿಗೆ, ಶಿವಾಜಿ ಜಯಂತಿ.. ಗಣೇಶ ಜಯಂತಿ ಕಾರ್ಯಕ್ರಮಗಳಲ್ಲಿ ನಿರಂತರ ಗಲಾಟೆ ಮಾಡಿಸುವುದು ನಡೆಯುತ್ತಿದೆ. ಬಾಗಲಕೋಟೆ ಎಸ್ಪಿಗೆ ಏಟು ಬಿದ್ದು ರಕ್ತ ಬರುತ್ತಿದ್ದರೂ ನನಗೇನು ಆಗಿಲ್ಲ ಎಂದು ಹೇಳುತ್ತಾರೆ. ಮೊದಲು ಅಲ್ಲಿನ ಎಸ್ಪಿ ಸೇರಿದಂತೆ ಎಲ್ಲ ಪೊಲೀಸ್ ಅಧಿಕಾರಿಗಳನ್ನು ವರ್ಗ ಮಾಡಬೇಕು ಎಂದು ಆಗ್ರಹಿಸಿದರು.

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]