ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ (Dodamma temple) ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.
ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದ್ದು, ಒಳನುಗ್ಗಿರುವ ದುಷ್ಕರ್ಮಿಗಳು ಹುಂಡಿ ಹಾಗೂ ದೇವಿಯ ತಾಳಿ ಆಭರಣವನ್ನು ಕದ್ದೊಯ್ದಿರುವುದಾಗಿ ತಿಳಿದುಬಂದಿದೆ.
ಜನವಸತಿ ಪ್ರದೇಶದಲ್ಲೇ ಇರುವ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.