ಬೆಂಗಳೂರು: ನಿನ್ನೆ ಧಾರವಾಡದಲ್ಲಿ ನಡೆದ ಪ್ರತಿಭಟನೆಯ ವಿದ್ಯಾರ್ಥಿಗಳಿಂದ ಗೋ ಬ್ಯಾಕ್ ಕೂಗಿಸಿಕೊಂಡು ಮುಜುಗರಕ್ಕೀಡಾಗಿ ಹಿಂತಿರುಗಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka) ಅವರು, ಇಂದು ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡಿ ಆರೋಪಗಳ ಸುರಿಮಳೆಗೈದಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿ ಅರಾಜಕತೆ ಗ್ಯಾರಂಟಿ ಎಂದಿದ್ದು, “ಕಾಂಗ್ರೆಸ್ ಅಧಿಕಾರದಲ್ಲಿದೆ, ಜನರು ಬೀದಿಗಿಳಿದಿದ್ದಾರೆ!”
ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರೆಂಟಿ; ಅರಾಜಕತೆ ಗ್ಯಾರೆಂಟಿ
— R. Ashoka (@RAshokaBJP) February 25, 2026
"ಕಾಂಗ್ರೆಸ್ ಅಧಿಕಾರದಲ್ಲಿದೆ, ಜನರು ಬೀದಿಗಿಳಿದಿದ್ದಾರೆ!"@INCKarnataka ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ.
❌ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಂದ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ
❌ಖಾಲಿ… pic.twitter.com/TcMcbgTITD
ಕಾಂಗ್ರೆಸ್ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ.
❌ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಂದ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ.
❌ಖಾಲಿ ಹುದ್ದೆ ಭರ್ತಿ ಸೇರಿ ವಿವಿಧ ಬೇಡಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ವೈದ್ಯರಿಂದ ಮಾರ್ಚ್ 11 ರಿಂದ ಒಪಿಡಿ ಬಂದ್.
❌37,000 ಕೋಟಿ ರೂ. ಬಾಕಿಗೆ ಆಗ್ರಹಿಸಿ ಗುತ್ತಿಗೆದಾರರಿಂದ ಮಾರ್ಚ್ 6 ರಂದು ಕಾಮಗಾರಿ ಸ್ಥಗಿತಗೊಳಿಸಿ ಪ್ರತಿಭಟನೆ.
❌ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣದಲ್ಲಿ ಆಗಿರುವ ಅನ್ಯಾಯ ಸರಿಪಡಿಸುವಂತೆ ಬಂಜಾರ, ಭೋವಿ, ಕೊರಮ, ಕೊರಚ ಮತ್ತು ಅಲೆಮಾರಿ ಸಮುದಾಯಗಳ ಪ್ರತಿಭಟನೆ.
❌ಒಳಮೀಸಲಾತಿಯಿಂದ ಆಗಿರುವ ಅನ್ಯಾಯ ವಿರುದ್ಧ ಎಸ್ಸಿ ಬಲಗೈ ಸಮುದಾಯ ಪ್ರತಿಭಟನೆ.
❌ಬಿಡದಿ ಟೌನ್‌ಶಿಪ್ ಯೋಜನೆ, ಸೆಣಬು ಸಬ್ಸಿಡಿ ಬಂದ್, ಕಬ್ಬು ಬಿಲ್ ಬಾಕಿ ವಿರುದ್ಧ ರೈತರಿಂದ ಬೀದಿಳಿಗಿದು ಪ್ರತಿಭಟನೆ.
❌ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗೆ ಒತ್ತಾಯಿಸಿ ಫೆಬ್ರವರಿ 27 ರಿಂದ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ.
❌38 ತಿಂಗಳ ಹಿಂಬಾಕಿಗಾಗಿ ಸಾರಿಗೆ ನೌಕರರಿಂದ ಮುಷ್ಕರ.
ಅರಾಜಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaia) ನವರೇ, ನಿಮ್ಮ ಭ್ರಷ್ಟ ಆಡಳಿತದಲ್ಲಿ ಒಬ್ಬರಾದರೂ ನೆಮ್ಮದಿಯಿಂದ ಇದ್ದಾರಾ? ಸರ್ಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಈ ಹೋರಾಟಗಳಿಗಿಂತ ಬೇರೆ ಸಾಕ್ಷಿ ಬೇಕೆ? ಇಡೀ ಕರ್ನಾಟಕ ಇಂದು ಅರಾಜಕತೆಯಲ್ಲಿದೆ ಎಂದಿದ್ದಾರೆ.