ದೊಡ್ಡಬಳ್ಳಾಪುರ: ಕನಸವಾಡಿಯಲ್ಲಿ ವಿಜೃಂಭಣೆಯ ಶ್ರೀ ಶನಿಮಹಾತ್ಮ ಸ್ವಾಮಿ ಬ್ರಹ್ಮ ರಥೋತ್ಸವ

The grand Sri Shanimahatma Swamy Brahma Rathotsava in Kanasavadi

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ದ ಮಧುರೆ ಹೋಬಳಿ ಕನಸವಾಡಿ (ಚಿಕ್ಕಮಧುರೆ – Kanasavadi) ಕ್ಷೇತ್ರದಲ್ಲಿ ಗುರುವಾರ ಶ್ರೀ ಶನಿಮಹಾತ್ಮ ಸ್ವಾಮಿಯ (Sri Shanimahatma Swamy) 71ನೇ ವರ್ಷದ ಬ್ರಹ್ಮ ರಥೋತ್ಸವ (Brahma Rathotsava) ವಿಜೃಂಭಣೆಯಿಂದ ನಡೆಯಿತು.

ದೊಡ್ಡಬಳ್ಳಾಪುರ, ಬೆಂಗಳೂರು, ನೆಲಮಂಗಲ ಸೇರಿದಂತೆ ರಾಜ್ಯ ವಿವಿದೆಡೆಗಳಿಂದ ಸಹಸ್ರಾರು ಭಕ್ತಾದಿಗಳು ರಥೋತ್ಸವದಲ್ಲಿ ಭಾಗವಹಿಸಿ ಹಣ್ಣು, ದವನ ಸಮರ್ಪಿಸಿ ಧನ್ಯತೆ ಮೆರೆದರು.

ರಥೋತ್ಸವದಲ್ಲಿ ವೀರಗಾಸೆ, ಚಂಡೆ ವಾದ್ಯ, ಗಾರುಡಿ ಬೊಂಬೆ, ಸೋಮನ ಕುಣಿತ, ಕೇರಳದ ಕಲಾವಿದರ ದೇವತಾ ಮೂರ್ತಿಗಳ ಪ್ರದರ್ಶನಗಳ ತಂಡಗಳೊಡನೆ ತಮಟೆ ವಾದನೆ, ಮಂಗಳವಾದ್ಯ ಜಾನಪದ ಕಲಾತಂಡಗಳು ಭಾಗವಹಿಸಿದ್ದವು.

ಬ್ರಹ್ಮ ರಥೋತ್ಸವದ ಅಂಗವಾಗಿ, ಶ್ರೀ ಶನಿಮಹಾತ್ಮ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ದೇವಾಲಯದಲ್ಲಿ ಮಹಾಗಣಪತಿ, ನವಗ್ರಹ, ಶ್ರೀಶನೇಶ್ವರ ಹೋಮ, ಪೂಜಾ ಕಾರ್ಯ್ಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಆಗಮಿಸಿದ್ದ ಭಕ್ತಾದಿಗಳಿಗೆ ದೇವಾಲಯದ ವತಿಯಿಂದ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.

ರಥೋತ್ಸವದಲ್ಲಿ ಭಾಗವಹಿಸಿದ್ದ ಭಕ್ತಾದಿಗಳಿಗೆ ಕೋಡಿಹಳ್ಳಿ, ಮಾರಸಂದ್ರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಿಂದ ದೊಡ್ಡ ಗಾತ್ರದ ತಪ್ಪಲೆಗಳಲ್ಲಿ ಪಾನಕ, ಕೋಸಂಬರಿ, ಪ್ರಸಾದಗಳನ್ನು ಮಾಡಿಕೊಂಡು ವಿವಿಧ ವಾಹನಗಳಲ್ಲಿ ಬಂದಿದ್ದ ಗ್ರಾಮಸ್ಥರು ಭಕ್ತಾದಿಗಳಿಗೆ ಹಂಚಿಕೆ ಮಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ರಥೋತ್ಸವಕ್ಕೂ ಮುನ್ನ ಶನಿಮಹಾತ್ಮಸ್ವಾಮಿ ಮೆರವಣಿಗೆ ದೇವರನ್ನು ಪಾನಕ ಹಂಚಿಕೆ ಸ್ಥಳಕ್ಕೆ ಹೊತ್ತುಕೊಂಡು ಹೋಗಿ ಪೂಜೆ ಸಲ್ಲಿಸಲಾಯಿತು. ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.

ಪೌರಾಣಿಕ ನಾಟಕೋತ್ಸವ

ನಿತ್ಯ ರಾತ್ರಿ 8-30ಕ್ಕೆ ನಡೆಯುವ ನಾಟಕೋತ್ಸವದಲ್ಲಿ ಫೆ.27ರಂದು ಕರುನಾಡ ಕನ್ನಡಾಂಭೆ ಸಾಂಸ್ಕೃತಿಕ ವೇದಿಕೆ ವತಿಯಿಂದ ರಾಜಾ ವಿಕ್ರಮ, ಫೆ.28ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ರಂಗಭೂಮಿ ಕಲಾವಿದರ ಸಂಘದಿಂದ ಶನಿ ಪ್ರಭಾವ, ಮಾ.1ರಂದು ವಿಜಯಕುಮಾರಿ ಮಹಿಳಾ ಕಲಾ ತಂಡದಿಂದ ಕುರುಕ್ಷೇತ್ರ, ಮಾ.2ರಂದು ಚೆನ್ನಕೇಶವ ಕೃಪಾಪೋಷಿತ ನಾಟಕ ಮಂಡಲಿಯಿಂದ ಸಂಪೂರ್ಣ ರಾಮಾಯಣ, ಮಾ.3ರಂದು ಶ್ರೀ ಗಜೇಂದ್ರ ಕೃಪಾಪೋಷಿತ ನಾಟಕ ಮಂಡಲಿಯಿಂದ ಕುರುಕ್ಷೇತ್ರ ಪೌರಾಣಿಕ ನಾಟಕ ಪ್ರದರ್ಶನಗಳು ನಡೆಯಲಿವೆ.

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]