ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಯೋಜನಾ ಸಮಿತಿಗೆ ಚುನಾವಣೆಯನ್ನು (District Planning Committee Election) ಇಂದು (ಫೆ.27) ಬೆಳಗ್ಗೆ 9.00 ರಿಂದ 1.00 ಗಂಟೆಯವರೆಗೆ ಮತದಾನ ಹಾಗೂ ಇದೇ ಮಧ್ಯಾಹ್ನ 3.00 ಗಂಟೆಯಿಂದ ಮತ ಎಣಿಕೆ ಕಾರ್ಯವನ್ನು ಜಿಲ್ಲಾ ಪಂಚಾಯತ್ ಸಭಾಂಗಣ, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ಇಲ್ಲಿ ನಡೆಸಲಾಗುತ್ತಿದೆ.
ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತವಾಗಿ ಚುನಾವಣೆ ಕಾರ್ಯವನ್ನು ನಡೆಸುವ ನಿಟ್ಟಿನಲ್ಲಿ ದಿನಾಂಕ: 27.02.2026ರ ಬೆಳಿಗ್ಗೆ 8:00 ಗಂಟೆಯಿಂದ ದಿನಾಂಕ: 28.02.2026ರ ಬೆಳಿಗ್ಗೆ 8:00 ಗಂಟೆಯವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮದ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.
ಈ ಅವಧಿಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣ, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ಇಲ್ಲಿ 100 ಮೀ ವ್ಯಾಪ್ತಿಯಲ್ಲಿ 05 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭಗಳನ್ನು ಜರುಗಿಸುವುದು ನಿಷೇಧಿಸಿದೆ.