Job fair in Doddaballapur

ದೊಡ್ಡಬಳ್ಳಾಪುರದಲ್ಲಿ ಉದ್ಯೋಗ ಮೇಳ

ದೊಡ್ಡಬಳ್ಳಾಪುರ: ನಗರದ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಹಾಗೂ ದೊಡ್ಡಬಳ್ಳಾಪುರ ತಾಲೂಕು ಆಡಳಿತ ಮತ್ತು ತಾಲೂಕು ಕೈಗಾರಿಕೆಗಳ ಸಂಘದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಡೆದ ತಾಲ್ಲೂಕು ಮಟ್ಟದ ಉದ್ಯೋಗ ಮೇಳವನ್ನ (Job fair) ಆಯೋಜಿಸಲಾಗಿತ್ತು.

ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ (K.H. Muniyappa), ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಜಮೀನು ನೀಡಿದ ರೈತರ ಮಕ್ಕಳಿಗೆ ಕಂಪನಿಗಳು ಉದ್ಯೋಗಾವಕಾಶದಲ್ಲಿ ಮೊದಲ ಆದ್ಯತೆ ನೀಡಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಅತಿಹೆಚ್ಚು ಕೈಗಾರಿಕಾ ಪ್ರದೇಶ ಹೊಂದಿರುವ ಭಾಗ ದೊಡ್ಡಬಳ್ಳಾಪುರ ಆಗಿದೆ. ಸುಮಾರು 10,000 ಸಾವಿರ ಎಕರೆ ಜಮೀನು ಕೈಗಾರಿಕಾ ಪ್ರದೇಶಕ್ಕೆ ಒಳಪಟ್ಟಿದೆ. ಆದ್ದರಿಂದ, ಭೂ ವಂಚಿತ ಕುಟುಂಬಗಳಿಗೆ ಸೌಲಭ್ಯ ಕಲ್ಪಿಸಬೇಕು. ಉದ್ಯೋಗ ಆಕಾಂಕ್ಷಿಗಳು ಯಾವುದೇ ರೀತಿಯ ತರಬೇತಿ ಪಡೆಯಬೇಕಾದಲ್ಲಿ ಜಿಲ್ಲಾಡಳಿತಕ್ಕೆ ಸಂಪರ್ಕಸಿಬಹುದಾಗಿದೆ. ಅಗತ್ಯವಿರುವ ತರಬೇತಿ ನೀಡಲು ಸರ್ಕಾರ ಸಿದ್ಧವಿದೆ. ತಾಲೂಕಿನಲ್ಲಿ ಉದ್ಯೋಗ ಮೇಳ ಅಯೋಜನೆ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಿದೆ. ಮುಂದಿನ ದಿನದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಏರ್ಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಡಿಪ್ಲೊಮಾ ಕಾಲೇಜು ಸ್ಥಾಪನೆಗೆ ಮನವಿ

ಶಾಸಕ ಧೀರಜ್ ಮುನಿರಾಜು ಮಾತನಾಡಿ, ತಾಲೂಕಿನಲ್ಲೇ ಅತಿ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಕೀರ್ತಿಗೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಪಾತ್ರವಾಗಿದೆ. ಈಗಾಗಲೇ 10,000ಕ್ಕು ಹೆಚ್ಚು ಉದ್ಯೋಗ ಅವಕಾಶಗಳಿವೆ. ಸರ್ಕಾರದ ವತಿಯಿಂದ ದೊಡ್ಡಬಳ್ಳಾಪುರಕ್ಕು ಡಿಪ್ಲೊಮಾ ಕಾಲೇಜು ಮಂಜೂರಾತಿಯಾದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ.

ಕಂಪನಿಗಳಲ್ಲಿ ಅತಿ ಹೆಚ್ಚು ಉದ್ಯೋಗಾವಕಾಶಗಳು ಇದ್ದು, ವಿದ್ಯಾರ್ಥಿಗಳಿಗೆ ಡಿಪ್ಲೊಮಾ ಕಾಲೇಜು ತೆರೆಯುವುದರಿಂದ ಓದಿನ ನಂತರ ಉದ್ಯೋಗ ಪಡೆಯಲು ಅನುಕೂಲವಾಗುತ್ತದೆ ಎಂದರಲ್ಲದೇ, 6 ತಿಂಗಳಿಗೊಮ್ಮೆ ಪ್ರತಿ ತಾಲೂಕಿನಲ್ಲಿ ಉದ್ಯೋಗ ಮೇಳ ನಡೆಸಬೇಕು ಎಂದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಎನ್ ಅನುರಾಧ, ಎಸಿ ದುರ್ಗಾಶ್ರೀ, ಕೈಗಾರಿಕಾ ಜಂಟಿ ಅಧಿಕಾರಿ ನರೇಂದ್ರ ಬಾಬು,ಡಿವೈಎಸ್ಪಿ ಪಾಂಡುರಂಗ, ತಹಶೀಲ್ದಾರ್ ಮಲ್ಲಪ್ಪ ಯರಗೋಳ, ಜಿಲ್ಲಾ ಕೌಶಲ್ಯಾಭಿವೃಧಿ ಅಧಿಕಾರಿ ಜಗನ್ನಾಥ, ಪ್ರಾಂಶುಪಾಲರು ಸದಾಶಿವ ರಾಮ ಚಂದ್ರಗೌಡ, ಸೇರಿದಂತೆ ಕಂಪನಿಗಳ ಪ್ರತಿನಿಧಿಗಳು ಹಾಗೂ ಉದ್ಯೋಗಾಕಾಂಕ್ಷಿಗಳು ಇದ್ದರು.

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!