Veerashaiva Lingayat society has the power to provide shelter to all societies: B.Y. Vijayendra

ಎಲ್ಲಾ ಸಮಾಜಗಳಿಗೆ ನೆರಳು ಹಾಗೂ‌ ಆಶ್ರಯ ನೀಡುವ ಶಕ್ತಿ ವೀರಶೈವ ಲಿಂಗಾಯತ ಸಮಾಜಕ್ಕಿದೆ: ಬಿ.ವೈ ವಿಜಯೇಂದ್ರ

ಬಾಳೆಹೊನ್ನೂರು: ವೀರಶೈವ ಲಿಂಗಾಯತ ಸಮಾಜ‌ ಜಾಗೃತಿಯಾಗಬೇಕಾದ ಅಗತ್ಯವಿದೆ, ಕೆಲವು‌ ದುಷ್ಟ ಶಕ್ತಿಗಳು ಸಮಾಜವನ್ನು‌ ಒಡೆದು ಆಳುವ ನೀತಿಯನ್ನ ಅನುಸರಿಸುತ್ತಿವೆ.‌ ವೀರಶೈವ ಲಿಂಗಾಯತ ಸಮಾಜದ ಎಲ್ಲಾ ಒಳಪಂಗಡಗಳು ವ್ಯತ್ಯಾಸಗಳನ್ನು ಮರೆತು ಒಟ್ಟಾಗಿ, ಒಂದಾಗಿ ಒಟ್ಟುಗೂಡಿ ಕಾರ್ಯ ನಿರ್ವಹಿಸಬೇಕಾದ ಅನಿವಾರ್ಯವಿದೆ. ಎಲ್ಲಾ ಸಮಾಜಗಳಿಗೆ ನೆರಳು ಹಾಗೂ‌ ಆಶ್ರಯ ನೀಡುವ ಶಕ್ತಿ ವೀರಶೈವ ಲಿಂಗಾಯತ ಸಮಾಜಕ್ಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ ವಿಜಯೇಂದ್ರ (B.Y. Vijayendra) ಹೇಳಿದರು.

ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರಿನ ಶ್ರೀ ರಂಭಾಪುರಿ ವೀರ ಸಿಂಹಾಸನ ಮಹಾಸಂಸ್ಥಾನ ಮಠದಲ್ಲಿ ಜರುಗಿದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ‌ ಮಹಾ ರಥೋತ್ಸವ ಕಾರ್ಯಕ್ರಮದಲ್ಲಿ‌ ಬಾಗವಹಿಸಿ ಮಾತನಾಡಿದರು.

ಶ್ರೀ ಬಿ.ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ವೀರಶೈವ ಲಿಂಗಾಯತ ಮಠಗಳಲ್ಲದೆ ರಾಜ್ಯದಲ್ಲಿರುವ ಎಲ್ಲಾ ಸಮಾಜದ ಮಠಮಾನ್ಯಗಳಿಗೆ ಅನುದಾನ ನೀಡಿ ಆರ್ಥಿಕ ಶಕ್ತಿ ತುಂಬುವ ಕೆಲಸ ಮಾಡಿದರು, ಕಾರಣ ಎಲ್ಲಾ ಮಠಮಾನ್ಯಗಳು ಸಮಾಜದ ಮಕ್ಕಳಿಗೆ ಅಕ್ಷರದಾಸೋಹ, ಅನ್ನದಾಸೋಹ ಹಾಗು ಜ್ಞಾನ ದಾಸೋಹ ನೀಡುವ ಮೂಲಕ ಸಮಾಜಮುಖಿಯಾಗಿ ಕೆಲಸ‌ ಮಾಡುತ್ತಿವೆ ಎಂದು‌ ಶ್ಲಾಘಿಸಿದರು.

ರಂಭಾಪುರಿ ಶ್ರೀಗಳು ಯಡಿಯೂರಪ್ಪನವರ ರಾಜಕೀಯ ಏಳುಬೀಳುಗಳ ಸಮಯದಲ್ಲಿ ಧೈರ್ಯ ನೀಡಿ ಮಾರ್ಗದರ್ಶನ ಮಾಡಿದ್ದಾರೆ, ಅದೇ ರೀತಿ ರಾಜಕೀಯ ಕ್ಷೇತ್ರದಲ್ಲಿ‌ ಅಂಬೆಗಾಲಿಡುತ್ತಿರುವ ನನಗೂ ಸವಾಲುಗಳನ್ನು ಗಟ್ಟಿಯಾಗಿ ಎದುರಿಸುವ ಶಕ್ತಿಯನ್ನು ದಯಪಾಲಿಸಬೇಕೆಂದು ಮನವಿ ಮಾಡಿದರು.

ಸಮಾಜವನ್ನು ತಿದ್ದಿ ಸರಿದಾರಿಗೆ ತರವ ಕೆಲಸವು‌ ಜಗದ್ಗುರುಗಳ ನೇತೃತ್ವದಲ್ಲಿ ನಡೆಯುತ್ತಿದೆ, ಶ್ರೀ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿಗೆ ಮಾನ್ಯ‌ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ರವರು ಹೆಚ್ಚಿನ ಅನುದಾನವನ್ನು‌ ನೀಡಬೇಕೆಂದು ಮನವಿ‌ಮಾಡಿದರು.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!