The term of Congress rule is coming to an end: R. Ashoka

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಬೆಂಗಳೂರು: ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಬಜೆಟ್‌ನಲ್ಲಿ ಕಾಂಗ್ರೆಸ್‌ ಸರ್ಕಾರದ ದೋಷಗಳನ್ನು ಸಮರ್ಥವಾಗಿ ಮಂಡನೆ ಮಾಡಲಾಗುವುದು. ಕಾಂಗ್ರೆಸ್‌ ಒಡೆದ ಮನೆಯಾಗಿದ್ದು, ಶಾಸಕರು ಬೀದಿಯಲ್ಲಿ ನಿಂತು ಧಮಕಿ ಹಾಕುತ್ತಿದ್ದಾರೆ.

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಅಕ್ರಮ ನಡೆದಿದೆ. ಕಳೆದ ಮೂರು ಬಜೆಟ್‌ನಲ್ಲಿ ಅನುದಾನ ಘೋಷಣೆಯಾದರೂ ಬಿಡುಗಡೆಯಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆ ಮಟ್ಟದಲ್ಲಿ ಸಾಲ ಮಾಡಿದ್ದಾರೆ.

ಹಿಂದೂಗಳ ಮೇಲೆ ಹಲ್ಲೆಯಾಗುತ್ತಿದೆ. ಬೆಂಗಳೂರಿನಲ್ಲಿ ಕಸದ ಸಮಸ್ಯೆ ಹೆಚ್ಚಿದೆ. ಕಂದಾಯ ಇಲಾಖೆಯಲ್ಲಿ ಇ ಖಾತಾ ಸಮಸ್ಯೆ ಇದೆ. ಈ ಎಲ್ಲ ವಿಷಯಗಳ ಬಗ್ಗೆ ಸದನದಲ್ಲಿ ಚರ್ಚೆ ಮಾಡುತ್ತೇವೆ ಎಂದರು.

ರಾಜ್ಯ ಸರ್ಕಾರ ಮೂರೂವರೆ ಲಕ್ಷ ಕೋಟಿ ರೂ. ಸಾಲ ಮಾಡಿದೆ. ಹಿಂದಿನ ಎಲ್ಲ ಮುಖ್ಯಮಂತ್ರಿಗಳನ್ನು ಮೀರಿ ಸಿದ್ದರಾಮಯ್ಯ ಸಾಲ ಮಾಡಿದ್ದು, ಅವಧಿ ಮುಗಿಯುವ ವೇಳೆಗೆ ಸಾಲದ ಪ್ರಮಾಣ 6 ಲಕ್ಷ ಕೋಟಿ ರೂ. ಗೆ ಹೋಗಲಿದೆ. ಪ್ರತಿ ವ್ಯಕ್ತಿಯ ಮೇಲೆ 1 ಲಕ್ಷ ರೂ. ಸಾಲ ಇರಲಿದೆ. ಇಂತಹ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್‌ ಚಟುವಟಿಕೆಗಳ ಮೇಲೆ ನಿಗಾ ಇರಿಸಲು ಸಿಎಂ ಸಿದ್ದರಾಮಯ್ಯ ಎಸ್‌ಪಿ ನೇತೃತ್ವದಲ್ಲಿ ಅನಧಿಕೃತವಾಗಿ ತಂಡ ರಚಿಸಿದ್ದಾರೆ. ಅನುದಾನ ಕಡಿತ ಮಾಡುವುದು, ಫೋನ್‌ ಟ್ಯಾಪ್‌ ಮಾಡುವುದು ಹೀಗೆ ಎಲ್ಲ ಕಾರ್ಯಗಳನ್ನು ಮಾಡುತ್ತಿದ್ದಾರೆ. ಇದು ಕಣ್ಣಿಗೆ ಕಾಣದ ಎಸ್‌ಐಟಿ ಆಗಿದೆ. ಗ್ಯಾರಂಟಿಗಳನ್ನು ಮಾಡುವ ಮುಂಚೆಯೇ ಯೋಚನೆ ಮಾಡಬೇಕಿತ್ತು ಎಂದು ಕಾಂಗ್ರೆಸ್‌ ನಾಯಕರು ಹೇಳುತ್ತಿದ್ದಾರೆ.

ಅಡುಗೆ ಅನಿಲ ಸಬ್ಸಿಡಿ ಬಹಳ ವರ್ಷಗಳಿಂದ ಇತ್ತು. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಬಿಟ್ಟುಕೊಡಿ ಎಂದು ಕರೆ ನೀಡಿದ್ದರು. ಆದರೆ ಗ್ಯಾರಂಟಿ ಯೋಜನೆಯನ್ನು ಚುನಾವಣೆಯಲ್ಲಿ ಘೋಷಣೆ ಮಾಡಲಾಗಿತ್ತು. ಉಳ್ಳವರಿಗೂ ಕೊಡುತ್ತೇನೆಂದು ಸಿದ್ದರಾಮಯ್ಯ ಆಗಲೇ ಹೇಳಿದ್ದರು. ಈಗ ಉಳ್ಳವರು ಬಿಟ್ಟುಕೊಡಿ ಎಂದು ಹೇಳುವುದು ತಪ್ಪಾಗುತ್ತದೆ ಎಂದರು.

ಚುನಾವಣಾ ಪ್ರಣಾಳಿಕೆಯಲ್ಲಿ ಯಾವುದನ್ನೂ ಕಾಂಗ್ರೆಸ್‌ ಈಡೇರಿಸಿಲ್ಲ. ಗುತ್ತಿಗೆದಾರರಿಗೆ 37,000 ಕೋಟಿ ರೂ. ಬಾಕಿ ಕೊಡಬೇಕಿದೆ. ಅದನ್ನು ಕೊಡುವುದು ಬಿಟ್ಟು ಹಿಂದಿನ ಬಿಜೆಪಿ ಬಾಕಿ ಉಳಿಸಿಕೊಂಡಿದೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಕೋವಿಡ್‌ ನಂತರ ಬಸವರಾಜ ಬೊಮ್ಮಾಯಿ ಕೊರತೆ ಇಲ್ಲದ ಬಜೆಟ್‌ ಮಂಡಿಸಿದ್ದರು. ಅದನ್ನು ಸಿದ್ದರಾಮಯ್ಯ ಮುಂದುವರಿಸಬೇಕಿತ್ತು. ಆಗ ಪ್ರಶ್ನೆ ಮಾಡದವರು ಈಗ ಆರೋಪ ಮಾಡುತ್ತಾರೆ ಎಂದರು.

ಇರಾನ್‌ ಅಧ್ಯಕ್ಷನಾಗಿದ್ದ ಖಮೇನಿ ಸರ್ವಾಧಿಕಾರಿಯಾಗಿದ್ದು, ಆತನ ವಿರುದ್ಧ ಆಂತರಿಕ ದಂಗೆಯಾಗಿತ್ತು. ಅಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆದಿತ್ತು. ಸಾವಿರಾರು ಜನರನ್ನು ಗುಂಡಿಟ್ಟು ಸಾಯಿಸಲಾಗಿತ್ತು. ಆದರೆ ಬೆಂಗಳೂರು ಸೇರಿದಂತೆ ಭಾರತದ ಅನೇಕ ಕಡೆ ಖಮೇನಿ ಪರವಾಗಿ ಮುಸ್ಲಿಮರು ಪ್ರತಿಭಟನೆ ಮಾಡಿದ್ದಾರೆ.

ವಿವಿಧ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಮರಳಿ ಕರೆತರಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕಾರ್ಯೋನ್ಮುಖವಾಗಿದೆ. ಕೇಂದ್ರ ಸರ್ಕಾರ ಈ ಹಿಂದೆಯೂ ಈ ರೀತಿ ಭಾರತೀಯರನ್ನು ಮರಳಿ ಕರೆತಂದಿದೆ. ಈ ಬಾರಿಯೂ ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲಾಗುತ್ತದೆ ಎಂದರು.

ಸರ್ವಾಧಿಕಾರಿ ಖಮೇನಿ ಪರ ಮೆರವಣಿಗೆ ಮಾಡಬಾರದು. ಕಾನೂನು ಕೈಗೆ ತೆಗೆದುಕೊಂಡು ಪ್ರತಿಭಟನೆ ನಡೆಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಿದೆ. ಭಾರತ ಹಾಗೂ ಇಸ್ರೇಲ್‌ ನಡುವಿನ ಸಂಬಂಧ ಉತ್ತಮವಾಗಿದೆ.

ಭಾರತ ಯಾವುದೇ ದೇಶಗಳ ವಿರೋಧಿ ಅಲ್ಲ. ಯುದ್ಧ ಆಗಬಾರದು ಎಂಬುದೇ ನನ್ನ ಅಭಿಪ್ರಾಯ. ಕೇಂದ್ರ ಸರ್ಕಾರ ಎಂದೂ ಯುದ್ಧಕ್ಕೆ ಬೆಂಬಲ ಕೊಟ್ಟಿಲ್ಲ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಕೇಂದ್ರದ ಸಚಿವರನ್ನು ಭೇಟಿ ಮಾಡಿ, ಕನ್ನಡಿಗರ ರಕ್ಷಣೆಗಾಗಿ ಕೆಲಸ ಮಾಡಬೇಕಿದೆ ಎಂದರು.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!