ದೊಡ್ಡಬಳ್ಳಾಪುರ: ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ಸ್ಥಳದಲ್ಲಿಯೇ ಸಾವನಪ್ಪಿ, ಮತ್ತೊರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಕನಕೇನಹಳ್ಳಿ- ಅಡಕ್ವಾಳ ನಡುವಿನ ಬೋವಿಪಾಳ್ಯ ಬಳಿ ಸಂಭವಿಸಿದೆ.
ಮೃತರನ್ನು ಭಕ್ತರಹಳ್ಳಿ ಸಮೀಪದ ತಂಬೇನಹಳ್ಳಿ ಮೂಲದ ಸುಮಾರು 30 ವರ್ಷದ ವ್ಯಕ್ತಿಗಳು ಎನ್ನಲಾಗುತ್ತಿದ್ದು, ಗುರುತು ಪತ್ತೆಯಾಗಿಲ್ಲ.
ದೊಡ್ಡಬೆಳವಂಗಲ ಕಡೆಯಿಂದ ಕನಕನೇಹಳ್ಳಿ ಮಾರ್ಗವಾಗಿ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದ್ದು, ಗಾಯಗೊಂಡವನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.