ಎರಡು ಹಂತದಲ್ಲಿ ನಡೆಯಲಿದೆ ಜನಗಣತಿ: ಜಿಲ್ಲಾಧಿಕಾರಿ ಡಾ.ಕೆ.ಎನ್ ಅನುರಾಧ

Swachhta Hee Seva Special Campaign from Sep. 17 to Oct. 02: Dr. K.N. Anuradha

ಬೆಂ.ಗ್ರಾ ಜಿಲ್ಲೆ: ಜನಗಣತಿ-2027 ಭಾರತದ 16ನೇ ಜನಗಣತಿ ಮತ್ತು ಸ್ವಾತಂತ್ರ್ಯದ ನಂತರದ 8ನೇ ಜನಗಣತಿ ಇದಾಗಿದೆ. ಈ ಬಾರಿಯ ಜನಗಣತಿಯು ಎರಡು ಹಂತದಲ್ಲಿ ನಡೆಯಲಿದ್ದು ಏಪ್ರಿಲ್ 1, 2026 ರಿಂದ ಸೆಪ್ಟೆಂಬರ್ 30, 2026 ರವರೆಗೆ ನಡೆಯಲಿರುವ ಮೊದಲ ಹಂತದ ಮನೆಗಳ ಪಟ್ಟಿ ಮತ್ತು ವಸತಿ ಗಣತಿಯನ್ನು ಒಳಗೊಂಡಿದೆ. ಎರಡನೇ ಹಂತದ ಜನಸಂಖ್ಯಾ ಗಣತಿಯು ಫೆಬ್ರವರಿ 9, 2027ರಿಂದ ಫೆಬ್ರವರಿ 28, 2027ರವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಡಾ.ಕೆ.ಎನ್ ಅನುರಾಧ (Dr.K.N. Anuradha) ಹೇಳಿದ್ದಾರೆ.

ಈ ಹಿಂದೆ 2011ರಲ್ಲಿ ಕೊನೆಯ ಬಾರಿಗೆ ಜನಗಣತಿ ನಡೆದಿತ್ತು. ಬಳಿಕ 2021ರಲ್ಲಿ ಜನಗಣತಿ ನಡೆಯಬೇಕಾಗಿತ್ತು. ಆದರೆ, ಕೋವಿಡ್ ಕಾರಣಕ್ಕೆ 10 ವರ್ಷಗಳಿಗೆ ಒಮ್ಮೆ ನಡೆಯಬೇಕಾದ ಜನಗಣತಿ ನಡೆದಿರಲಿಲ್ಲ. ಇದೀಗ 2026-27ನೇ ಸಾಲಿನಲ್ಲಿ ಜನಗಣತಿ ನಡೆಯುತ್ತಿದೆ.

ಮೊದಲ ಹಂತದಲ್ಲಿ ಏಪ್ರಿಲ್ 01 ರಿಂದ 15 ವರೆಗೆ ಸಾರ್ವಜನಿಕರು ಜನಗಣತಿ ಆ್ಯಪ್ ಅಥವಾ ಪೋರ್ಟಲ್ ಮೂಲಕ ಸ್ವಯಂ ಮಾಹಿತಿ ದಾಖಲಿಸಿಕೊಳ್ಳಬಹುದು. ನಂತರ ಏಪ್ರಿಲ್ 16 ರಿಂದ ಮೇ 16 ರವರೆಗೆ ಗಣತಿದೋರರು ಮನೆಪಟ್ಟಿ, ಮನೆ ಗಣತಿ ಕ್ಷೇತ್ರ ಕಾರ್ಯ ಮಾಡಲಿದ್ದಾರೆ. ಗಣತಿದಾರರ ಸ್ಮಾರ್ಟ್ ಫೋನ್ ಮೀಸಲಾದ ಮೊಬೈಲ್ ಆ್ಯಪ್ ಮೂಲಕ ಆನ್‌ಲೈನ್‌ನಲ್ಲಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಆಫ್‌ಲೈನ್‌ನಲ್ಲಿಯೂ ಈ ಆ್ಯಪ್ ಕೆಲಸ ಮಾಡಲಿದ್ದು, ನೆಟ್‌ವರ್ಕ್ ವ್ಯಾಪ್ತಿಗೆ ಬಂದಾಗ ಸಂಗ್ರಹಿಸಿದ ಮಾಹಿತಿಗಳು ಸರ್ವ‌್ರಗೆ ಸಂಯೋಜನೆ ಆಗಲಿವೆ. ಗಣತಿ ಪ್ರಕ್ರಿಯೆಯನ್ನು ಆರಂಭದಿಂದ ಮುಕ್ತಾಯದವರೆಗೆ ನಿರ್ವಹಿಸಲು ‘ಜನಗಣತಿ ನಿರ್ವಹಣೆ ಮತ್ತು ಮಾನಿಟರಿಂಗ್ ಸಿಸ್ಟಂ’ (ಸಿಎಂಎಂಎಸ್) ಎಂಬ ವಿಶೇಷ ವೆಬ್ ಪೋರ್ಟಲ್ ಅಭಿವೃದ್ಧಿಪಡಿಸಲಾಗಿದೆ.

ಜನಗಣತಿ ಸಲುವಾಗಿ ಬ್ಲಾಕ್ ರಚಿಸಲಾಗಿದ್ದು,150 ರಿಂದ 200 ಮನೆಗಳು ಅಥವಾ 700 ರಿಂದ 800 ಜನಸಂಖ್ಯೆಗೆ ಓರ್ವ ಗಣತಿದಾರರನ್ನು ಮತ್ತು ಪ್ರತಿ ಆರು ಜನ ಗಣತಿದಾರರಿಗೆ ಓರ್ವ ಮೇಲ್ವಿಚಾರಕರನ್ನು ನೇಮಿಸಲಾಗಿದೆ.

ಜಿಲ್ಲೆಯ ಜಿಲ್ಲಾಧಿಕಾರಿಗಳು ಪ್ರಧಾನ ಜನಗಣತಿ ಅಧಿಕಾರಿಗಳಾಗಿದ್ದು, ಜಿಲ್ಲಾ ಜನಗಣತಿ ಅಧಿಕಾರಿಗಳಾಗಿ ಅಪರ ಜಿಲ್ಲಾಧಿಕಾರಿಗಳು, ಹೆಚ್ಚುವರಿ ಜಿಲ್ಲಾ ಜನಗಣತಿ ಅಧಿಕಾರಿಗಳಾಗಿ ಜಿಪಂ ಮುಖ್ಯ ಯೋಜನಾಧಿಕಾರಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು,ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು ಕಾರ್ಯ ನಿರ್ವಹಿಸಲಿದ್ದಾರೆ. ಉಪ ವಿಭಾಗಾಧಿಕಾರಿಗಳು ಉಪ ವಿಭಾಗ ಹಂತದ ಚಾರ್ಜ್ ಅಧಿಕಾರಿಗಳಾಗಿ, ಗ್ರಾಮೀಣ ಪ್ರದೇಶದ ಚಾರ್ಜ್ ಅಧಿಕಾರಿಗಳಾಗಿ ತಹಶೀಲ್ದಾರರು,ನಗರ ಪ್ರದೇಶಕ್ಕೆ ಆಯಾ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಚಾರ್ಜ್ ಅಧಿಕಾರಿಗಳಾಗಿರುತ್ತಾರೆ.

ಮೊದಲ ಹಂತದಲ್ಲಿ ಮನೆ ಗಣತಿ

‘ಮೊದಲ ಹಂತದಲ್ಲಿ ಮನೆ ಗಣತಿ ಮಾತ್ರ ನಡೆಯಲಿದ್ದು, ಕ್ಷೇತ್ರ ಮಟ್ಟದ ಗಣತಿದಾರರು ಎಚ್‌ಎಲ್‌ಬಿ (ಹೌಸ್ ಲಿಸ್ಟಿಂಗ್ ಬ್ಲಾಕ್) ಕ್ರಿಯೇಟರ್ ಆ್ಯಪ್ ಬಳಸಿ ಪ್ರತಿ ಬ್ಲಾಕ್‌ನ ಮನೆಗಳ ಲೊಕೇಶನ್ ಮತ್ತು ವ್ಯಾಪ್ತಿಯನ್ನು ಜಿಯೋ ಟ್ಯಾಗಿಂಗ್‌ ಮೂಲಕ ಗುರುತಿಸಲಿದ್ದಾರೆ. ಮೊದಲ ಹಂತದಲ್ಲಿ 33 ಪ್ರಶ್ನೆ ಒಳಗೊಂಡಿದ್ದು ಮನೆಗಳ ಸಂಖ್ಯೆ, ಗೋಡೆ, ಛಾವಣಿ ನಿರ್ಮಾಣಕ್ಕೆ ಬಳಸಿದ ವಸ್ತುಗಳು, ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಮತ್ತು ಮನೆಯಲ್ಲಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ.

ಎರಡನೇ ಹಂತ ಜನಸಂಖ್ಯಾ ಗಣತಿ

ಎರಡನೇ ಹಂತದಲ್ಲಿ ಪ್ರತಿ ವ್ಯಕ್ತಿಯ ವಯಸ್ಸು, ಲಿಂಗ, ಶಿಕ್ಷಣ, ಉದ್ಯೋಗ, ಧರ್ಮ ಮತ್ತು ಭಾಷೆಯಂತಹ ವೈಯಕ್ತಿಕ ವಿವರಗಳನ್ನು ಸಂಗ್ರಹಿಸಲಾಗುತ್ತದೆ.

ಜನಗಣತಿ-2027 ಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದ್ದು, ಇಂದಿನಿಂದ ಮೂರು ದಿನಗಳ ಕಾಲ ಚಾರ್ಜ್ ಆಫೀಸರ್ ಗಳಿಗೆ ತರಬೇತಿ ನೀಡಲಾಗುವುದು. ಗಣತಿದಾರರಿಗೂ ತರಬೇತಿ ನೀಡಲಾಗುತ್ತಿದೆ. ಸಾರ್ವಜನಿಕರು ಜನಗಣತಿಗೆ ನಿಖರವಾದ ಮಾಹಿತಿ ನೀಡಿ ಸಹಕರಿಸಬೇಕು: ಜಿಲ್ಲಾಧಿಕಾರಿ ಡಾ.ಕೆ.ಎನ್ ಅನುರಾಧ

ರಾಜಕೀಯ

ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ನಲ್ಲಿ (Congress) ಸೋನಿಯಾ ಗಾಂಧಿ (Soniya Gandhi), ರಾಹುಲ್ ಗಾಂಧಿ, ಪ್ರಿಯಾಕಾಂ ಗಾಂಧಿ (Rahul Gandhi) ಮನಸ್ಸು ಯಾರು ಗೆಲ್ಲುತ್ತಾರೆ ಅವರು ಸಿಎಂ ಆಗುತ್ತಾರೆ. ಇದು ಪ್ರಜಾಪಭುತ್ವದ ವ್ಯವಸ್ಥೆಗೆ ನಾಚಿಗೇಡಿನ ಸಂಗತಿ ಎಂದು

[ccc_my_favorite_select_button post_id="121658"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]