ದೊಡ್ಡಬಳ್ಳಾಪುರ; ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಸಮೀಪದ ಬ್ಯಾಂಕ್ ಸರ್ಕಲ್ ಬಳಿಯ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್ 2 ಕಾರ್ಖಾನೆಯಲ್ಲಿ ಅಗ್ನಿ ಅವಘಡ (Fire accident) ಸಂಭವಿಸಿದೆ.
ಬೆಂಕಿಯಿಂದಾಗಿ ಈ ವ್ಯಾಪ್ತಿಯಲ್ಲಿ ದಟ್ಟವಾದ ಹೊಗೆ ಆವರಿಸಿದ್ದು, ಆತಂಕ ಸೃಷ್ಟಿಸಿದೆ.
ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಲು ಶ್ರಮಿಸುತ್ತಿದ್ದಾರೆ.
ಮೂಲಗಳ ಮಾಹಿತಿ ಅನ್ವಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಗ್ನಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ.