ಕೆ.ಎಂ. ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ): ವಾಣಿಜ್ಯ ಸಿಲಿಂಡರ್‌ಗಳ (LPG Shortage) ಪೂರೈಕೆ ಸ್ಥಗಿತಗೊಂಡಿರುವುದರಿಂದ ನಗರದಲ್ಲಿ ಹೋಟೆಲ್‌ಗಳು, ಟೀ ಅಂಗಡಿಗಳು ಬಾಗಿಲು ಮುಚ್ಚುತ್ತಿವೆ.
ದೊಡ್ಡಬಳ್ಳಾಪುರದಲ್ಲಿ ಕಾರ್ಯನಿರ್ವಹಿಸುತ್ತಿರುವ ದೊಡ್ಡ ಮತ್ತು ಸಣ್ಣ ಹೋಟೆಲ್‌ಗಳು, ಟೀ ಕಾಫಿ ಅಂಗಡಿಗಳು ಸೇರಿ ಪ್ರತಿ ನಿತ್ಯ ಅಂದಾಜು 400 ಕ್ಕೂ ಹೆಚ್ಚು ಸಿಲಿಂಡರ್ ಬಳಸುತ್ತವೆ.
ಆದರೆ ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ದ ತೀವ್ರಗೊಂಡ ಕಾರಣ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಾವುದೇ ಮುನ್ಸೂಚನೆ ನೀಡದೆ ಸಿಲಿಂಡರ್ ಪೂರೈಕೆ ಸ್ಥಗಿತಗೊಳಿಸಿರುವುದು ಸಿಲಿಂಡರ್ ಹೊಂದಿಸುವುದು ಸವಾಲಾಗಿ ಪರಿಣಮಿಸಿದೆ.
ಈಗಾಗಲೇ ಕೆಲವು ಹೋಟೆಲ್‌ಗಳು ಸಿಲಿಂಡರ್ ಹೊಂದಿಸಲಾಗದೆ ಬಾಗಿಲು ಮುಚ್ಚುತ್ತಿದ್ದು, ಬುಧವಾರ ನಗರದ ಹಲವಾರು ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಈಗಾಗಲೇ ಹೊಂದಿರುವ ವಾಣಿಜ್ಯ ಅನಿಲ ಸಿಲಿಂಡರ್ ಗಳೊಂದಿಗೆ ಕಾರ್ಯನಿರ್ವಹಿಸುತ್ತಿದ್ದು, ಎಲ್‌ಪಿಜಿ ಸಿಲಿಂಡರ್‌ಗಳ ಸರಬರಾಜಿನ ಕೊರತೆಯು ಮತ್ತಷ್ಟು ಒತ್ತಡವನ್ನುಂಟು ಮಾಡಿದೆ. ಅಲ್ಲದೆ ಸಿಲಿಂಡರ್‌ಗಳ ಸ್ಟಾಕ್ ಖಾಲಿಯಾದರೆ ಆ ಬಳಿಕ ಹೋಟೆಲ್‌ಗಳನ್ನು ಮುಚ್ಚಬೇಕಾದ ಅನಿವಾರ್ಯತೆ ಎದುರಾಗಲಿದೆ ಎಂದು ಮಾಲೀಕರು ಅಳಲು ತೋಡಿಕೊಂಡಿದ್ದಾರೆ.
ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ದ ತೀವ್ರಗೊಂಡ ಹಿನ್ನೆಲೆ ಪೆಟ್ರೋಲ್ ಸೇರಿದಂತೆ ಅನಿಲ ಸರಬರಾಜಿನ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ದೇಶದ ಪ್ರಮುಖ ನಗರಗಳಲ್ಲಿ ಹೋಟೆಲ್, ರೆಸ್ಟೋರೆಂಟ್‌ಗಳು ಒತ್ತಡದಲ್ಲಿ ಕಾರ್ಯನಿರ್ವಹಿಸುವಂತಾಗಿದೆ.
ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯುದ್ಧದ ಪರಿಣಾಮ ಬೀರುವುದಿಲ್ಲ ಸುಮಾರು 70 ದಿನಹಳ ಲಭ್ಯತೆ ಇದೆ ಎಂದು ಹೇಳಿಕೆ ನೀಡಿತಾದರೂ, ಏಕಾಏಕಿ ಪೂರೈಕೆ ಸ್ಥಗಿತಗೊಳಿಸಿರುವುದು ಮುಂಜಾಗ್ರತೆ ಕ್ರಮಕೈಗೊಂಡಿಲ್ಲ ಎಂಬ ಆಕ್ರೋಶಕ್ಕೆ ಕಾರಣವಾಗಿದೆ.