ದೊಡ್ಡಬಳ್ಳಾಪುರ: ಹಿಂದಿ ಕಡ್ಡಾಯ ವಿರೋಧಿಸಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ

Pro-Kannada organizations protest against mandatory Hindi

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯಲ್ಲಿ 100 ಅಂಕಗಳ ಹಿಂದಿ (Hindi) ಭಾಷಾ ಪರೀಕ್ಷೆಯನ್ನು ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ, ವಿವಿಧ ಕನ್ನಡಪರ ಸಂಘಟನೆಗಳಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವ ನಾಯಕ್, ಕರವೇ ರಾಜ್ಯ ಕಾರ್ಯದರ್ಶಿ ರಾಜಘಟ್ಟ ರವಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 100 ಅಂಕಗಳ ಹಿಂದಿ ಭಾಷಾ ಪರೀಕ್ಷೆಯನ್ನು ಕಡ್ಡಾಯಗೊಳಿಸಿರುವುದು ಖಂಡನೀಯ. ರಾಜ್ಯ ಶಿಕ್ಷಣ ಪರೀಕ್ಷಾ ಪದ್ಧತಿಯೊಳಗೆ ಹಿಂದಿ ಭಾಷೆಯ ಕಲಿಕೆಯನ್ನು ಬಲವಂತವಾಗಿ ಹೇರುತ್ತಾ ಬರಲಾಗುತ್ತಿದ್ದು, ಇದೀಗ ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿ-ಯುವಜನರ ಶೈಕ್ಷಣಿಕ ಮುನ್ನಡೆಗೆ ತೊಡಕಾಗುವ ಹಂತ ತಲುಪಿದೆ.

2025ನೇ ಸಾಲಿನ ಶೈಕ್ಷಣಿಕ ವರ್ಷದ ಪರೀಕ್ಷೆಯಲ್ಲಿ 1.42 ಲಕ್ಷ ವಿದ್ಯಾರ್ಥಿಗಳನ್ನು ಹಿಂದಿ ಭಾಷಾ ಪರೀಕ್ಷೆಯಲ್ಲಿ ಅನುತ್ತೀರ್ಣಗೊಳಿಸುವ ಮೂಲಕ ರಾಜ್ಯ ಸರಕಾರ, ಕನ್ನಡಿಗರ ಮೇಲೆ ಹಿಂದಿ ಭಾಷೆ ಹೇರುವ ಕೇಂದ್ರದ ಒಕ್ಕೂಟ ಸರಕಾರದ ಭಾಷಾ ದೌರ್ಜನ್ಯ ನೀತಿಗೆ ಕೈಜೋಡಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಯಾವುದೇ ಹಂತದ ಶಿಕ್ಷಣ ಪಠ್ಯಕ್ರಮದಲ್ಲೂ ಕೂಡ ಹಿಂದಿ ಭಾಷೆಯು ರಾಷ್ಟ್ರ ಭಾಷೆ’ ಎಂದು ಬಿಂಬಿಸುವ ಕಲ್ಪಿತ ವಿಷಯವನ್ನು ತೆಗೆದು ಹಾಕಬೇಕು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿಯಿಲ್ಲದೇ ಪರೀಕ್ಷೆ ಉತ್ತೀರ್ಣ ಎಂಬ ನಿಯಮವನ್ನು ಪ್ರಕಟಿಸಬೇಕು ಎಂದು ಆಗ್ರಹಿಸಿದರು.

ಕರ್ನಾಟಕದಲ್ಲಿ ತ್ರಿಭಾಷಾ ಸೂತ್ರದ ಅಗತ್ಯವಿಲ್ಲ, ರಾಜ್ಯ ಸರ್ಕಾರ ಕೇಂದ್ರದ ತಾಳಕ್ಕೆ ಕುಣಿದರೆ ಇದೇ ಏಪ್ರಿಲ್ 30 ರಂದು ನಡೆಯುವ ಹಿಂದಿ ಪರೀಕ್ಷಾ ಕೇಂದ್ರಗಳಿಗೆ ನುಗ್ಗಿ ಅಡ್ಡಿಪಡಿಸಬೇಕಾಗುತ್ತದೆ ಎಂದು ಕನ್ನಡಪರ ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದರು.

ಒತ್ತಾಯಗಳು

ಕರ್ನಾಟಕದ ರಾಜ್ಯ ಶಿಕ್ಷಣ ಪರೀಕ್ಷಾ ಪದ್ದತಿಯೊಳಗೆ ಹಿಂದಿ ಭಾಷಾ ಕಲಿಕೆಯನ್ನು ಹಂತಹಂತವಾಗಿ, ಬಲವಂತವಾಗಿ ಹೇರುತ್ತಾ ಬರಲಾಗುತ್ತಿದ್ದು ಅದೀಗ ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿ-ಯುವಜನರ ಶೈಕ್ಷಣಿಕ ಮುನ್ನಡೆಗೆ ತೊಡಕಾಗುವ ಹಂತ ತಲುಪಿದೆ.

ಎರಡು ನುಡಿ ಕಲಿಕಾ ಪದ್ದತಿಯನ್ನು ಜಾರಿಗೊಳಿಸಬೇಕು. ಥೋರಟ್ ಆಯೋಗದ ವರದಿಯನ್ನು ಶಾಸನಸಭೆಯಲ್ಲಿ ಹಾಗೂ ಸಾರ್ವಜನಿಕ ಚರ್ಚೆಗೆ ಒದಗಿಸಬೇಕು. ದ್ವಿಭಾಷಾ ನೀತಿ ಜಾರಿಯಾಗುವವರೆಗೆ ಇನ್ನು ಮುಂದೆ ವಿದ್ಯಾರ್ಥಿಗಳಿಗೆ ಹಿಂದಿ ಪರೀಕ್ಷೆಯನ್ನು ಕಡ್ಡಾಯಗೊಳಿಸದಂತೆ ಕರ್ನಾಟಕ ಸರ್ಕಾರವು ಆದೇಶ ಹೊರಡಿಸಬೇಕು.

ಈ ಹಿಂದಿನ ಸಾಲಿನ ಪರೀಕ್ಷೆಗಳಲ್ಲಿ ಹಿಂದಿ ಭಾಷೆಯಲ್ಲಿ ನಪಾಸಾದ ಎಲ್ಲ ವಿದ್ಯಾರ್ಥಿಗಳನ್ನೂ ಉತ್ತೀರ್ಣರೆಂದು ಘೋಷಿಸಿ ಅವರ ಶೈಕ್ಷಣಿಕ ಮುನ್ನಡೆಗೆ ಅವಕಾಶ ನೀಡಬೇಕು.

ಹಿಂದಿ ಭಾಷಾ ಶಿಕ್ಷಕರ ನೇಮಕಾತಿಯನ್ನು ರದ್ದುಪಡಿಸಬೇಕು ಮತ್ತು ಈಗಾಗಲೆ ನೇಮಕಗೊಂಡಿರುವ ಶಿಕ್ಷಕರನ್ನು ಕನ್ನಡ ಭಾಷಾ ಶಿಕ್ಷಕರಾಗಿ ನಿಯೋಜಿಸಲು ಕ್ರಮವಹಿಸಿ ಅದಕ್ಕೆ ಸೂಕ್ತ ಶೈಕ್ಷಣಿಕ ಅರ್ಹತೆ ಪಡೆಯಲು ನಿಯಮಗಳನ್ನು ರೂಪಿಸಬೇಕು. ಕರ್ನಾಟಕ ರಾಜ್ಯದ ಯಾವುದೇ ಹಂತದ ಶಿಕ್ಷಣ ಪಠ್ಯಕ್ರಮದೊಳಗೆ’ ಹಿಂದಿ ಭಾಷೆಯು ರಾಷ್ಟ್ರ ಭಾಷೆ’ ಎಂದು ಬಿಂಬಿಸುವ ಕಲ್ಪಿತ ವಿಷಯವನ್ನು ತೆಗೆದು ಹಾಕಬೇಕು.

ಹಿಂದಿಯಿಲ್ಲದೇ ಪರೀಕ್ಷೆ ಉತ್ತೀರ್ಣ ನಿಯಮವನ್ನು ಕರ್ನಾಟಕ ಸರ್ಕಾರವು ಈ ತಕ್ಷಣ ಪ್ರಕಟಿಸಬೇಕು. ಇಲ್ಲದಿದ್ದಲ್ಲಿ ಮಾ.30ರಂದು ಎಲ್ಲ ಕನ್ನಡಪರ-ಜನಪರ ಸಂಘಟನೆಗಳು ಸೇರಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಎಸ್‌ಎಸ್‌ಎಲ‌್‌ಸಿ ಪರೀಕ್ಷಾ ಮಂಡಳಿ’ ಮುತ್ತಿಗೆ ಹಾಕಲಾಗುವುದು ಎಂದರು.

ಪ್ರತಿಭಟನೆಯಲ್ಲಿ ನಗರಸಭಾ ಮಾಜಿ ಸದಸ್ಯ ಜಿ.ಸತ್ಯನಾರಾಯಣ, ಕನ್ನಡ ಜಾಗೃತ ಪರಿಷತ್ತಿನ ಕಾರ್ಯದರ್ಶಿ ಡಿ.ಪಿ.ಆಂಜನೇಯ, ಜಿಲ್ಲಾಧ್ಯಕ್ಷ ಮುನಿಪಾಪಯ್ಯ, ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ಪರಮೇಶ್, ವೆಂಕಟಪ್ಪ, ಕನ್ನಡ ಜಾಗೃತ ಪರಿಷತ್ ಕಾರ್ಯದರ್ಶಿ ಡಿ.ಪಿ.ಅಂಜನೇಯ, ತಾಲ್ಲೂಕು ಅಧ್ಯಕ್ಷ ಹಮಾಮ್ ಎಸ್.ವೆಂಕಟೇಶ್, ಶಿವಕುಮಾರ್, ರಾಜ್ಯ ರೈತ ಸಂಘದ ಮುಖಂಡರಾದ ಪ್ರಸನ್ನ, ಮುತ್ತೇಗೌಡ, ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ನವೀನ್, ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘದ ರಮೇಶ್ ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ರಾಜಕೀಯ

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥ ಮಾಡಿಕೊಳ್ಳಬೇಕಿತ್ತು. ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ. ಆದಾಯ ಪಾತಳಕ್ಕೆ ಕುಸಿದಿದೆ. ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಕೇಂದ್ರ

[ccc_my_favorite_select_button post_id="121597"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]