ನವದೆಹಲಿ: 6 ತಿಂಗಳ ನಂತರ ಸೋನಮ್ ವಾಂಗ್ಚುಕ್ (Sonam Wangchuk) ಜೈಲಿನಿಂದ ಬಿಡುಗಡೆಯಾಗಲಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಂಧನ ರದ್ದುಗೊಳಿಸಿದೆ.
ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ತಕ್ಷಣದಿಂದ ಜಾರಿಗೆ ಬರುವಂತೆ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ.
#BREAKING: #Union revokes the detention of Ladakh activist Sonam Wangchuk under the National Security Act pic.twitter.com/3PPIUamTWN
— Live Law (@LiveLawIndia) March 14, 2026
ಸೆಪ್ಟೆಂಬರ್ 2025 ರಲ್ಲಿ ಲಡಾಖ್ನಲ್ಲಿ ರಾಜ್ಯ ಸ್ಥಾನಮಾನಕ್ಕಾಗಿ ನಡೆದ ಪ್ರತಿಭಟನೆಗಳು ಹಿಂಸಾತ್ಮಕವಾಗಿ ತಿರುಗಿದ ನಂತರ ವಾಂಗ್ಚುಕ್ ಅವರನ್ನು ಸುಮಾರು ಆರು ತಿಂಗಳ ಕಾಲ ಬಂಧಿಸಿ ಜೋಧ್ಪುರ ಜೈಲಿನಲ್ಲಿ ಇರಿಸಲಾಯಿತು.
ಸೋನಮ್ ವಾಂಗ್ಚುಕ್ ಅವರಿಗೆ ಬಿಜೆಪಿ ಸೇರಿ ದೊಡ್ಡ ಹುದ್ದೆ ಪಡೆಯುವ ಅವಕಾಶ ಸಿಕ್ಕಿತ್ತು, ಬದಲಾಗಿ ಅವರು ತಮ್ಮ ಜನರಿಗಾಗಿ ಹೋರಾಡಿ ಜೈಲು ಶಿಕ್ಷೆ ಅನುಭವಿಸಿದರು ಎಂಬ ಅಭಿಪ್ರಾಯ ಸ್ಥಳೀಯರದ್ದಾಗಿದೆ.
ಸೋನಮ್ ವಾಂಗ್ಚುಕ್ ಬಂಧನವನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಆಂಗ್ಮೋ ಸಲ್ಲಿಸಿರುವ ಅರ್ಜಿಯನ್ನು ಕಳೆದ ಅಕ್ಟೋಬರ್ನಿಂದ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಮಾರ್ಚ್ 17 ರಂದು ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸಲು ನಿರ್ಧರಿಸಿದೆ.