ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Modi) ಅವರು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಪುರಿ (Hardeep Puri) ಅವರನ್ನು ತಕ್ಷಣವೇ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕೆಂದು ಬಿಜೆಪಿಯ ಹಿರಿಯ ನಾಯಕ ಡಾ.ಸುಬ್ರಮಣಿಯನ್ ಸ್ವಾಮಿ (Dr.Subramanian Swamy) ಆಗ್ರಹಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸಚಿವ ಹರ್ದೀಪ್ ಪುರಿ ಅವರನ್ನು ತಕ್ಷಣವೇ ವಜಾಗೊಳಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು, ಇಲ್ಲದಿದ್ದರೆ ಹರ್ದೀಪ್ ಪುರಿ ಅವರನ್ನು ವಿಚಾರಣೆಗೆ ಒಳಪಡಿಸಲು ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
Modi, as PM must sack Hardeep Puri forthwith and order a criminal case against him. Otherwise a PIL in SC will be filed to prosecute Hardeep Puri. We in BJP otherwise will suffer huge political damage.
— Subramanian Swamy (@Swamy39) March 14, 2026
ಕೇಂದ್ರ ಸಚಿವ ಹರ್ದೀಪ್ ಪುರಿ ಅವರಿಂದ ಬಿಜೆಪಿಯಲ್ಲಿರುವ ನಮಗೆ ದೊಡ್ಡ ರಾಜಕೀಯ ಹಾನಿಯಾಗುತ್ತದೆ ಎಂದು ಹೇಳಿದ್ದಾರೆ.
ಅಮೆರಿಕದಲ್ಲಿ ಬಿಡುಗಡೆಯಾದ ಎಪ್ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳಲ್ಲಿ ಕೇಂದ್ರ ಸಚಿವರ ಹೆಸರು ಇದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಎತ್ತಿರುವ ಆರೋಪದ ಬೆನ್ನಲ್ಲೇ, ಸುಬ್ರಮಣಿಯನ್ ಸ್ವಾಮಿ ಅವರು ಆಗ್ರಹ ಮಾಡಿರುವುದು ವ್ಯಾಪಕ ಚರ್ಚೆಗೆ ಕಾರಣವಾಗಿದೆ.