ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

There is no shortage of LPG cylinders in the state: Minister K.H. Muniyappa

ಬೆಂಗಳೂರು: ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಚಿವರಾದ ಕೆ.ಹೆಚ್. ಮುನಿಯಪ್ಪ (K.H. Muniyappa) ತಿಳಿಸಿದರು.

ವಸಂತನಗರದಲ್ಲಿರುವ ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಕಚೇರಿಯಲ್ಲಿ IOC, HPC, BPC ಮತ್ತು GAIL ಅಧಿಕಾರಿಗಳೊಂದಿಗೆ ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಸರಬರಾಜಿನ ಸ್ಥಿತಿಗತಿ ಕುರಿತು ಮಹತ್ವದ ಸಭೆ ನಡೆಸಿದ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಒಂದು ದಿನಕ್ಕೆ 850 ಮೆಟ್ರಿಕ್ ಟನ್ ಗ್ಯಾಸ್ ಪೂರೈಕೆ ಆಗುತ್ತಿದ್ದು ಬಳಕೆಯ ಪ್ರಮಾಣ ಅಧಿಕವಾಗಿದೆ ಈ ಸಂದರ್ಭದಲ್ಲಿ ಮಿತವ್ಯಯವಾಗಿ ಬಳಸಲು ಗ್ರಾಹಕ ರಲ್ಲಿ ಮನವಿ ಮಾಡಿದರು.

ರಾಜ್ಯದಲ್ಲಿ ಎಲ್‌ಪಿಜಿ ವಿತರಣೆ ಪ್ರತಿ ರಾಜ್ಯದ ಬಳಕೆ (consumption) ಆಧಾರದ ಮೇಲೆ ಕೇಂದ್ರದಿಂದ ನಿರ್ಧರಿಸಲಾಗುತ್ತದೆ.
ಸಿಲಿಂಡರ್ ಸರಬರಾಜು ಆಗುತ್ತಿದೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಮತ್ತು ಸಂಬಂಧಿಸಿದ ಸಂಸ್ಥೆಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯವಿದ್ದಲ್ಲಿ ರಾಜ್ಯದ ಅಗತ್ಯವನ್ನು ತಿಳಿಸಿ ಪತ್ರಗಳ ಮೂಲಕ ಗಮನಕ್ಕೆ ತರುತ್ತಿದ್ದಾರೆ ಎಂದರು.

ಅತ್ಯಾವಶ್ಯಕ ಸೇವೆಗಳಾದ ಆಸ್ಪತ್ರೆಗಳು ಸೇರಿದಂತೆ ಹೋಟೆಲ್ ಹಾಗೂ ವ್ಯಾಪಾರಿಕ ಬಳಕೆದಾರರಿಗೆ ಯಾವುದೇ ರೀತಿಯ ಸರಬರಾಜು ಸಮಸ್ಯೆ ಇಲ್ಲ ಅವರಿಗೆ ಅಗತ್ಯವಿರುವಷ್ಟು ಸಿಲಿಂಡರ್ ಒದಗಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಸಾಮಾನ್ಯವಾಗಿ ನಗರ ಪ್ರದೇಶಗಳಲ್ಲಿ 25–30 ದಿನಗಳಿಗೆ ಒಂದು ಸಿಲಿಂಡರ್ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಸುಮಾರು 45 ದಿನಗಳಿಗೆ ಒಂದು ಸಿಲಿಂಡರ್ ಬಳಕೆಯಾಗುತ್ತದೆ. ಇದಕ್ಕೆ ಅನುಗುಣವಾಗಿ ಸರಬರಾಜು ನಡೆಯುತ್ತಿದೆ ಎಂದರು.

ಜನರು ಪ್ಯಾನಿಕ್ ಆಗಬಾರದು, ಅಗತ್ಯಕ್ಕಿಂತ ಹೆಚ್ಚು ಸಿಲಿಂಡರ್ ಬುಕ್ ಮಾಡಬಾರದು ಹಾಗೂ ಸ್ಟಾಕ್ ಇಟ್ಟುಕೊಳ್ಳಬಾರದು. ಯಾವುದೇ ತಾಂತ್ರಿಕ ಸಮಸ್ಯೆ ಕಂಡುಬಂದರೆ ತಕ್ಷಣ ಸಂಬಂಧಿತ ಕಂಪನಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುತ್ತದೆ. ಜನರಿಗೆ ಯಾವುದೇ ತೊಂದರೆ ಆಗದಂತೆ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದರು.

ಸಭೆಯಲ್ಲಿ ಸರ್ಕಾರದ ಕಾರ್ಯದರ್ಶಿ ಕನಗವಲ್ಲಿ, ಆಯುಕ್ತರಾದ ರವಿಕುಮಾರ್, ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್, ಅನಿಲ ಕಂಪನಿಗಳ ಅಧಿಕಾರಿಗಳಾದ ನೀರಾ ಸಿಂಗ್,ಅರುಂದಿ ಗೊಯಲ್, ದಿವ್ಯ, ಮುರಳಿ ಚಾರ್,ಸುಬ್ರತ್ ಚಟರ್ಜಿ, ರಾಜೇಶ್ ಸಿಂಗ್,ಸಂಜಯ್ ಕುಮಾರ್ ಸಿಂಗ್, ಪ್ರಣಯ ದೇವನಾಗನ್, ರವಿಕುಮಾರ್ ತಂಡಲ್, ಪ್ರಸೂನ್ ಉಪಸ್ಥಿತರಿದ್ದರು

ರಾಜಕೀಯ

ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಕುಟುಂಬ ಆಧಾರಿತ ಪಕ್ಷ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ನಲ್ಲಿ (Congress) ಸೋನಿಯಾ ಗಾಂಧಿ (Soniya Gandhi), ರಾಹುಲ್ ಗಾಂಧಿ, ಪ್ರಿಯಾಕಾಂ ಗಾಂಧಿ (Rahul Gandhi) ಮನಸ್ಸು ಯಾರು ಗೆಲ್ಲುತ್ತಾರೆ ಅವರು ಸಿಎಂ ಆಗುತ್ತಾರೆ. ಇದು ಪ್ರಜಾಪಭುತ್ವದ ವ್ಯವಸ್ಥೆಗೆ ನಾಚಿಗೇಡಿನ ಸಂಗತಿ ಎಂದು

[ccc_my_favorite_select_button post_id="121658"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]