ಸೋನಿಯಾ ಗಾಂಧಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ..!

ನವದೆಹಲಿ: ಸಂಸತ್ ಅಧಿವೇಶನದಲ್ಲಿ ವಿಪಕ್ಷಗಳಿಂದ, ಅದರಲ್ಲಿಯೂ ಕಾಂಗ್ರೆಸ್ ಸದಸ್ಯರಿಂದ ಕಲಾಪಕ್ಕೆ ತೀವ್ರ ಅಡ್ಡಿ ಉಂಟಾಗುತ್ತಿರುವುದು ಪ್ರಧಾನಿ ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ರಾಜ್ಯಸಭೆ ಸದಸ್ಯರೂ ಆಗಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೆಗೌಡ (H.D. Deve Gowda); ಈ ಬಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರಿಗೆ ಪತ್ರ ಬರೆದಿದ್ದಾರೆ.

ಸಂಸತ್ತಿನ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ವಿರೋಧ ಪಕ್ಷಗಳು ಅದರಲ್ಲೂ ವಿಶೇಷವಾಗಿ ಕಾಂಗ್ರೆಸ್ ಸದಸ್ಯರು ತೋರಿಸುತ್ತಿರುವ ಅತಿರೇಕದ ವರ್ತನೆ, ಅಶಿಸ್ತಿನ ನಡವಳಿಕೆ ಬಗ್ಗೆ ಮಾಜಿ ಪ್ರಧಾನಿಗಳು ತೀವ್ರ ಆತಂಕ, ಕಳವಳ ವ್ಯಕ್ತಪಡಿಸಿದ್ದಾರೆ.

ಬಜೆಟ್ ಅಧಿವೇಶನದ ವೇಳೆ ಪ್ರತಿಪಕ್ಷಗಳ ಸದಸ್ಯರು ನಿರಂತರವಾಗಿ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದು, ಅದರಲ್ಲಿಯೂ ಕಾಂಗ್ರೆಸ್ ಸಂಸದರು ಸಂಸತ್ತಿನ ಒಳಗೆ ಹಾಗೂ ಸಂಸತ್ತಿನ ಆವರಣದಲ್ಲಿ ಘೋಷಣೆ ಕೂಗುವುದು, ಫಲಕ ಪ್ರದರ್ಶನ ಮಾಡುವುದು, ನಿರ್ದಿಷ್ಟವಾಗಿ ಹೆಸರು ಕೂಗುವುದು, ಧರಣಿ ಮತ್ತು ಕಲಾಪ ಸ್ಥಗಿತ ಆಗುವಂತೆ ಮಾಡುವುದು ಮಾಡುತ್ತಿದ್ದಾರೆ. ಇದು ಸಂಸತ್ತಿನ ಘನತೆಯನ್ನು ಕುಗ್ಗಿಸುತ್ತಿದೆ ಮತ್ತು ಸಂಸದೀಯ ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ಧಕ್ಕೆ ಉಂಟು ಮಾಡುತ್ತದೆ ಎಂದು ಮಾಜಿ ಪ್ರಧಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ನನ್ನ ರಾಜಕೀಯ ಜೀವನದ 90ರಷ್ಟು ಕಾಲವನ್ನು ಪ್ರತಿಪಕ್ಷದಲ್ಲಿಯೇ ಕಳೆದಿದ್ದೇನೆ

ತಮ್ಮ 65 ವರ್ಷಗಳ ಸುದೀರ್ಘ ಸಾರ್ವಜನಿಕ ಜೀವನವನ್ನು ಪತ್ರದಲ್ಲಿ ಉಲ್ಲೇಖಿಸಿರುವ ಮಾಜಿ ಪ್ರಧಾನಿಗಳು; ನನ್ನ ರಾಜಕೀಯ ಜೀವನದ ತೊಂಬತ್ತರಷ್ಟು ದೀರ್ಘಾವಧಿಯ ಕಾಲವನ್ನು ಪ್ರತಿಪಕ್ಷದಲ್ಲಿಯೇ ಕಳೆದಿದ್ದೇನೆ. ನೀವು ಕೂಡ ಹೆಚ್ಚು ಕಾಲ ವಿರೋಧ ಪಕ್ಷದಲ್ಲಿಯೇ ಇದ್ದೀರಿ. ಪ್ರತಿಪಕ್ಷದ ಹೊಣೆಗಾರಿಕೆ ಹಾಗೂ ಜವಾಬ್ದಾರಿಗಳ ಬಗ್ಗೆ ತಮಗೆ ಅರಿವಿದೆ. ವಿರೋಧ ಪಕ್ಷಗಳು ತಮ್ಮ ವಿರೋಧವನ್ನು ತೋರಿಸಬಹುದು, ಆದರೆ ಅದು ನಿಯಮಗಳು, ಸಂಪ್ರದಾಯಗಳು ಮತ್ತು ಘನತೆಗೆ ಧಕ್ಕೆ ತರುವಂತಿರಬಾರದು. ಆದರೆ, ಪ್ರಸಕ್ತ ಸಂದರ್ಭದಲ್ಲಿ ಪ್ರತಿಪಕ್ಷ ಸದಸ್ಯರ ವರ್ತನೆ ನನಗೆ ಬಹಳ ನೋವುಂಟು ಮಾಡಿದೆ. ಪ್ರತಿಪಕ್ಷದಲ್ಲಿ ಇದ್ದರೂ ಸಂಸತ್ತಿನ ಘನತೆ ಮತ್ತು ಸಂಪ್ರದಾಯಗಳನ್ನು ಕಾಪಾಡಿಕೊಳ್ಳಲು ಶ್ರಮಿಸಿದ್ದೇನೆ ಎಂದು ಮಾಜಿ ಪ್ರಧಾನಿಗಳು ಪತ್ರದ ಮೂಲಕ ಬೇಸರ ಹೇಳಿದ್ದಾರೆ.

ಪ್ರತಿಪಕ್ಷ ಸದಸ್ಯರು, ಅದರಲ್ಲಿಯೂ ತಮ್ಮ ಪಕ್ಷದ ಸದಸ್ಯರು ತಮ್ಮ ವರ್ತನೆಯನ್ನು ಸರಿಪಡಿಸಿಕೊಂಡು ಸಂಸದೀಯ ವ್ಯವಸ್ಥೆಯ ಪಾವಿತ್ರ್ಯತೆಯನ್ನು ಎತ್ತಿಹಿಡಿಯುತ್ತಾರೆ ಎಂದು ನಿರೀಕ್ಷಿಸಿದ್ದೇ. ಅದು ಆಗಲಿಲ್ಲ. ನಿಮ್ಮ ಸದಸ್ಯರು ಸಂಸತ್ತಿನ ಆವರಣದಲ್ಲಿ ಮತ್ತು ಸಂಸತ್ತಿನ ಒಳಗೆ ಪ್ರಚೋದನಾತ್ಮಕ ರೀತಿಯಲ್ಲಿ ವರ್ತಿಸಿ, ಸಂಸತ್ತಿನ ಕಲಾಪಕ್ಕೆ ಅಡ್ಡಿ ಮಾಡುತ್ತಿದ್ದಾರೆ. ಹೀಗಾಗಿ ತಮಗೆ ಪತ್ರ ಬರೆಯುವ ಸನ್ನಿವೇಶ ಸೃಷ್ಟಿಯಾಯಿತು ಎಂದು ಮಾಜಿ ಪ್ರಧಾನಿಗಳು ತಿಳಿಸಿದ್ದಾರೆ.

ಭಾರತೀಯ ಸಂಸದೀಯ ಪ್ರಜಾಪ್ರಭುತ್ವದ ಪರಂಪರೆಯ ಬಗ್ಗೆ ಪತ್ರದಲ್ಲಿ ದೇವೇಗೌಡರು ಒತ್ತಿ ಹೇಳಿದ್ದು; ಪಂಡಿತ್ ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್, ಬಿ.ಆರ್. ಅಂಬೇಡ್ಕರ್ ಮತ್ತು ಮೌಲಾನಾ ಅಬ್ದುಲ್ ಕಲಾಂ ಆಜಾದ್ ಮುಂತಾದವರು ಹಾಕಿಕೊಟ್ಟ ಬುನಾದಿ ಹಾಗೂ ಅವರ ಮಾರ್ಗದರ್ಶನದ ಮೇಲೆ ಪರಂಪರೆಯೂ ನಿರ್ಮಿತವಾಗಿದೆ. ನನ್ನ ಸುಂದೀರ್ಘ ಸಂಸದೀಯ ಅನುಭವದಲ್ಲಿ ಇತ್ತೀಚೆಗೆ ಕಂಡಂತಹ ಅವ್ಯವಸ್ಥೆ ಮತ್ತು ಅಡಚಣೆಯನ್ನು ನಾನು ಎಂದಿಗೂ ನೋಡಿಲ್ಲ. ನನ್ನ ಇಡೀ ರಾಜಕೀಯ ಜೀವನದಲ್ಲಿ ಸಂಸತ್ತಿನ ಪ್ರಚೋದನ್ಮಕವಾಗಿ ವರ್ತಿಸುವುದು, ಪ್ರತಿಭಟಿಸುವುದು, ಸದನದ ಬಾವಿಗೆ ಇಳಿದು ಕೂಗುವುದನ್ನು ಮಾಡಿಲ್ಲ. ಉತ್ತಮ ಸಂಸದೀಯ ಸಂಸ್ಕೃತಿಯನ್ನು ನಮ್ಮ ಪ್ರಜಾಪ್ರಭುತ್ವದ ಹಿರಿಯರು ನಮಗೆ ಕಲಿಸಿದ್ದಾರೆ ಎಂದು ದೇವೇಗೌಡರು ಪತ್ರದಲ್ಲಿ ಪ್ರತಿಪಾದಿಸಿದ್ದಾರೆ.

ವಿರೋಧ ಪಕ್ಷದ ನಾಯಕನ ಕರ್ತವ್ಯ ಸುಲಭವಲ್ಲ ಎಂಬುದನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಅವರ ಎದುರು ಬೆಟ್ಟದಷ್ಟು ಸವಾಲುಗಳು ಇರುತ್ತವೆ. ಜನರ ಸಂಕಷ್ಟಗಳ ಬಗ್ಗೆ ಕಾಲ ಕಾಲಕ್ಕೆ ಸರಕಾರದ ಗಮನಕ್ಕೆ ತರಬೇಕಾಗುತ್ತದೆ. ಹಾಗಿದ್ದರೂ ಪ್ರತಿಭಟನೆ ಮಾಡುವ ಸಂದರ್ಭ ಬಂದರೆ ಅದಕ್ಕೆ ತನ್ನದೇ ಆದ ರೀತಿನೀತಿ ಇರುತ್ತದೆ. ಅಂತಹ ಸಂದರ್ಭದಲ್ಲಿ ಪೀಠಕ್ಕೆ ಅಗೌರವ ತೋರುವ, ಅಪಚಾರ ಎಸಗುವ ಕೆಲಸ ಆಗಬಾರದು. ಸಂಸದೀಯ ನಿಯಮ, ಕಟ್ಟುಪಾಡುಗಳನ್ನು ಮೀರದೆ ಕಾರ್ಯ ನಿರ್ವಹಣೆ ಮಾಡುವುದರಲ್ಲಿ ವಿರೋಧ ಪಕ್ಷ ನಾಯಕನ ಯಶಸ್ಸು ಅಡಗಿದೆ ಎಂದು ನಾನು ನಂಬಿದ್ದೇನೆ. ನಾವು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸುವಾಗ ನಾವು ಸಂಸತ್ತಿನ ನಿಯಮಗಳು ಮತ್ತು ಸ್ಥಾಪಿತ ಕಾರ್ಯ ವಿಧಾನಗಳಿಗೆ ಬದ್ಧರಾಗಿರುತ್ತೇವೆ ಎಂದು ಹೇಳುತ್ತೇವೆ. ಅದಕ್ಕೆ ಎಲ್ಲರೂ ಬದ್ಧರಾಗಿ ವರ್ತಿಸಬೇಕು ಎಂದು ನಾನು ನಿಮ್ಮ ಗಮನಕ್ಕೆ ತರಲಿಸುತ್ತೇನೆ ಎಂದು ದೇವೇಗೌಡರು ಸೋನಿಯಾ ಗಾಂಧಿ ಅವರಿಗೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸಂಸತ್ತಿನ ಮೆಟ್ಟಿಲುಗಳ ಮೇಲೆ ಚಹಾ ಸೇವನೆ ಮಾಡುವುದು ಸರಿಯಾದ ನಡವಳಿಕೆ ಅಲ್ಲ. ಈ ಹಿಂದೆ ವಿರೋಧ ಪಕ್ಷಗಳು ರಾಷ್ಟ್ರೀಯ ಹಿತಾಸಕ್ತಿಯನ್ನು ಗೌರವಿಸಿ, ಸಂಯಮದಿಂದ ವರ್ತಿಸಿದ್ದವು. ಸಂಸತ್ತಿನ ಮೆಟ್ಟಿಲುಗಳ ಮೇಲೆ ಕುಳಿತು ಚಹಾ, ಬಿಸ್ಕತ್ತು, ಪಕೋಡಾ ತಿನ್ನುವುದು ಅತಿರೇಖದ ಕ್ರಮಗಳು. ಇವು ಅನುಚಿತ ಎಂದು ಗೌಡರು ಟೀಕಿಸಿದ್ದಾರೆ.

ನಾನು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸರ್ಕಾರವನ್ನು ಮುನ್ನೆಡೆಸಿದ್ದೇನೆ. ಆ ಸಂದರ್ಭದಲ್ಲಿ ವಿರೋಧ ಪಕ್ಷಗಳು ಸಂಸದೀಯ ಸದಾಚಾರ ಹಾಗೂ ಮೌಲ್ಯಗಳನ್ನು ಮೀರಿ ನಡೆದಿಲ್ಲ. ಅಂದಿನ ಸದಸ್ಯರು ರಾಷ್ಟ್ರೀಯ ಹಿತಾಸಕ್ತಿಗೆ ಅನುಗುಣವಾಗಿ ಸಂಯಮದಿಂದ ಕಾರ್ಯನಿರ್ವಹಿಸಿದ್ದಾರೆ. ಅವರು ಪ್ರತಿಭಟಿಸಿದಾಗಲೂ ಅವರು ಎಂದೂ ಸಂಸತ್ತಿನ ಪ್ರವೇಶ ದ್ವಾರವನ್ನು ನಿರ್ಬಂಧಿಸಲಿಲ್ಲ. ಇವತ್ತು ಅದಕ್ಕೆ ವಿರುದ್ಧವಾದ ಸನ್ನಿವೇಶ ಸೃಷ್ಟಿಯಾಗಿದೆ. ಇದು ಸಂಸದೀಯ ಹೆಗ್ಗಳಿಕೆಗೆ ಅಪಾರ ಹಾನಿ ಉಂಟು ಮಾಡುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ನನ್ನ ಕಾಳಜಿ ಮತ್ತು ನನ್ನ ಉದ್ದೇಶವನ್ನು ನೀವು ಅರ್ಥಮಾಡಿಕೊಳ್ಳುತ್ತೀರಿ ಎಂದು ನನಗೆ ನಂಬಿಕೆಯಿದೆ. ನಾನು ಯಾರನ್ನೂ ಲಘುವಾಗಿ ನೋಡುವ ಅಥವಾ ಯಾರ ಉತ್ಸಾಹವನ್ನು ಕಡಿಮೆ ಮಾಡುವ ಉದ್ದೇಶ ಹೊಂದಿಲ್ಲ. ಆದರೆ, ವಿರೋಧ ಪಕ್ಷದ ಹಿರಿಯ ಸ್ಥಾನದಲ್ಲಿರುವ ನೀವು, ನಿಮ್ಮ ರಾಜಕೀಯ ಅನುಭವ ಮತ್ತು ಪ್ರಬುದ್ಧತೆಯನ್ನು ಬಳಸಿಕೊಂಡು ನಿಮ್ಮ ಪಕ್ಷದ ನಾಯಕರು ಮತ್ತು ಇತರರೊಂದಿಗೆ ಮಾತನಾಡಿ ಸರಿಪಡಿಸಬೇಕು ಒತ್ತಾಯಿಸುತ್ತೇನೆ ಎಂದು ದೇವೇಗೌಡರು ಸೋನಿಯಾ ಗಾಂಧಿ ಅವರನ್ನು ಆಗ್ರಹಿಸಿದ್ದಾರೆ.

ಪ್ರತಿಭಟನೆಯನ್ನು ನಾನು ವಿರೋಧಿಸುವುದಿಲ್ಲ. ವಿರೋಧ ಪಕ್ಷವು ಎಷ್ಟು ಬೇಕಾದರೂ ಪ್ರತಿಭಟಿಸಬಹುದು. ಆದರೆ ಆ ಪ್ರತಿಭಟನೆಯು 75 ವರ್ಷಗಳ ವೈಭವಯುತ ವರ್ಷಗಳಲ್ಲಿ ನಾವು ಒಟ್ಟಾಗಿ ನಿರ್ಮಿಸಿಕೊಂಡಿದ್ದನ್ನು ಕೆಡವುವ ರೀತಿಯಲ್ಲಿ ಇರಬಾರದು ಎಂದು ಮಾಜಿ ಪ್ರಧಾನಿಗಳು ಪ್ರತಿಪಾದಿಸಿದ್ದಾರೆ.

ರಾಜಕೀಯ

ಸೋನಿಯಾ ಗಾಂಧಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ..!

ಸೋನಿಯಾ ಗಾಂಧಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ..!

ಸಂಸತ್ ಅಧಿವೇಶನದಲ್ಲಿ ವಿಪಕ್ಷಗಳಿಂದ, ಅದರಲ್ಲಿಯೂ ಕಾಂಗ್ರೆಸ್ ಸದಸ್ಯರಿಂದ ಕಲಾಪಕ್ಕೆ ತೀವ್ರ ಅಡ್ಡಿ ಉಂಟಾಗುತ್ತಿರುವುದು ಪ್ರಧಾನಿ ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ರಾಜ್ಯಸಭೆ ಸದಸ್ಯರೂ ಆಗಿರುವ ಮಾಜಿ ಪ್ರಧಾನಿ

[ccc_my_favorite_select_button post_id="120266"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!