Provisional schedule for SSLC and Second PUC exams 2026 announced

ಸಿಸಿ ಟಿವಿ ಕ್ಯಾಮೆರಾ ಕಣ್ಗಾವಲಿನಲ್ಲಿ ನಾಳೆಯಿಂದ SSLC ಪರೀಕ್ಷೆ -01: ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

ಬೆಂ.ಗ್ರಾ.ಜಿಲ್ಲೆ: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು (SSLC Exams) ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ 01:45 ಗಂಟೆಯ ವರೆಗೆ ನಡೆಯಲಿದ್ದು ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.

ಎಸ್.ಎಸ್.ಎಲ್.ಸಿ ಪರೀಕ್ಷೆ-01 ಕ್ಕೆ ನಿಗದಿಪಡಿಸಿರುವ ಪರೀಕ್ಷಾ ಕೇಂದ್ರಗಳು ದೇವನಹಳ್ಳಿ ತಾಲ್ಲೂಕಿನಲ್ಲಿ 13, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 14, ಹೊಸಕೋಟೆ ತಾಲ್ಲೂಕಿನಲ್ಲಿ 12, ನೆಲಮಂಗಲ ತಾಲ್ಲೂಕಿನಲ್ಲಿ 13 ಸೇರಿ ಒಟ್ಟು 52 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲಾಗುತ್ತಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಕ್ಕೆ ನೋಂದಣಿ ವಿವರ ನೋಡುವುದಾದರೆ ಗಂಡು ಮಕ್ಕಳ ಸಂಖ್ಯೆ 7070, ಹೆಣ್ಣು ಮಕ್ಕಳ ಸಂಖ್ಯೆ 7244 ಸೇರಿ ಒಟ್ಟು 14,314 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ.

ಅದರಲ್ಲಿ ಮೊದಲ(ಪ್ರಥಮ) ಬಾರಿ ಪರೀಕ್ಷೆ ಬರೆಯುವವರ ಸಂಖ್ಯೆ 13,418, ಪುನರಾವರ್ತಿತ ಅಭ್ಯರ್ಥಿಗಳು 896 ಮಂದಿ ಪರೀಕ್ಷೆಗೆ ಹಾಜರಾಗಲಿದ್ದಾರೆ.

ಪರೀಕ್ಷೆಗಳು ಪಾರದರ್ಶಕತೆ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಕರ್ನಾಟಕ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯಿಂದ ಮತ್ತು ಜಿಲ್ಲಾಡಳಿತದಿಂದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಜಿಲ್ಲೆಯ ನಾಲ್ಕು ತಾಲ್ಲೂಕಿನ 52 ಪರೀಕ್ಷಾ ಕೇಂದ್ರಗಳ ಕೊಠಡಿಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿ, ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ. ಪರೀಕ್ಷಾ ಕೇಂದ್ರ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

“ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಸುಗಮವಾಗಿ, ಸುಲಲಿತವಾಗಿ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಯಾವುದೇ ಭಯ-ಭೀತಿ ಇಲ್ಲದೇ ಧೈರ್ಯದಿಂದ ಪರೀಕ್ಷೆ ಎದರುರಿಸಬೇಕು. ಪರೀಕ್ಷೆ ಬರೆಯಲಿರುವ ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಿ, ಒತ್ತಡ ರಹಿತವಾಗಿ ಪರೀಕ್ಷೆಯನ್ನು ಬರೆಯಲು ಪೂರಕವಾದ ವಾತಾವರಣವನ್ನು ಪೋಷಕರು ನೀಡಬೇಕೆಂದು ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕೋರಿದ್ದಾರೆ.

ರಾಜಕೀಯ

ಸೋನಿಯಾ ಗಾಂಧಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ..!

ಸೋನಿಯಾ ಗಾಂಧಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ..!

ಸಂಸತ್ ಅಧಿವೇಶನದಲ್ಲಿ ವಿಪಕ್ಷಗಳಿಂದ, ಅದರಲ್ಲಿಯೂ ಕಾಂಗ್ರೆಸ್ ಸದಸ್ಯರಿಂದ ಕಲಾಪಕ್ಕೆ ತೀವ್ರ ಅಡ್ಡಿ ಉಂಟಾಗುತ್ತಿರುವುದು ಪ್ರಧಾನಿ ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ರಾಜ್ಯಸಭೆ ಸದಸ್ಯರೂ ಆಗಿರುವ ಮಾಜಿ ಪ್ರಧಾನಿ

[ccc_my_favorite_select_button post_id="120266"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!